ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಶನಿವಾರ ರಂಭಾಪುರಿ ಶ್ರೀಗಳ ನೇತೃತ್ವದಲ್ಲಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ವೀರಶೈವ ಲಿಂಗಾಯತ ಜಂಗಮ ಸಮುದಾಯದ ಸೋಮಯ್ಯಾ ಗಣಾಚಾರಿ ಅವರು ಸಮುದಾಯದ ಕಾರ್ಯ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡುವುದರಿಂದ ಜಂಗಮ ಸಮುದಾಯಕ್ಕೆ ಕಾಂಗ್ರೆಸ್‌ನಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆತಂತಾಗುತ್ತದೆ ಎಂದು ಮಠಾಧೀಶರು ಮನವಿ ಮಾಡಿದರು.
ಈ ಕುರಿತು ಮಾತನಾಡಿದ ವಿಜಯಪುರ ಸಂಸ್ಥಾನ ಹಿರೇಮಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ವಿವಿಧ ಭಾಗಗಳ ಮಠಾಧೀಶರು ಸೇರಿ ಸೋಮಯ್ಯಾ ಗಣಾಚಾರಿ ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡುವಂತೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದು, ಮನವಿ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.ಸೋಮಯ್ಯಾ ಗಣಾಚಾರಿ ಅವರು ರಂಭಾಪುರಿ ಶ್ರೀಗಳ ಶಿಷ್ಯರಾಗಿದ್ದು, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹಲವು ವರ್ಷಗಳಿಂದ ಸಚಿವ ಎಂ.ಬಿ.ಪಾಟೀಲ್ ಅವರೊಂದಿಗೆ ಕಾರ್ಯನಿರ್ವಹಿಸಿದ್ದಾರೆ. ಧಾರ್ಮಿಕ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಮುಖಂಡರಾಗಿರುವ ಅವರನ್ನು ವಿಧಾನ ಪರಿಷತ್ತಿಗೆ ನೇಮಕ ಮಾಡಬೇಕೆಂಬುದು ಮಠಾಧೀಶರ ಒತ್ತಾಯವಾಗಿದೆ ಎಂದು ತಿಳಿಸಿದರು.