ಎಪಿಜೆ ಅಬ್ದುಲ್ ಕಲಾಂರವರು ಒಂದು ದೊಡ್ಡ ಶಕ್ತಿ

KannadaprabhaNewsNetwork |  
Published : Sep 18, 2025, 01:10 AM IST
17ಎಚ್ಎಸ್ಎನ್7 :  | Kannada Prabha

ಸಾರಾಂಶ

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಪ್ರಥಮ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಕಲಾಂರವರ ಜೀವನಶೈಲಿಯು ಬಹಳ ಸರಳವಾಗಿತ್ತು ಹಾಗೂ ಎಷ್ಟು ಬಡ ವಿದ್ಯಾರ್ಥಿಗಳಿಗೆ ಜೀವನ ಕಲ್ಪಿಸಿ ಕೊಟ್ಟಂತ ಮಹಾತ್ಮ, ಇಂದು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರವರ ಹೆಸರನ್ನು ಅನುಸರಿಸಿ ನಮ್ಮ ಚನ್ನರಾಯಪಟ್ಟಣದಲ್ಲಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ಸಂಸ್ಥೆಯನ್ನು ಸ್ಥಾಪಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಪ್ರಥಮ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚೇರ್ಮನ್ ಭರತ್ ಕುಮಾರ್ ಎಚ್.ಜಿ, ಡಾ. ಎ.ಪಿ.ಜೆ ಅಬ್ದುಲ್ ಕಲಾಂರವರು ನಮ್ಮ ದೇಶದ ಆಸ್ತಿ. ಎ.ಪಿ.ಜೆ ಅಬ್ದುಲ್ ಕಲಾಂರವರು ಯಾವುದೇ ಜಾತಿ, ಭೇದ ಭಾವವಿಲ್ಲದೆ ಸರ್ವ ಧರ್ಮವನ್ನು ಸಮನ್ವಯವಾಗಿ ಗೌರವಿಸುತ್ತಿದ್ದ ಮಹಾನ್ ವ್ಯಕ್ತಿ. ಕಲಾಂರವರ ಜೀವನಶೈಲಿಯು ಬಹಳ ಸರಳವಾಗಿತ್ತು ಹಾಗೂ ಎಷ್ಟು ಬಡ ವಿದ್ಯಾರ್ಥಿಗಳಿಗೆ ಜೀವನ ಕಲ್ಪಿಸಿ ಕೊಟ್ಟಂತ ಮಹಾತ್ಮ, ಇಂದು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರವರ ಹೆಸರನ್ನು ಅನುಸರಿಸಿ ನಮ್ಮ ಚನ್ನರಾಯಪಟ್ಟಣದಲ್ಲಿ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ಸಂಸ್ಥೆಯನ್ನು ಸ್ಥಾಪಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು.

ಈ ಸಂಸ್ಥೆಯ ಸರ್ವ ಸದಸ್ಯರು ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಅವರ ತತ್ವಗಳನ್ನು ಅನುಸರಿಸಿ ಸಂಸ್ಥೆ ವತಿಯಿಂದ ಎ.ಪಿ.ಜೆ ಅಬ್ದುಲ್ ಕಲಾಂರವರ ಹೆಸರಿಗೆ ಯಾವುದೇ ಕಪ್ಪುಚುಕ್ಕಿ ಬಾರದಂತೆ ನೋಡಿಕೊಳ್ಳಬೇಕು ಹಾಗೂ ಹೆಚ್ಚು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ಸಮಾಜಕ್ಕೆ ಉತ್ತಮ ಸೇವೆಯನ್ನು ಸಲ್ಲಿಸಬೇಕಾಗಿ ಸಲಹೆ ನೀಡಿದರು. ಡಾ. ಎ.ಪಿ.ಜೆ ಅಬ್ದುಲ್ ಕಲಾಂ ರವರ ಭಾವಚಿತ್ರಕ್ಕೆ ಪುಷ್ಪನಮನ ಮಾಡುವುದರ ಮೂಲಕ ಹಾಗೂ ನಾಮಫಲಕ ಉದ್ಘಾಟನೆ ಮಾಡುವುದರ ಮೂಲಕ ಸಂಸ್ಥೆಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಡಾ. ಭವ್ಯ ಸುನಿಲ್, ಡಾ. ಎ.ಪಿ.ಜೆ ಅಬ್ದುಲ್ ಕಲಾಂರವರು ಒಂದು ದೊಡ್ಡ ಶಕ್ತಿ. ಇಂದು ಅವರ ಹೆಸರಿನಲ್ಲಿ ಸಂಸ್ಥೆಯನ್ನು ಸ್ಥಾಪಿಸುತ್ತಿರುವುದು ಖುಷಿಯ ವಿಚಾರ. ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದು ಈ ಶಿಬಿರದಲ್ಲಿ ಮಹಿಳೆಯರಿಗೆ ವಿಶೇಷವಾಗಿ ಕ್ಯಾನ್ಸರ್‌ ಸಂಬಂಧಿತ ಕಾಯಿಲೆಯ ಗುಣಲಕ್ಷಣಗಳು ಹಾಗೂ ಕ್ಯಾನ್ಸರ್ ಕಾಯಿಲೆ ತಡೆಗಟ್ಟುವಿಕೆ ಮತ್ತು ಮಹಿಳೆಯರಲ್ಲಿ ಆಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಮತ್ತು ಬಂಜೆತನ ನಿವಾರಣೆಯ ಬಗ್ಗೆ ಮಹಿಳೆಯರಿಗೆ ವಿಶೇಷ ಮಾಹಿತಿ ನೀಡಿದರು ಹಾಗೂ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಮುನಾವರ್‌ ಪಾಷಾ ಮಾತನಾಡಿ, ಇಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ತಾಲೂಕು ಘಟಕ ಚನ್ನರಾಯಪಟ್ಟಣ ಇವರ ಸಹಯೋಗದೊಂದಿಗೆ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಫೌಂಡೇಶನ್ ಸಂಸ್ಥೆಯನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಂಡು ಹೊರದೇಶದಲ್ಲಿ ವೈದ್ಯಕೀಯ ವಿದ್ಯಾಭ್ಯಾಸವನ್ನು ಮುಗಿಸಿರುವ ಊರಿನ ೨ ವಿದ್ಯಾರ್ಥಿಗಳಾದ ಸುನೈನಾ, ಮುಯಿಝ ಅವರನ್ನು ಸನ್ಮಾನಿಸಲಾಯಿತು ಹಾಗೂ ಸ್ವಯಂ ಪ್ರೇರಿತ ರಕ್ತ ಕೇಂದ್ರ ಚನ್ನರಾಯಪಟ್ಟಣ ಮತ್ತು ನಗರದ ವಿನಾಯಕ ಸ್ಪರ್ಶ ಆಸ್ಪತ್ರೆ ಹಾಗೂ ಶಿವ್ಯ ಆಸ್ಪತ್ರೆ ಹಾಸನ ಇವರ ವತಿಯಿಂದ ನುರಿತ ವೈದ್ಯರಿಂದ ಆರೋಗ್ಯ ಶಿಬಿರದಲ್ಲಿ ಬಿ.ಪಿ ಶುಗರ್‌, ಹೃದಯ ತಪಾಸಣೆ, ಕಣ್ಣಿನ ತಪಾಸಣೆ, ಮಕ್ಕಳ ವೈದ್ಯರು ಆದ ಡಾ. ಪವನ್ ಹಾಗೂ ಮೂಳೆ ವೈದ್ಯರು ಆದ ಡಾ. ಲೋಕೇಶ್ ಮತ್ತು ಫಿಜಿಷಿಯನ್ ಹಾಗೂ ದಂತ ತಜ್ಞರು ಆದ ಡಾ. ಅಸ್ಮಾ ರೂಮನ್, ಮತ್ತು ಇತರೆ ಕಾಯಿಲೆಗಳಿಗೆ ವೈದ್ಯಕೀಯ ಸೇವೆಯ ವ್ಯವಸ್ಥೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಮಾರು ೨೮೩ಕ್ಕೂ ಹೆಚ್ಚು ಸಾರ್ವಜನಿಕರು ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಜಬೀಉಲ್ಲಾ ಬೇಗ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಇದೇ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕ್ಷರಾದ ಕವಿತಾ ರಾಜು, ಪುರಸಭಾ ಸದಸ್ಯರಾದ ಫರ್ಹ ಅನ್ನು ಮತ್ತು ಸಂಸ್ಥೆಯ ಪದಾಧಿಕಾರಿಗಳಾದ ಚಂದ್‌ಪಾಷಾ, ಅಪ್ಸರ್ ಪಾಷಾ, ಅನ್ನು, ಶಮೀಲ್ ಪಾಶ, ತಂಜಿಮ್, ಸುಹೀಲ್ ಪಾಶ, ಅಮ್ಜದ್ ಖಾನ್, ನಾಜಿಮ್ ಪಾಷಾ, ಜಮೀಲ್, ಜಾವೀದ್ ಪಾಶ, ಸೈಯದ್ ಅನ್ಸರ್, ಹಮೀದ್, ಮುಹೀದ್ ಮತ್ತು ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ