ದಾಖಲೆಯ ಹೆಸರಿನಲ್ಲಿ ಜನ ವಿರೋಧಿ ಬಜೆಟ್‌

KannadaprabhaNewsNetwork |  
Published : Mar 09, 2025, 01:50 AM IST
ಜನ ವಿರೋಧಿ ಬಜೆಟ್‌ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನುನಡೆಯನ್ನು ಖಂಡಿಸಿಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಶಿವಮೊಗ್ಗ: ರಾಜ್ಯ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್ ಜನ ವಿರೋಧಿಯಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಶೀನಪ್ಪಶೆಟ್ಟಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಖಂಡನೆ ವ್ಯಕ್ತಪಡಿಸಲಾಯಿತು.

ಶಿವಮೊಗ್ಗ: ರಾಜ್ಯ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್ ಜನ ವಿರೋಧಿಯಾಗಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಇಲ್ಲಿನ ಶೀನಪ್ಪಶೆಟ್ಟಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಖಂಡನೆ ವ್ಯಕ್ತಪಡಿಸಲಾಯಿತು.

ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದು 75 ವರ್ಷಗಳಲ್ಲಿ 55 ವರ್ಷ ವಿರೋಧ ಪಕ್ಷದಲ್ಲಿದ್ದು ಬಿಜೆಪಿ ಜನಪರ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಆದರೆ ಸಿದ್ದರಾಮಯ್ಯ ಅವರು ದಾಖಲೆಯ 16 ಬಾರಿ ಬಜೆಟ್ ಮಂಡಿಸಿಯೂ ಈ ಬಾರಿ ಅತಿ ಹೆಚ್ಚು ಮೊತ್ತದ ಬಜೆಟ್ ಮಂಡಿಸಿ ದಾಖಲೆ ಮಾಡಿದರೂ ಹಿಂದೂಗಳಿಗೆ ಅದರಲ್ಲಿಯೂ ಹಿಂದುಳಿದವರಿಗೆ ಏನೂ ಪ್ರಯೋಜನವಿಲ್ಲವೆಂದು ಟೀಕಿಸಿದರು.

ಬಡಜನರ ದುಡಿಮೆಯ ಹಣ ಕಿತ್ತುಕೊಂಡು ಬಜೆಟ್ ಮಂಡನೆ ಮಾಡಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲಿಯೂ ಬಡವರ ಆದಾಯವನ್ನು ಕಿತ್ತುಕೊಂಡೇ ಸರ್ಕಾರ ನಡೆಸುವ ಪ್ರಯತ್ನ ಬಜೆಟ್‌ನಲ್ಲಿ ಕಾಣುತ್ತೇವೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ಶುಲ್ಕ ಶೇ.300 ರಷ್ಟು ಹೆಚ್ಚಳ. ಎಲ್ಲರ ಮನೆಗಳಿಗೆ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ, ರೈತರು ಅಕ್ರಮ -ಸಕ್ರಮ ಪಂಪ್ ಸೆಟ್‌ಗಳ ನೋಂದಣಿಗೆ 20 ಸಾವಿರ ರು. ನೀಡಿದರೆ ಸಾಕಾಗಿತ್ತು. ಈಗ ಅದಕ್ಕೆ 2- 3 ಲಕ್ಷ ರು. ತೆರಬೇಕಾಗದೆ. ಹೀಗಾದರೆ ಬಜೆಟ್ ಗಾತ್ರ 4 ಲಕ್ಷ ಕೋಟಿನೂ ಆಗುತ್ತದೆ. ಅಥವಾ 5 ಲಕ್ಷ ಕೋಟಿಯೂ ಆಗುತ್ತದೆ ಎಂದು ಲೇವಡಿ ಮಾಡಿದ ಅವರು, ಸಿದ್ದರಾಮಯ್ಯ ಅವರು, ದಾಖಲೆಯ ಹೆಸರಿನಲ್ಲಿ ಜನ ವಿರೋಧಿ ಬಜೆಟ್‌ ಮಂಡಿಸಿದ್ದಾರೆ ಎಂದು ಟೀಕಿಸಿದರು.

ಯಾವುದೇ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಬಜೆಟ್ ಗಾತ್ರ ಹೆಚ್ಚಾಗಿಲ್ಲ. ಒಂದು ಕೈಯಲ್ಲಿ ಕೊಟ್ಟ ಹಾಗೆ ಮಾಡಿ ಇನ್ನೊಂದು ಕೈಯಲ್ಲಿ ಕಸಿದುಕೊಂಡಿರುವ ಸಿದ್ದರಾಮಯ್ಯ ಅವರ ಬಜೆಟ್ ಸಾಧನೆ ಶೂನ್ಯ ಎಂದರು.

ಹಲಾಲ್‌, ಹಲ್ಕಟ್‌ ಬಜೆಟ್‌:

ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಗ್ಯಾರಂಟಿಯನ್ನೇ ಅಭಿವೃದ್ಧಿಯನ್ನಾಗಿಸುವ ಮನಃಸ್ಥಿತಿಯನ್ನು ಕಾಂಗ್ರೆಸ್ ಹೊಂದಿದೆ. ಅಭಿವೃದ್ಧಿ ಯೋಜನೆಗಳೇ ಗ್ಯಾರಂಟಿ ಆಗಬೇಕು. ಅದು ಈ ಬಜೆಟ್‌ನಲ್ಲಿ ಕಂಡಿಲ್ಲ. ಇದೊಂದು ಹಿಂದುತ್ವ ವಿರೋಧಿ ಬಜೆಟ್ ಆಗಿದ್ದು, ಹಲಾಲ್ ಬಜೆಟ್ ತರುವುದರ ಮೂಲಕ ಹಲ್ಕಟ್ ಬಜೆಟ್ ಮಂಡನೆಯಾಗಿದೆ ಎಂದು ಕುಟುಕಿಯಾಡಿದರು.

ಸಿಎಂ ಸಿದ್ದರಾಮಯ್ಯ ಅವರು ಮುಸ್ಲಿಂ ಓಲೈಕೆ ಮಾಡಲು 4500 ಕೋಟಿ ರು.ಗೂ ಅಧಿಕ ಅನುದಾನವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿದ್ದಾರೆ. ಅವರಿಗೆ ರಾಜ್ಯದಲ್ಲಿ ಮುಜರಾಯಿ ಇಲಾಖೆ ಇದೇ ಎನ್ನುವುದು ನೆನಪಿದೆಯೋ ಇಲ್ಲವೋ ಗೊತ್ತಿಲ್ಲ. ಶಿವಮೊಗ್ಗದ ಅರಕೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಈ ಹಿಂದೆ 2 ಕೋಟಿ ರು. ನೀಡಲಾಗಿತ್ತು. ಅದನ್ನೂ ಸರ್ಕಾರ ವಾಪಸ್ ತೆಗೆದುಕೊಂಡಿದೆ. ಬಿಜೆಪಿ ಸರ್ಕಾರದಲ್ಲಿ ಹಿಂದೂಗಳ ದೇವಸ್ಥಾನದ ಅಭಿವೃದ್ಧಿಗೆ 15 ಕೋಟಿ ರು. ಬಿಡುಗಡೆಯಾಗಿ ಅದರಲ್ಲಿ 7.5 ಕೋಟಿ ರು. ವೆಚ್ಚವಾಗಿದೆ. ಬಾಕಿ ಉಳಿದ ಹಣ ಕೇಳಿದರೆ ಸರ್ಕಾರದಲ್ಲಿ ಹಣವಿಲ್ಲ ಎಂಬ ಆದೇಶ ಬರುತ್ತದೆ ಎಂದು ಕಿಡಿಕಾರಿದರು.

ಬಿ.ಎಸ್.ಯಡಿಯೂರಪ್ಪ ಅವಧಿಯ ಆಡಳಿತ ಕೃಷ್ಣ ದೇವರಾಯ ಕಾಲದ ಆಡಳಿತದಂತಿತ್ತು. ಸಿದ್ದರಾಮಯ್ಯ ಅವರ ಈ 16ನೇ ಬಜೆಟ್ ಅವರ ಕೊನೆಯ ಬಜೆಟ್ ಆಗಲಿದೆ ಎಂದು ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಮುಖಂಡರಾದ ಎಸ್.ದತ್ತಾತ್ರಿ, ಮಾಲತೇಶ್, ಶಿವರಾಜ್, ಅನಿತಾ ರವಿಶಂಕರ್, ಹರಿಕೃಷ್ಣ, ಮೋಹನ್ ರೆಡ್ಡಿ, ವಿನ್ಸೆಂಟ್ ರೋಡ್ರಿಗಸ್ ಮೊದಲಾದವರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ