ಬೆಳೆ ಪರಿಹಾರಕ್ಕೆ ಆಗ್ರಹಿಸಿ ರೈತ ಸಂಘದಿಂದ ಮನವಿ

KannadaprabhaNewsNetwork |  
Published : Oct 24, 2024, 12:35 AM ISTUpdated : Oct 24, 2024, 12:36 AM IST
ಚಿತ್ರ ಶೀರ್ಷಿಕೆ 23 ಎಂ ಎಲ್ ಕೆ 1 ಮೊಳಕಾಲ್ಮುರು ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರರಿಗೆ  ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ಮೊಳಕಾಲ್ಮುರು: ಭಾರೀ ಮಳೆಯಿಂದ ಬೆಳೆ ನಷ್ಟವಾಗಿದ್ದು ಸರ್ಕಾರ ಕೂಡಲೇ ಬೆಳೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಬುಧವಾರ ತಹಸೀಲ್ದಾರರಿಗೆ ಮನವಿ ಸಲ್ಲಿಸಿರು.ತಾಲೂಕಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಹಳ್ಳಕೊಳ್ಳದ ನೀರು ಜಮೀನುಗಳಿಗೆ ನುಗ್ಗಿ ಫಸಲು ಕೊಚ್ಚಿಕೊಂಡು ಹೋಗಿದ್ದು ರೈತರು ಭಾರಿ ನಷ್ಟ ಅನುಭವಿಸುತ್ತಿದ್ದಾರೆ. ಸಾಲ ಮಾಡಿ ಬೆಳೆ ಇಟ್ಟರೂ ಕಾಯಿ ಕಟ್ಟುವ ಮೊದಲೇ ಬೆಳೆ ಹಾಳಾಗಿರುವುದು ರೈತರನ್ನು ಸಮಸ್ಯೆಗೆ ದೂಡಿದೆ. ಹೀಗಿದ್ದರೂ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ರೈತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಸಂಘದ ಮುಖಂಡರು ಆರೋಪಿಸಿದರು.

ಕಳೆದ ಹದಿನೈದು ದಿನಗಳಿಂದ ಸುರಿದ ಭಾರೀ ಮಳೆಯಿಂದ ತಾಲೂಕಿನ ಎಲ್ಲ ಕೆರೆಗಳು ಭರ್ತಿಯಾಗಿವೆ. ಕೆರೆಗಳಲ್ಲಿ ಬರೀ ಮುಳ್ಳಿನ ಗಿಡಗಳೇ ತುಂಬಿದ್ದು, ನಿರ್ವಹಣೆ ಇಲ್ಲದಾಗಿದೆ. ಕೆಲ ಕೆರೆಗಳು ಒತ್ತುವರಿಯಾಗಿವೆ. ಸಂಬಂಧಿಸಿದ ಅಧಿಕಾರಿಗಳು ಚಕಾರ ಎತ್ತುತ್ತಿಲ್ಲ ಎಂದರು.

ವಿಪರೀತ ಮಳೆಯಿಂದಾಗಿ ಬೆಳೆ ಕಳೆದುಕೊಂಡಿರುವ ತಾಲೂಕಿನ ರೈತರಿಗೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಜೊತೆಗೆ ಬೆಳೆ ವಿಮೆ ಹಣ ನೀಡಲು ಸಂಬಂಧಿಸಿದಂತ ವಿಮಾ ಕಂಪನಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಬಿ. ನಿಜಲಿಂಗಪ್ಪ, ತಾಲೂಕು ಅಧ್ಯಕ್ಷ ಮರ್ಲಹಳ್ಳಿ ರವಿಕುಮಾರ್, ಡಿ.ಸಿ.ನಾಗರಾಜ, ಮಲ್ಲಳ್ಳಿ ಅಜ್ಜಣ್ಣ , ಈರಣ್ಣ, ತಮ್ಮಣ್ಣ, ಮುಕ್ಕಣ್ಣ, ಈರಣ್ಣ, ರಾಜಣ್ಣ, ಚೋಳಕೆರೆ ಹೇಮಣ್ಣ ದೊಡ್ಡ ಸೂರಯ್ಯ ಶಿವಪ್ಪ, ರಾಮ ಬಜ್ಜಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಎಲ್‌ಡಿಇ ಸಂಸ್ಥೆಯಿಂದಲೇ ಅಂಗಾಂಗ ದಾನದ ಜಾಗೃತಿ ಅಭಿಯಾನ
ಸಂಭ್ರಮದ ಶಿವಯೋಗಮಂದಿರದ ಮಹಾರಥೋತ್ಸವ