ಹೊಸದುರ್ಗ: ಚಿತ್ರದುರ್ಗದ ಜಗದ್ಗರು ಮುರುಘರಾಜೇಂದ್ರ ಬೃಹನ್ಮಠದಿಂದ ಇಂದು ಅನುಭಾವ ಶ್ರಾವಣ ಕಾರ್ಯಕ್ರಮ ತಾಲೂಕಿನ ಗುಡ್ಡದ ನೇರಲಕೆರೆ ಗ್ರಾಮದಲ್ಲಿ ಏರ್ಪಡಿಸಿಲಾಗಿದೆ. ಈ ಸಂಬಂಧ ಬೆಳಗ್ಗೆ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಆಸ್ಪತ್ರೆಯ ತಜ್ಞ ವೈದ್ಯರುಗಳಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಸಂಜೆ 5-30ಕ್ಕೆ ಗ್ರಾಮದಲ್ಲಿ ಸಸಿ ನೆಡುವ ಕಾರ್ಯಕ್ರಮ ನಡೆಯಲಿದೆ. ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುರುಘರಾಜೇಂದ್ರ ಬೃಹನ್ಮಠದ ಆಡಳಿತ ಮಂಡಳಿಯ ಸದಸ್ಯ ಡಾ. ಬಸವಕುಮಾರಸ್ವಾಮಿ, ಕುಂಚಿಟಿಗ ಸಂಸ್ಥಾನ ಮಠದ ಡಾ.ಶಾಂತವೀರ ಸ್ವಾಮೀಜಿ ಹಾಗೂ ಇನ್ನುಳಿದ ಮಹಾಸ್ವಾಮಿಗಳವರ ಸಮ್ಮುಖದಲ್ಲಿ ಶಿವಾನುಭವಗೋಷ್ಠಿ ಜರುಗಲಿದೆ. ಜಯದೇವ ಜಗದ್ಗುರು ಕುರಿತು ನಿವೃತ್ತ ಪ್ರಾಚಾರ್ಯ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ಉಪನ್ಯಾಸ ನೀಡುವರು.