ಕುಷ್ಟಗಿ:
ತಾಲೂಕಿನ ದೋಟಿಹಾಳ ಗ್ರಾಮ ಪಂಚಾಯಿತಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಅಪ್ಪಣ್ಣನವರು ಜಾತಿ, ಧರ್ಮ, ವರ್ಣ ಹಾಗೂ ವರ್ಗರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದರು.
ಕಲ್ಯಾಣ ಕ್ರಾಂತಿಯ ರೂವಾರಿಯಾಗಿದ್ದ ಹಡಪದ ಅಪ್ಪಣ್ಣನವರು ಸಮ ಸಮಾಜದ ಕನಸನ್ನು ನನಸು ಮಾಡಲು ಅವಿರತವಾಗಿ ಶ್ರಮಿಸಿದವರು. ಅವರ ತತ್ವಾದರ್ಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ಈ ವೇಳೆ ಗ್ರಾಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಇದ್ದರು.
ದೋಟಿಹಾಳ:ದೋಟಿಹಾಳದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸಲಾಯಿತು ಪ್ರಭಾರಿ ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಕಿರಗಿ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. ಕೇಸೂರು ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರು, ಸಿಬ್ಬಂದಿ ಇದ್ದರು.