ಕೊಳಗೇರಿಗೆ ಮೂಲ ಸೌಲಭ್ಯ ಕಲ್ಪಿಸಲು ಅಧಿಕಾರಿಗಳಿಗೆ ಮನವಿ

KannadaprabhaNewsNetwork |  
Published : Nov 06, 2025, 02:15 AM IST
ಗದಗ-ಬೆಟಗೇರಿ ಕೊಳಗೇರಿ ಪ್ರದೇಶಗಳ ವಸತಿ ಮತ್ತು ಮೂಲಭೂತ ಸೌಲಭ್ಯಕ್ಕೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್. ಮಾನ್ವಿ ಮಾತನಾಡಿ, ನಗರದ ಕೊಳಗೇರಿ ಪ್ರದೇಶಗಳು ಸ್ಲಂ ಘೋಷಣೆಯಾಗಿ ದಶಕಗಳು ಕಳೆದರೂ ಅಭಿವೃದ್ಧಿಯಾಗದೇ ಸೌಲಭ್ಯ ವಂಚಿತ ಪ್ರದೇಶಗಳಾಗಿವೆ ಎಂದರು.

ಗದಗ: ಗದಗ- ಬೆಟಗೇರಿ ಅವಳಿ ನಗರದ ಕೊಳಗೇರಿ ಪ್ರದೇಶಗಳ ವಸತಿ ಮತ್ತು ಮೂಲ ಸೌಲಭ್ಯಕ್ಕೆ ಆದ್ಯತೆ ನೀಡಬೇಕೆಂದು ಒತ್ತಾಯಿಸಿ ಸ್ಲಂ ಜನಾಂದೋಲನ- ಕರ್ನಾಟಕ ಹಾಗೂ ಜಿಲ್ಲಾ ಸ್ಲಂ ಸಮಿತಿ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್. ಮಾನ್ವಿ ಮಾತನಾಡಿ, ನಗರದ ಕೊಳಗೇರಿ ಪ್ರದೇಶಗಳು ಸ್ಲಂ ಘೋಷಣೆಯಾಗಿ ದಶಕಗಳು ಕಳೆದರೂ ಅಭಿವೃದ್ಧಿಯಾಗದೇ ಸೌಲಭ್ಯ ವಂಚಿತ ಪ್ರದೇಶಗಳಾಗಿವೆ. ನಗರದ ಕೊಳಗೇರಿ ಪ್ರದೇಶಗಳ ಅಭವೃದ್ಧಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ನಗರದಲ್ಲಿ ಸುಮಾರು 48 ಕೊಳಚೆ ಪ್ರದೇಶಗಳನ್ನು ಸ್ಲಂ ಕಾಯ್ದೆಡಿಯಲ್ಲಿ ಘೋಷಣೆ ಮಾಡಲಾಗಿದೆ. ಇನ್ನು 20ಕ್ಕೊ ಹೆಚ್ಚು ಗುಡಿಸಲು ಪ್ರದೇಶಗಳನ್ನು ಘೋಷಣೆ ಮಾಡಬೇಕಾಗಿದೆ. ಈ ಹಿಂದೆ ಘೋಷಣೆ ಮಾಡಲಾಗಿರುವ ಕೊಳಗೇರಿ ಪ್ರದೇಶಗಳ ಅಭಿವೃದ್ಧಿಗಾಗಿ ಜಿಲ್ಲಾ ಸ್ಲಂ ಸಮಿತಿಯಿಂದ ನಿರಂತರ ಹೋರಾಟಗಳನ್ನು ನಡೆಸಲಾಗುತ್ತದೆ. ಅಘೋಷಿತ ಗುಡಿಸಲು ಪ್ರದೇಶಗಳನ್ನು ಘೋಷಣೆಗಾಗಿ ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ನೀಡಿ ಒತ್ತಾಯಿಸಲಾಗಿದೆ. ಆದರೆ ಈವರೆಗೊ ಸ್ಲಂ ಜನರ ಬೇಡಿಕೆಗಳಿಗೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದರು.

ಸ್ಲಂ ಬೋರ್ಡ್ ಅಧಿಕಾರಿಗಳು ಮನವಿ ಸ್ವಿಕರಿಸಿ, ಮಾತನಾಡಿ, ಸ್ಲಂ ಜನರ ಬೇಡಿಕೆಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಗಿದೆ. ಸ್ಲಂ ಜನರ ಹಕ್ಕೋತ್ತಾಯಗಳಿಗೆ ಹಂತ- ಹಂತವಾಗಿ ಕೆಲಸ ಮಾಡಲಾಗುವುದೆಂದು ಭರವಸೆ ನೀಡಿದರು.

ಈ ವೇಳೆ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಇಬ್ರಾಹಿಂ ಮುಲ್ಲಾ, ಮೆಹರುನಿಸಾ ಡಂಬಳ, ಶರಣಪ್ಪ ಸೂಡಿ, ಮೌಲಾಸಾಬ ಗಚ್ಚಿ, ಮೆಹಬೂಬಸಾಬ ಬಳ್ಳಾರಿ, ಮಂಜುನಾಥ ಶ್ರೀಗಿರಿ, ಮೈಮುನ ಬೈರಕದಾರ, ಖಾಜಾಸಾಬ ಇಸ್ಮಾಯಿಲನವರ, ಸಕ್ರುಬಾಯಿ ಗೋಸಾಯಿ, ಸಲೀಂ ಹರಿಹರ, ಖಾಜಾಸಾಬ ಬಳ್ಳಾರಿ, ವೆಂಕಟೇಶ ಬಿಂಕದಕಟ್ಟಿ, ರಿಜ್ವಾನ ಮುಲ್ಲಾ, ಮಕ್ತುಮಸಾಬ ಮುಲ್ಲಾನವರ, ದಾದು ಗೋಸಾವಿ ಹಾಗೂ ಪದಾಧಿಕಾರಿಗಳು ಇದ್ದರು.

PREV

Recommended Stories

ತ್ಯಾಗರಾಜ ಕೋ ಆಪರೇಟಿವ್‌ ಬ್ಯಾಂಕ್‌ನಿಂದ ರಸಪ್ರಶ್ನೆ ಸ್ಪರ್ಧೆ
ಕುತಂತ್ರ-ಅಸೂಯೆಯಿಂದ ಟನಲ್‌ ರಸ್ತೆಗೆ ಬಿಜೆಪಿ ವಿರೋಧ : ಡಿ.ಕೆ.ಸು