ಕನ್ನಡಪ್ರಭ ವಾರ್ತೆ, ದಾವಣಗೆರೆ
ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾದ ಜಿ.ಬಿ. ವಿನಯಕುಮಾರ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿ, ಲೋಕಸಭೆಗೆ ಕಳಿಸಿಕೊಡಬೇಕು ಎಂದು ಐಎಎಸ್ ತರಬೇತಿ ಪಡೆಯುತ್ತಿರುವ ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳು ಮನವಿ ಮಾಡಿದರು.ವಿನಯಕುಮಾರ ಅವರು ಇನ್‌ಸೈಟ್ ಐಎಎಸ್ ಸಂಸ್ಥೆಯ ಉಪ ಕಚೇರಿಯೊಂದನ್ನು ಭಾರತದ ಜಮ್ಮು- ಕಾಶ್ಮೀರದ ಶ್ರೀನಗರದಲ್ಲಿ ಸ್ಥಾಪಿಸಿ, ಭಾರತಮಾತೆಯ ಸೇವೆ ಮಾಡುತ್ತಿರುವ ಸೈನಿಕರ ಕುಟುಂಬದ ಹೆಣ್ಣುಮಕ್ಕಳಿಗೆ ಹಾಗೂ ಜಮ್ಮು- ಕಾಶ್ಮೀರದ ಮುಸ್ಲಿಂ ಯುವತಿಯರು ಹಾಗೂ ಮಹಿಳೆಯರಿಗೆ ಉಚಿತವಾಗಿ ಐಎಎಸ್ ತರಬೇತಿಯನ್ನು ನೀಡುತ್ತಿದ್ದಾರೆ. ಪ್ರಸ್ತುತ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ. ಸಂಸದರಾಗಲು ಸಹಕರಿಸುವಂತೆ ಹಳ್ಳಿ ಹಳ್ಳಿಗಳಿಗೂ ಸುತ್ತಿ, ಪ್ರಚಾರ ಮಾಡುತ್ತಿದ್ದಾರೆ. ಇಂಥ ಯೋಗ್ಯ ಅಭ್ಯರ್ಥಿಗೆ ತಮ್ಮ ಅಮೂಲ್ಯ ಮತ ನೀಡಿ ಎಂದು ಕೇಳಿಕೊಂಡಿದ್ದಾರೆ.
ಭಾರತದ ಕನ್ಯಾಕುಮಾರಿಯಿಂದ ಹಿಡಿದು ಕಾಶ್ಮೀರದ ಶ್ರೀನಗರದವರೆಗೂ ತಮ್ಮ ಇನ್‌ಸೈಟ್ ಐಎಎಸ್ ಸಂಸ್ಥೆ ಮೂಲಕ ವಿನಯಕುಮಾರ್ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಯಾವ ಜಾತಿ, ಮತ, ಪಂಥ -ಪಂಗಡ ಹಾಗೂ ಧರ್ಮಗಳ ಭೇದಭಾವವಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವುದು ಹೆಮ್ಮೆಯ ಸಂಗತಿ. ಇಂತಹ ಮನೆ ಮಗನ ಕೈ ಬಲಪಡಿಸುವಂತೆ ವಿದ್ಯಾರ್ಥಿಗಳು ಕೋರಿದ್ದಾರೆ.ಕ್ರ.ಸಂ: 28, ಸಿಲಿಂಡರ್ ಗುರುತಿಗೆ ಮತ ನೀಡಿ, ದಾವಣಗೆರೆ ಸಮಗ್ರ ಅಭಿವೃದ್ಧಿಯ ಭಾಗವಾಗಿ. ವಿನಯಕುಮಾರ್ ಅವರ ಕನಸು ದೊಡ್ಡದಿದೆ. ದಾವಣಗೆರೆ ಜಿಲ್ಲೆ ಅಭಿವೃದ್ಧಿಗೂ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ನಮ್ಮಂಥ ನೂರಾರು ವಿದ್ಯಾರ್ಥಿಗಳಿಗೆ ಅವರು ಆಶಾಕಿರಣವಾಗಿದ್ದಾರೆ. ಸೈನಿಕರ ಕುಟುಂಬದ ಹೆಣ್ಣುಮಕ್ಕಳಿಗೆ ಉಚಿತ ತರಬೇತಿ ನೀಡುವ ಮೂಲಕ ಎಲ್ಲರಿಗೂ ಮಾದರಿ ಆಗಿದ್ದಾರೆ. ಇಂಥವರು ಲೋಕಸಭಾ ಸದಸ್ಯರಾದರೆ ನಿಮ್ಮ ಮಕ್ಕಳ ಭವಿಷ್ಯ ಉಜ್ವಲವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಸಹ ಹೇಳಿದ್ದಾರೆ.
- - - -29ಕೆಡಿವಿಜಿ35ಃ ಜಿ.ಬಿ.ವಿನಯಕುಮಾರ್