ಕನ್ನಡಪ್ರಭ ವಾರ್ತೆ ಶಿರಹಟ್ಟಿ
ಈ ವೇಳೆ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಹಸನ್ ತಹಶೀಲ್ದಾರ ಮಾತನಾಡಿ, ಸುಮಾರು ೧೨೦ ವರ್ಷಗಳ ಹಳೆದ ಶಿಥಿಲಗೊಂಡ ಕಟ್ಟಡದಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿರುವುದರಿಂದ ಸುರಕ್ಷತೆಯ ಬಗ್ಗೆಯೂ ಪ್ರಶ್ನೆ ಮೂಡಿದೆ.
ಕಟ್ಟಡವನ್ನು ದುರಸ್ತಿ ಮಾಡುವ ಬದಲು ಅಗತ್ಯವಿದ್ದಲ್ಲಿ ತಾಂತ್ರಿಕ ಪರಿಶೀಲನೆ ನಡೆಸಿ, ಹೊಸ ಪಪಂ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಹಾಗೂ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಮಳೆಗಾಲದಲ್ಲಿ ದಾಖಲೆಗಳು ನಾಶವಾಗುವ ಮುನ್ನ ಕಟ್ಟಡದ ಸ್ಥಿತಿಗತಿ ಪರಿಶೀಲಿಸಿ, ತಾತ್ಕಾಲಿಕವಾಗಿ ದಾಖಲೆಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದರ ಜೊತೆಗೆ ಶೀಘ್ರವೇ ಸುಸಜ್ಜಿತ ನೂತನ ಕಟ್ಟಡ ನಿರ್ಮಿಸಬೇಕು ಎಂದು ಆಗ್ರಹಿಸಿದರು.
ಕಚೇರಿ ಕೆಲಸಕ್ಕಾಗಿ ಪ್ರತಿನಿತ್ಯ ಆಗಮಿಸುವ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆಯೂ ಇಲ್ಲದೆ ಪರದಾಡುವಂತಾಗಿದೆ. ಕಚೇರಿಯ ಮೂಲಸೌಕರ್ಯಗಳ ಕೊರತೆಯಿಂದ ಸಿಬ್ಬಂದಿ ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹಳೆಯ ಕಟ್ಟಡದ ಸ್ಥಿತಿಗತಿಯನ್ನು ತಜ್ಞರಿಂದ ಪರಿಶೀಲಿಸಿ, ಅಪಾಯಕಾರಿಯಾಗಿದ್ದರೆ ಶೀಘ್ರವೇ ತೆರವುಗೊಳಿಸಿ ಸಕಲ ಮೂಲಸೌಕರ್ಯಗಳನ್ನೊಳಗೊಂಡ ನೂತನ ಪಟ್ಟಣ ಪಂಚಾಯಿತಿ ಕಾರ್ಯಾಲಯ ಕಟ್ಟಡ ನಿರ್ಮಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ದಾಖಲೆಗಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕುರಿತು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.