ಎಲ್ಲರೂ ಒಪ್ಪುವ ಸಜ್ಜನಿಕೆಯ ವ್ಯಕ್ತಿತ್ವ ಅಪ್ಪಣ್ಣ ಹೆಗ್ಡೆ: ಡಾ.ಎಂ.ಮೋಹನ್ ಆಳ್ವ

KannadaprabhaNewsNetwork |  
Published : Dec 03, 2024, 12:32 AM IST
ಕುಂದಾಪುರ ಸಮೀಪದ ಬಸ್ರೂರು ಶಾರದಾ ಕಾಲೇಜಿನಲ್ಲಿ ಶನಿವಾರ ಸಂಜೆ ನಡೆದ ಆಳ್ವಾಸ್ ಸಾಂಸ್ಕೃತಿಕ ಲೋಕ ಕಾರ್ಯಕ್ರಮದಲ್ಲಿ ಡಾ.ಎಂ.ಮೋಹನ್ ಆಳ್ವ ಮಾತನಾಡಿದರು. | Kannada Prabha

ಸಾರಾಂಶ

ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಆವರಣದಲ್ಲಿ ಆಳ್ವಾಸ್ ಸಾಂಸ್ಕೃತಿಕ ಲೋಕ ಕಾರ್ಯಕ್ರಮ ನಡೆಯಿತು.

ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಆವರಣದಲ್ಲಿ ಆಳ್ವಾಸ್ ಸಾಂಸ್ಕೃತಿಕ ಲೋಕ

ಕನ್ನಡಪ್ರಭ ವಾರ್ತೆ ಕುಂದಾಪುರಸಮಾಜದ ಎಲ್ಲರೂ ಒಪ್ಪುವಂತಹ ಸಜ್ಜನಿಕೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬರುವುದು ಅಪರೂಪದ ಕೆಲಸ. ಈ ವ್ಯಕ್ತಿತ್ವವನ್ನು ಸುದೀರ್ಘ ಕಾಲ ಶ್ರದ್ಧೆಯಿಂದ ಪಾಲಿಸಿಕೊಂಡು ಬಂದಿರುವ ಅಪ್ಪಣ್ಣ ಹೆಗ್ಡೆಯವರದ್ದು ಬಣ್ಣಿಸುವ ಪದಗಳ ಹೂರಣ ಎಂದು ಮೂಡುಬಿದಿರೆ ಆಳ್ವಾಸ್ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಹೇಳಿದರು.ಶನಿವಾರ ಸಂಜೆ ಬಸ್ರೂರಿನ ಶ್ರೀ ಶಾರದಾ ಕಾಲೇಜಿನ ಆವರಣದಲ್ಲಿ ನಡೆದ ಆಳ್ವಾಸ್ ಸಾಂಸ್ಕೃತಿಕ ಲೋಕ ಕಾರ್ಯಕ್ರಮದಲ್ಲಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಜಿ.ಶಂಕ‌ರ್ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕ ಡಾ.ಜಿ.ಶಂಕರ್ ಉದ್ಘಾಟಿಸಿ, ಸಾಮಾಜಿಕ, ಧಾರ್ಮಿಕ. ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಅಪಾರ ಕೊಡುಗೆ ಸಲ್ಲಿಸಿರುವ ಬಸ್ರೂರು ಅಪ್ಪಣ್ಣ ಹೆಗ್ಡೆಯವರದು ಅಪರೂಪದ ವ್ಯಕ್ತಿತ್ವ. ಜಾತಿ, ಧರ್ಮಗಳನ್ನು ಮೀರಿದ ವ್ಯಕ್ತಿ ಎಂದರು.

ಮುಂಬೈ ಉದ್ಯಮಿ ಎನ್.ಟಿ.ಪೂಜಾರಿ, ಬಸ್ರೂರು ಅಪ್ಪಣ್ಣ ಹೆಗ್ಡೆ 90 ರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು.

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಸ್ರೂರು ಅಪ್ಪಣ್ಣ ಹೆಗ್ಡೆ, ಕೋಟ ಗೀತಾನಂದ ಫೌಂಡೇಶನ್ ಟ್ರಸ್ಟ್ ಪ್ರವರ್ತಕ ಆನಂದ ಸಿ. ಕುಂದರ್, ಬೆಂಗಳೂರು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಬಿ.ಉದಯ್‌ಕುಮಾರ ಹೆಗ್ಡೆ, ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನ ಅಧ್ಯಕ್ಷ ರಾಮ್‌ಕಿಶನ್ ಹೆಗ್ಡೆ ಇದ್ದರು.

ಬಸ್ರೂರು ಅಪ್ಪಣ್ಣ ಹೆಗ್ಡೆ ಜನ್ಮದಿನೋತ್ಸವ ಸಮಿತಿ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ಸ್ವಾಗತಿಸಿದರು. ವಕ್ವಾಡಿ ಗುರುಕುಲ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ರಾಜೇಶ್ ಕೆ.ಸಿ. ನಿರೂಪಿಸಿದರು.

ಆಳ್ವಾಸ್ ಸಾಂಸ್ಕೃತಿಕ ಲೋಕ

ಮೂಡುಬಿದಿರೆ ಆಳ್ವಾಸ್‌ ಶಿಕ್ಷಣ ಸಂಸ್ಥೆಗಳ 400 ಜನ ವಿದ್ಯಾರ್ಥಿಗಳು 2.15 ಗಂಟೆ ನೀಡಿದ ವಿಭಿನ್ನವಾದ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದ್ದ ಸಾವಿರಾರು ಜನರ ಮನಸೂರೆಗೊಂಡಿತು.

ಶ್ರೀಲಂಕಾ ಸೇರಿದಂತೆ ದೇಶ-ವಿದೇಶದ ಅಪರೂಪದ ಸಾಂಸ್ಕೃತಿಕ ಸಂಸ್ಕೃತಿಯನ್ನು ಅಚ್ಚುಕಟ್ಟಾಗಿ ಪ್ರದರ್ಶಿಸುವ ಮೂಲಕ ವಿದ್ಯಾರ್ಥಿಗಳು ಬಸ್ರೂರು ಅಪ್ಪಣ್ಣ ಹೆಗ್ಡೆ ಅವರಿಗೆ ''''ಕಲಾ ಗೌರವ'''' ಸಮರ್ಪಿಸಿದರು. ಶಾಸ್ತ್ರೀಯ ನೃತ್ಯ - ಭೋ ಶಂಭೂ, ಗುಜರಾತಿನ ಗಾರ್ಭಾ ಮತ್ತು ದಾಂಡಿಯ, ಸೃಜನಾತ್ಮಕ ನೃತ್ಯ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಮಣಿಪುರಿಯ ಸ್ಟಿಕ್ ಡ್ಯಾನ್ಸ್, ಬಡಗುತಿಟ್ಟಿನ - ಶ್ರೀ ಕೃಷ್ಣ ಲೀಲೆ, ಕಥಕ್ ನೃತ್ಯ- ವರ್ಷಧಾರೆ, ಪಶ್ಚಿಮ ಬಂಗಾಳದ ಪುರುಲಿಯಾ ನೃತ್ಯ, ಡೊಳ್ಳು ಕುಣಿತ, ಮಲ್ಲಕಂಬ ಹಾಗೂ ವಿವಿಧ ಕಸರತ್ತುಗಳನ್ನು ಪ್ರೇಕ್ಷಕರು ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ