ವಂಚನೆಗೊಳಗಾದವರಿಗೆ ನ್ಯಾಯ ಒದಗಿಸಲು ಮನವಿ

KannadaprabhaNewsNetwork |  
Published : Dec 17, 2025, 03:15 AM IST
ವಂಚನೆಗೆ ಒಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸಿ ಕೊಡುವಂತೆ ಆಗ್ರಹ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯದಲ್ಲಿ ವಿವಿಧ ಕಂಪನಿಗಳಿಂದ ವಂಚನೆಗೊಳಗಾದ ಸಂತ್ರಸ್ತರಿಗೆ ಬಡ್ ಸೆಟ್ 2019ರ ಕಾನೂನು ಅಡಿಯಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರ ಕುಟುಂಬದ ವತಿಯಿಂದ ಇಲ್ಲಿಯ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮೈದಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ರಾಜ್ಯದಲ್ಲಿ ವಿವಿಧ ಕಂಪನಿಗಳಿಂದ ವಂಚನೆಗೊಳಗಾದ ಸಂತ್ರಸ್ತರಿಗೆ ಬಡ್ ಸೆಟ್ 2019ರ ಕಾನೂನು ಅಡಿಯಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಂಚನೆ ಸಂತ್ರಸ್ತ ಠೇವಣಿದಾರ ಕುಟುಂಬದ ವತಿಯಿಂದ ಇಲ್ಲಿಯ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮೈದಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ಸುಮಾರು ₹2.50 ಕೋಟಿ ಜನರು ಇಂಥ ಮೋಸದ ಜಾಲಗಳ ಕಂಪನಿಗಳಿಂದ ಮೋಸ ಹೋಗಿದ್ದಾರೆ. ಈ ಬಗ್ಗೆ ಹಲವು ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. 2019ರಲ್ಲಿ ಲೋಕ ಸಭೆಯಲ್ಲಿ ಬಡ್ಸ್ ಕಾಯ್ದೆ ಜಾರಿಯಾಯಿತು, 2021ರಲ್ಲಿ ಕರ್ನಾಟಕದಲ್ಲಿ ಈ ಕಾಯ್ದೆ ಜಾರಿಯಾಗಿದೆ. ಆದರೆ ಇನ್ನೂವರೆಗೆ ನಮಗೆ ನ್ಯಾಯ ಸಿಕ್ಕಿಲ್ಲ. ಮೂರು ವರ್ಷಗಳಿಂದ ನ್ಯಾಯಕ್ಕಾಗಿ ಮನವಿ ಸಲ್ಲಿಸಿದರೂ ಯಾರೂ ಸ್ಪಂದಿಸುತ್ತಿಲ್ಲ. ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸತ್ಯಾಗ್ರಹ ನಡೆಸಿದರೂ ಯಾರೂ ಗಮನಹರಿಸುತ್ತಿಲ್ಲ ಎಂದು ಅಳಲು ತೋಡಿಕೊಂಡರು.

ಈ ಕುರಿತು ಕೋರ್ಟ್ ಮೊರೆ ಹೋದಾಗ ಸುಪ್ರೀಂ ಕೋರ್ಟ್ ನಲ್ಲಿ ನಮ್ಮ ಪರವಾಗಿ 2025ರಲ್ಲಿ ಆದೇಶ ಬಂದಿದೆ. ಹೀಗಾಗಿ ಕೂಡಲೇ ತಪ್ಪಿತಸ್ಥ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಬಡ್ಸ್ ಕಾಯ್ದೆ ಪ್ರಕಾರ ನ್ಯಾಯ ಕೊಡಿಸುವಂತೆ ಆಗ್ರಹಿಸಿದರು.

ಅಧ್ಯಕ್ಷ ಅಪ್ಪಾಸಾಹೇಬ ಬುಗಡೆ, ಮದನಲಾಲ್ ಆಜಾದ್, ಅಶೋಕ ಮುದಗಲ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!