ಚಳವಳಿಗೆ ಸಹಕಾರ ನೀಡಲು ಸಿಇಒಗೆ ಮನವಿ

KannadaprabhaNewsNetwork |  
Published : Sep 17, 2026, 01:15 AM IST
0000 | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ 21 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಹಮ್ಮಿಕೊಂಡಿದ್ದು, ಈ ಹೋರಾಟಕ್ಕೆ ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಹಕಾರ ನೀಡವಂತೆ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿಪಂ ಸಿಇಒ ಬಿ.ವಿ. ಅಶ್ವಿಜ ರವರ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ, ತುಮಕೂರುಕರ್ನಾಟಕ ರಾಜ್ಯ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ 21 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಹಮ್ಮಿಕೊಂಡಿದ್ದು, ಈ ಹೋರಾಟಕ್ಕೆ ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಹಕಾರ ನೀಡವಂತೆ ಸಂಘದ ಜಿಲ್ಲಾ ಶಾಖೆ ವತಿಯಿಂದ ಜಿಪಂ ಸಿಇಒ ಬಿ.ವಿ. ಅಶ್ವಿಜ ರವರ ಮನವಿ ಸಲ್ಲಿಸಲಾಯಿತು. ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಸುಬ್ಬರಾಜ ಅರಸ್ ವಿ.ಆರ್., ಖಜಾಂಚಿ ಮಂಜುನಾಥ ಎಸ್.ಎಸ್., ರಾಜ್ಯ ಪರಿಷತ್ ಸದಸ್ಯ ವೆಂಕಟೇಶ್ ಡಿ.ವಿ. ಹಾಗೂ ಉಪಾಧ್ಯಕ್ಷರಾದ ತೇಜಸ್ವಿ ರವರನ್ನೊಳಗೊಂಡ ನಿಯೋಗ ನಗರದ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಸಿಇಓ ರವರನ್ನು ಭೇಟಿ ಮಾಡಿ ಹೋರಾಟದ ಕುರಿತು ಮನವಿ ಸಲ್ಲಿಸಿದರು. ಸಂಘವು ಸರ್ಕಾರದ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳು ಇದುವರೆಗೂ ಸಮರ್ಪಕವಾಗಿ ಈಡೇರದಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲಾ ಘಟಕಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ವಿಸ್ತೃತವಾಗಿ ಚರ್ಚಿಸಲಾಗಿದೆ. ಸದರಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ, ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ 21 ರಿಂದ ರಾಜ್ಯವ್ಯಾಪಿ ಅನಿರ್ದಿಷ್ಟಾವಧಿ ಅಸಹಕಾರ ಚಳವಳಿ ಮತ್ತು ಹೋರಾಟವನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಪಿಡಿಓಗಳ ನ್ಯಾಯಸಮ್ಮತ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಅಗತ್ಯ ಕ್ರಮ ಕೈಗೊಳ್ಳುವುದರೊಂದಿಗೆ ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಶಾಂತಿಯುತ ಹೋರಾಟಕ್ಕೆ ಅಗತ್ಯ ಸಹಕಾರ ನೀಡುವಂತೆ ಸಿಇಒರವರಿಗೆ ಕೋರಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ತೀರ್ಥ, ಸಂಘಟನಾ ಕಾರ್ಯದರ್ಶಿ ಚಂದ್ರಹಾಸ ಎಸ್.ಎಲ್., ಸಂಘಟನಾ ಕಾರ್ಯದರ್ಶಿ (ಮಹಿಳೆ) ಎ. ಕೋಕಿಲ, ಕ್ರೀಡಾ ಕಾರ್ಯದರ್ಶಿ ಸುನೀಲ್‌ಕುಮಾರ್ ಎನ್., ಸಾಂಸ್ಕೃತಿಕ ಕಾರ್ಯದರ್ಶಿ ವಿಜಯಲಕ್ಷ್ಮೀ ಆರ್. ಪಾಟೀಲ್, ಪ್ರಧಾನ ಕಾರ್ಯದರ್ಶಿ ತೇಜೇಶ್ ಜಿ., ಕಾರ್ಯಾಧ್ಯಕ್ಷ ಲೋಕೇಶ್ ಜಿ. ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಇಒ ಕಚೇರಿ ವಿರುದ್ಧದ ಆರೋಪಗಳ ತನಿಖೆಗೆ ಲೋಕಾಯುಕ್ತಕ್ಕೆ ಲಿಖಿತ ದೂರು
ಆಸ್ಪತ್ರೆ, ಕಾಲೇಜು ಜಾಗದ ಖರಾಬು ಭೂಮಿ ಮಾಯ..!