ಸಂಸದ ಈ.ತುಕಾರಾಮ್‍ಗೆ ರೈಲ್ವೆ ಸಮಿತಿಯಿಂದ ಮನವಿ ಸಲ್ಲಿಕೆ

KannadaprabhaNewsNetwork |  
Published : Jun 18, 2024, 12:55 AM IST
ಕಂಪ್ಲಿ ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಎಂ.ಹೇಮಯ್ಯಸ್ವಾಮಿ ಸಂಡೂರಿನಲ್ಲಿ ಸಂಸದ ಈ.ತುಕರಾಮ್‍ಗೆ ಮನವಿ ಸಲ್ಲಿಸಿದರು. ಕ್ರಿಯಾ ಸಮಿತಿಯ ಉಪಾಧ್ಯಕ್ಷ ನಾರಾಯಣ ಇಂಗಳಗಿ, ಕಾರ್ಯದರ್ಶಿ ಹಾದಿಮನಿ ಕಾಳಿಂಗವರ್ಧನ ಇದ್ದರು. | Kannada Prabha

ಸಾರಾಂಶ

ಕಲ್ಯಾಣ ಕರ್ನಾಟಕ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಕಂಪ್ಲಿ ಗಂಗಾವತಿ ಮಧ್ಯದಲ್ಲಿರುವ ತುಂಗಭದ್ರಾ ನದಿಗೆ ಸೇತುವೆ 65 ವರ್ಷಗಳ ಹಿಂದೆ ನಿರ್ಮಾಣವಾಗಿದ್ದು ಶಿಥಿಲಗೊಂಡಿದೆ.

ಕಂಪ್ಲಿ: ರೈಲ್ವೆ ಸಂಪರ್ಕ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಕಂಪ್ಲಿ ತಾಲೂಕು ರೈಲ್ವೆ ಮಾರ್ಗಕ್ಕಾಗಿ ಕ್ರಿಯಾ ಸಮಿತಿ ಪದಾಧಿಕಾರಿಗಳು ಸಂಡೂರಿನಲ್ಲಿ ಸಂಸದ ಈ.ತುಕರಾಮ್‍ ಗೆ ಮನವಿ ಸಲ್ಲಿಸಿದರು.

ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಎಂ. ಹೇಮಯ್ಯಸ್ವಾಮಿ ಮಾತನಾಡಿ, ಗಂಗಾವತಿ-ದರೋಜಿ ವಯಾ ಕಂಪ್ಲಿ ಬ್ರಾಡ್‍ಗೇಜ್ ರೈಲ್ವೆ ಸಂಪರ್ಕ ಕಾಮಗಾರಿಯ ಸರ್ವೇ ಕಾರ್ಯ ಪೂರ್ಣಗೊಂಡಿದ್ದು ಸುಮಾರು ₹919.49 ಕೋಟಿ ವೆಚ್ಚ ಅಂದಾಜಿಸಿದ್ದು, ಕಾಮಗಾರಿ ಆರಂಭಗೊಳ್ಳಬೇಕಿದೆ. ಇದಕ್ಕಾಗಿ ರೈಲ್ವೆ ಮಂಡಳಿಯಿಂದ ಅನುಮೋದನೆ ದೊರಕಬೇಕಿದೆ. ತಾವು ಮುತುವರ್ಜಿ ವಹಿಸಿ ರೈಲ್ವೆ ಸಂಪರ್ಕ ಕಾಮಗಾರಿ ಆರಂಭಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಕಂಪ್ಲಿ ಗಂಗಾವತಿ ಮಧ್ಯದಲ್ಲಿರುವ ತುಂಗಭದ್ರಾ ನದಿಗೆ ಸೇತುವೆ 65 ವರ್ಷಗಳ ಹಿಂದೆ ನಿರ್ಮಾಣವಾಗಿದ್ದು ಶಿಥಿಲಗೊಂಡಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳ ಅನೇಕ ನಗರಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆಯಾಗಿರುತ್ತದೆ. ಹೊಸ ಸೇತುವೆ ನಿರ್ಮಿಸುವಂತೆ ಅನೇಕ ವರ್ಷಗಳಿಂದ ಒತ್ತಾಯಿಸುತ್ತ ಬಂದಿದ್ದರೂ ಇನ್ನೂ ಬೇಡಿಕೆ ಈಡೇರಿಲ್ಲ. ಈ ಹಿಂದಿನ ಸರ್ಕಾರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ₹69 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸಲು ಯೋಜಿಸಲಾಗಿತ್ತು ಆದರೆ ಕಾರ್ಯಾಗತವಾಗಿಲ್ಲ. ಹೊಸ ಸೇತುವೆ ನಿರ್ಮಾಣಕ್ಕೆ ಕ್ರಮವಹಿಸಲು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಜಯ್‍ಸಿಂಗ್ ಅವರಿಗೆ ಶಿಫಾರಸು ಪತ್ರ ಬರೆಯುವಂತೆ ಒತ್ತಾಯಿಸಿದರು. ಮನವಿ ಸಲ್ಲಿಸುವಲ್ಲಿ ಕ್ರಿಯಾ ಸಮಿತಿಯ ಉಪಾಧ್ಯಕ್ಷ ನಾರಾಯಣ ಇಂಗಳಗಿ, ಕಾರ್ಯದರ್ಶಿ ಹಾದಿಮನಿ ಕಾಳಿಂಗವರ್ಧನ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್‌
ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!