ಕನ್ನಡ ವಿರೋಧಿ ಕಾಂಗ್ರೆಸ್ ಸರ್ಕಾರ: ಮುತಾಲಿಕ ಆಕ್ರೋಶ

KannadaprabhaNewsNetwork |  
Published : Dec 31, 2023, 01:30 AM IST
30ಸಿಕೆಡಿ4 | Kannada Prabha

ಸಾರಾಂಶ

ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು ಎಂದು ಪ್ರಮೋದ ಮುತಾಲಿಕ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಚಿಕ್ಕೋಡಿ

ಕಾಂಗ್ರೆಸ್ ಸರ್ಕಾರ ಕನ್ನಡ ವಿರೋಧಿ ಸರ್ಕಾರ ಕನ್ನಡ ಬೋರ್ಡ್ ಹಾಕಿ ಅಂತ ಕನ್ನಡಿಗರು ಹೋರಾಟ ಮಾಡುವ ಅವಶ್ಯಕತೆ ಇಲ ಎಂದು ಚಿಕ್ಕೋಡಿಯಲ್ಲಿ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಕರ್ನಾಟಕದಲ್ಲಿ ಕನ್ನಡ ಕಡ್ಡಾಯವಾಗುವಂತೆ ನೋಡಿಕೊಳ್ಳಬೇಕು. ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ದ್ರೋಹ ಮಾಡಿದೆ. ನಾನು ಕಾಂಗ್ರೆಸ್ ಸರ್ಕಾರವನ್ನು ಖಂಡಿಸುತ್ತೇನೆ. ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಯಾವುದೇ ಷರತ್ತ ಇಲ್ಲದೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಶ್ರೀರಂಗಪಟ್ಟಣದಲ್ಲಿ ಕಲ್ಲಡ್ಕ ಪ್ರಭಾಕರ್ ಬಟ್ಟರು ಯಾವುದೇ ಕಾನೂನು ಬಾಹಿರವಾಗಿ ಮಾತನಾಡಿಲ್ಲ. ವಾಸ್ತವಿಕವಾದದನ್ನೇ ಅವರು ಹೇಳಿದ್ದಾರೆ. ಅದನ್ನೆ ವಿವಾದಾತ್ಮಕ ಎಂದು ಬಿಂಬಿಸಿ ಪ್ರಕರಣ ದಾಖಲಿಸಿದ್ದು ತಪ್ಪು. ವಾಸ್ತವಿಕವನ್ನು ಒಪ್ಪಿಕೊಳ್ಳಬೇಕು. ಸುಮ್ಮನೆ ಕಾಂಗ್ರೆಸ್‌ ಸರ್ಕಾರ ಇದೆ ಎಂದು ಹಿಂದು ನಾಯಕರ ಮೇರೆ ಕೇಸ್ ಹಾಕುವುದು ಸರಿ ಇಲ್ಲ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲಿನ ಪ್ರಕರಣವನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು.

ವಿಜಯಬಾಸ್ಕರ ಇಟಗೋನಿ, ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ, ಬೆಳಗಾವಿ ಜಿಲ್ಲಾ ಪ್ರಮುಖ ಬಸವರಾಜ ಕಲ್ಯಾಣಿ, ವಿಭಾಗ ಸಂಘಟನಾ ಕಾರ್ಯದರ್ಶಿ ಶಿವರಾಜ ಅಂಬಾರಿ,ಸುಂದರೇಶ ನರೇಗಲ್, ರಾಹುಲ್ ಅಂಕಲೆ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ