ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿ

KannadaprabhaNewsNetwork |  
Published : Dec 19, 2024, 12:30 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಕನಿಷ್ಠ ವೇತನ ₹ 31000ಕ್ಕೆ ಏರಿಸಬೇಕು. ಗ್ರಾಪಂಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು

ಗದಗ: ರಾಜ್ಯ ಗ್ರಾಪಂ ನೌಕರರ ಸಂಘದ ವತಿಯಿಂದ ಗ್ರಾಪಂ ನೌಕರರ 19 ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಡಳಿತ ಭವನದ ಮುಂದೆ ಧರಣಿ ನಡೆಸಿ ಜಿಪಂ ಸಿಇಒ ಭರತ್‌.ಎಸ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯ ಗ್ರಾಪಂ ನೌಕರರ ಸಂಘದ ವತಿಯಿಂದ (ಸಿಐಟಿಯು) ಸಂಯೋಜಿತ ಗ್ರಾಪಂ ನೌಕರರ 19 ಬೇಡಿಕೆ ಈಡೇರಿಸುವಂತೆ ಈ ಹಿಂದೆ ಎರಡು ದಿನಗಳ ಕಾಲ ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ನೌಕರರು ಆಗಮಿಸಿ ತೀವ್ರವಾದ ಹೋರಾಟ ನಡೆಸಿದ್ದೇವು. ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಕರ್ನಾಟಕ ಪಂಚಾಯತ ರಾಜ್ ಆಯುಕ್ತಾಲಯ ಈ ಮೂವರು ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು, ಆಯುಕ್ತರು ಹೋರಾಟದ ಮನವಿ ಸ್ವೀಕರಿಸಿದರು.

ನಮ್ಮ ಬೇಡಿಕೆ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ದೂರವಾಣಿಯ ಮುಖಾಂತರ ಮಾತನಾಡಿ, ಚಳಿಗಾಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು,ಎಲ್ಲ ಸಚಿವರು ಅಲ್ಲಿ ಇರುವುದರಿಂದ ನಿಮ್ಮ ಅನಿರ್ದಿಷ್ಟ ಧರಣಿಯಲ್ಲಿ ಭಾಗವಹಿಸಲಾಗುವುದಿಲ್ಲ, ಧರಣಿ ಹಿಂತೆಗೆದುಕೊಳ್ಳಬೇಕು ಒಂದು ವಾರದಲ್ಲಿ ನಿಮ್ಮ ಬೇಡಿಕೆಗಳನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಸರ್ಕಾರ ಯಾವುದೇ ಬೇಡಿಕೆ ಈಡೇರಿಸುವುದಿಲ್ಲ. ನಮ್ಮ ಬೇಡಿಕೆಗಳಾದ ಗ್ರಾಪಂಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರವಸೂಲಿಗಾರ ಕ್ಲರ್ಕ, ಡಾಟಾ ಎಂಟ್ರಿ ಆಪರೇಟರ್, ನೀರು ಗಂಟೆಗಳು, ಜವಾನ್, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು. ಗ್ರಾಪಂಗಳಲ್ಲಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು ಕನಿಷ್ಠ ₹6000 ಪಿಂಚಣಿ ವ್ಯವಸ್ಥೆ ತರಬೇಕು. ಕನಿಷ್ಠ ವೇತನ ₹ 31000ಕ್ಕೆ ಏರಿಸಬೇಕು. ಗ್ರಾಪಂಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಬೇಕು. ಸೇವಾ ಹಿರಿತನ ಪರಿಗಣಿಸಿ ವೇತನ ಹೆಚ್ಚಳ ಮಾಡಬೇಕು. ಗ್ರೇಡ್ -1 ಪಂಚಾಯತಿಗಳನ್ನು ಜನಸಂಖ್ಯೆಗೆ ಆಧರಿಸಿ ಗ್ರಾಪಂಗಳನ್ನು ಮೇಲ್ದರ್ಜೆಗೇರಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಸೇವಾ ನಿವೃತ್ತಿ ಹೊಂದಿರುವ ಸಿಬ್ಬಂದಿಗಳಿಗೆ ಹಲವಾರು ಗ್ರಾಮ ಪಂಚಾಯತಿಗಳಲ್ಲಿ ನಿವೃತ್ತಿ ಉಪದಾನ ನೀಡಬೇಕು. ತಾಪಂ ಮತ್ತು ಜಿಪಂ ಸಭೆಗಳಲ್ಲಿ ಭಾಗವಹಿಸುವ ಬಿಲ್ ಕಲೆಕ್ಟರ್ ಹಾಗೂ ಡಾಟಾ ಎಂಟ್ರಿ ಆಪರೇಟರ ಸಿಬ್ಬಂದಿಗೆ ಸಾರಿಗೆ ಭತ್ಯೆ ಹಾಗೂ ದಿನಭತ್ಯೆ ನೀಡಬೇಕು ಸೇರಿದಂತೆ ಒಟ್ಟು 19 ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ವೇಳೆ ಮಹೇಶ ಹಿರೇಮಠ, ಮಾರುತಿ ಚಿಟಗಿ, ಜಿಲ್ಲಾಧ್ಯಕ್ಷ ಬಸವರಾಜ ಮಂತೂರ, ಪ್ರಕಾ ರುದ್ರಪ್ಪ ಕಂದಗಲ್ಲ, ಮಹೇಶ ದೊಡ್ಡವಾಡ, ಬಸವರಾಜ ಮೇವುಂಡಿ, ಈಶ್ವರ ದಮಾನಿ, ಬಸವರಾಜ ಅರ್ಕಸಾಲಿ, ಮಹಾಲಿಂಗಪ್ಪ ಮುತಾರಿ, ಪ್ರಕಾಶ ನರೇಗಲ್ಲ, ಶಿವಾನಂದ ಚಲವಾದಿ, ರುದ್ರಪ್ಪ ಐನಾಪೂರ, ಮುತ್ತಪ್ಪ ಅರಹುಣಸಿ, ರಮೇಶ ವಾಸನ, ಮಹೇಶ ಮೂಲಿಮನಿ, ನಾಗರಾಜ ಕಣಗಲ್, ಜಗದೀಶ ವಾಲ್ಮೀಕಿ, ಸತೀಶ ಡೊಳ್ಳಿನ, ಪ್ರಭು ಪೂಜಾರ, ಬಸಮ್ಮ ಮಲ್ಲಾಡದ, ಸುಜಾತ ದೊಡ್ಡಮನಿ ಸೇರಿದಂತೆ ಗ್ರಾಪಂ ನೌಕರರು, ಅಂಗನವಾಡಿ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರದ ಸಿಹಿ ಸುದ್ದಿ : ಏನೆಲ್ಲಾ ಸಿಗುತ್ತೆ ?
ಶಾಲೆ ಬಾಗಿಲಿಗೆ ಸಿಲುಕಿ ಬಾಲಕಿ ಬೆರಳು ಕಟ್‌ : ಕಸಕ್ಕೆಸೆದ ಶಿಕ್ಷಕರು-ಅಮಾನವೀಯ ವರ್ತನೆ!