ತ್ರಿಭಾಷಾ ಸೂತ್ರ ಮುಂದುವರೆಸುವಂತೆ ಮನವಿ

KannadaprabhaNewsNetwork |  
Published : Jul 21, 2025, 01:30 AM IST
ಚಿತ್ರ: ೨೦ಎಸ್.ಎನ್.ಡಿ.೦೧- ರಾಜ್ಯದ ಶಾಲಾ ಶಿಕ್ಷಣದಲ್ಲಿ ತ್ರಿಭಾಷಾ ಸೂತ್ರ ಮುಂದುವರೆಸುವಂತೆ ಕೋರಿ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಬಳ್ಳಾರಿ, ವಿಜಯನಗರ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಸಂಡೂರಿನಲ್ಲಿ ಸಂಸದ ಈ. ತುಕರಾಂ ಅವರಿಗೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರಾಜ್ಯದ ಶಾಲಾ ಶಿಕ್ಷಣದಲ್ಲಿ ತ್ರಿಭಾಷಾ ಸೂತ್ರ ಮುಂದುವರೆಸುವಂತೆ ಹಾಗೂ ಹಿಂದಿ ಶಿಕ್ಷಕರ ಹಿತ ರಕ್ಷಣೆಗೆ ಮುಂದಾಗುವಂತೆ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಬಳ್ಳಾರಿ, ವಿಜಯನಗರ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಪಟ್ಟಣದಲ್ಲಿ ಸಂಸದ ಈ. ತುಕಾರಾಂ ಅವರಿಗೆ ಮನವಿ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಸಂಡೂರು

ರಾಜ್ಯದ ಶಾಲಾ ಶಿಕ್ಷಣದಲ್ಲಿ ತ್ರಿಭಾಷಾ ಸೂತ್ರ ಮುಂದುವರೆಸುವಂತೆ ಹಾಗೂ ಹಿಂದಿ ಶಿಕ್ಷಕರ ಹಿತ ರಕ್ಷಣೆಗೆ ಮುಂದಾಗುವಂತೆ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಬಳ್ಳಾರಿ, ವಿಜಯನಗರ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಪಟ್ಟಣದಲ್ಲಿ ಸಂಸದ ಈ. ತುಕಾರಾಂ ಅವರಿಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಪ್ರಶಾಂತ್ ಕುಮಾರ್ ಎಂ. ಮಾತನಾಡಿ, ರಾಷ್ಟ್ರೀಯ ಏಕತೆಯ ಹಿತದೃಷ್ಟಿಯಿಂದ ಹಾಗೂ ಬಹು ಭಾಷೆಗಳ ಕಲಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ದೇಶದಲ್ಲಿ ೧೯೬೧ರಿಂದ ಶಾಲೆಗಳಲ್ಲಿ ತ್ರಿಭಾಷಾ ಸೂತ್ರವನ್ನು ಜಾರಿಗೆ ತಂದಿದೆ. ಹಲವು ಭಾಷೆಗಳ ಕಲಿಕೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲವೇ ಹೊರತು ಅನಾನುಕೂಲವೇನಿಲ್ಲ. ತ್ರಿಭಾಷಾ ಸೂತ್ರವು ವಿದ್ಯಾರ್ಥಿಗಳಿಗೆ ವಿವಿಧ ಭಾಷೆಗಳಲ್ಲಿ ಪರಿಣಾಮಕಾರಿಯಾಗಿ ಸಂವಹನ ಮಾಡಲು ಅನುವು ಮಾಡಿಕೊಡುತ್ತದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅನ್ಯ ರಾಜ್ಯಗಳಲ್ಲಿ ವೃತ್ತಿನಿರತರಾಗಲು ಹಾಗೂ ವಿದ್ಯಾಭ್ಯಾಸ ಮಾಡಲು ಅನುಕೂಲವಾಗುತ್ತದೆ ಎಂದರು.

ದ್ವಿಭಾಷಾ ನೀತಿ ಜಾರಿಯಾದರೆ ೧೫೦೦೦ಕ್ಕೂ ಹೆಚ್ಚು ಹಿಂದಿ ಶಿಕ್ಷಕರಿಗೆ ತೊಂದರೆ:

ಇತ್ತೀಚೆಗಿನ ದಿನಗಳಲ್ಲಿ ರಾಜ್ಯ ಸರ್ಕಾರವು ನೀಡಿರುವ ಪತ್ರಿಕಾ ಹೇಳಿಕೆಗಳಂತೆ ದ್ವಿಭಾಷಾ ನೀತಿಯನ್ನು ಪ್ರೌಢ ಶಾಲೆಗಳಲ್ಲಿ ಅಳವಡಿಸಿಕೊಳ್ಳಲು ನಡೆಸಿರುವ ಚಿಂತನೆಯು ತ್ರಿಭಾಷಾ ಸೂತ್ರದ ಆಶಯಗಳನ್ನು ತಲೆಕೆಳಗಾಗುವಂತೆ ಮಾಡಬಹುದು. ಒಂದು ವೇಳೆ ದ್ವಿಭಾಷಾ ನೀತಿ ಜಾರಿಯಾಗಿದ್ದೇ ಆದಲ್ಲಿ ಈಗ ಸದ್ಯ ರಾಜ್ಯಾದ್ಯಾಂತ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ ಹಿಂದಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಸುಮಾರು ೧೫೦೦೦ ಶಿಕ್ಷಕರ ವೃತ್ತಿಗೆ ತೊಂದರೆಯುಂಟಾಗಲಿದೆ. ಅನುದಾನ ರಹಿತ ಶಾಲೆಗಳಲ್ಲಿ ಹಿಂದಿ ಶಿಕ್ಷಕರಾಗಿ ಅಲ್ಪ ವೇತನದಲ್ಲಿ ಜೀವನ ನಡೆಸುತ್ತಿರುವ ಶಿಕ್ಷಕರ ಜೀವನ ಬೀದಿಗೆ ಬರಲಿದೆ.

ಹಿಂದಿ ಶಿಕ್ಷಕರಾಗುವ ಕನಸು ಹೊತ್ತು ಹಿಂದಿ ಬಿಇಡಿ ಪದವಿ ಪಡೆದಿರುವ ಭಾವಿ ಶಿಕ್ಷಕರು ನಿರುದ್ಯೋಗಿಗಳಾಗಿ ಉಳಿಯಲಿದ್ದಾರೆ. ಈ ಹಿನ್ನೆಲೆ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಮುಂದುವರೆಯುವಂತೆ ಮಾಡಲು ಕ್ರಮಕೈಗೊಳ್ಳಬೇಕು ಎಂದು ಸಂಸದರಲ್ಲಿ ಮನವಿ ಮಾಡಿದರು.

ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಗಾದಿಲಿಂಗಪ್ಪ ಹಾಗೂ ಇತರ ಪದಾಧಿಕಾರಿಗಳು, ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಶೆಟ್ಟಿ, ಕಾರ್ಯದರ್ಶಿ ಅಬ್ದುಲ್ ಕಲಾಂ, ತಾಲೂಕು ಘಟಕದ ಅಧ್ಯಕ್ಷ ಡಿ. ಮೊಹಮ್ಮದ್ ಜಾವೇದ್, ಕಾರ್ಯದರ್ಶಿ ಮೆಹಬೂಬ್ ಬಾಷ, ಇತರ ಪದಾಧಿಕಾರಿಗಳು, ಸದಸ್ಯರು, ರಾಜ್ಯ ಸರ್ಕಾರಿ ನೌಕರರ ಸಂಘದ ನಾಮ ನಿರ್ದೇಶಕ ರಿಜ್ವಾನ್ ಉಪಸ್ಥಿತರಿದ್ದರು.

PREV

Latest Stories

ಸಂಕಷ್ಟಗಳಿವೆ ಆದರೆ ಸೇವಾ ಸಂತೃಪ್ತಿ ನಮಗಿದೆ: ದಶರಥ ಸಾವೂರ
ರೈತರನ್ನು ಸ್ಮರಿಸುವ, ನೋವಿಗೆ ಸ್ಪಂದಿಸುವ ಕಾರ್ಯವಾಗಲಿ
ಮಳೆಯ ರಭಸಕ್ಕೆ ಮನೆಗಳಿಗೆ ನುಗ್ಗಿದ ನೀರು: ಪರಿಶೀಲನೆ