ಹರಿಹರದಲ್ಲಿ ಅದ್ಧೂರಿ ನಾಡಹಬ್ಬಕ್ಕೆ ಡಿಸಿಗೆ ಮನವಿ

KannadaprabhaNewsNetwork |  
Published : Nov 20, 2025, 12:45 AM IST
17HRR. 01ಹರಿಹರದ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ಸ್ಥಳೀಯ ನಗರಸಭೆ ವತಿಯಿಂದ ಅದ್ಧೂರಿಯಾಗಿ ನಾಡ ಹಬ್ಬ ಆಚರಿಸುವಂತೆ ಸೋಮವಾರ ಸಂಜೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಸ್ಥಳೀಯ ನಗರಸಭೆ ವತಿಯಿಂದ ಅದ್ಧೂರಿಯಾಗಿ ನಾಡಹಬ್ಬ ಆಚರಿಸಲು ಸೋಮವಾರ ಸಂಜೆ ಜಿಲ್ಲಾಧಿಕಾರಿಗೆ ಹರಿಹರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ದಾವಣಗೆರೆಗೆ ತೆರಳಿ ಮನವಿ ಪತ್ರ ಸಲ್ಲಿಸಲಾಯಿತು.

ಹರಿಹರ: ಸ್ಥಳೀಯ ನಗರಸಭೆ ವತಿಯಿಂದ ಅದ್ಧೂರಿಯಾಗಿ ನಾಡಹಬ್ಬ ಆಚರಿಸಲು ಸೋಮವಾರ ಸಂಜೆ ಜಿಲ್ಲಾಧಿಕಾರಿಗೆ ಹರಿಹರ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಕನ್ನಡ ಪರ ಸಂಘಟನೆಗಳ ನೇತೃತ್ವದಲ್ಲಿ ದಾವಣಗೆರೆಗೆ ತೆರಳಿ ಮನವಿ ಪತ್ರ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ಡಿ.ಎಂ.ಮಂಜುನಾಥಯ್ಯ, ಹರಿಹರ ನಗರಸಭೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವವನ್ನು ಆದ್ದೂರಿ ಮತ್ತು ವೈಭವದಿಂದ ಮೂರು ದಿನಗಳ ಕಾಲ ಆಚರಿಸಲು ಕಳೆದ ವರ್ಷ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಮನವಿ ನೀಡಲಾಗಿತ್ತು. ಅದರಂತೆ ಹರಿಹರ ನಗರಸಭೆಯು ಈ ವರ್ಷದ ಆಯವ್ಯಯದಲ್ಲಿ 10 ಲಕ್ಷ ರು. ತೆಗೆದಿರಿಸಿದೆ ಎಂದರು.

ಆದರೆ ಈ ವಿಷಯದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಹರಿಹರ ನಗರಸಭೆಯ ಆಡಳಿತ ವ್ಯವಸ್ಥೆಯು ನಿರಾಸಕ್ತಿ ಮತ್ತು ಉದಾಸೀನ ತೋರಿಸುತ್ತಿದೆ. ಸೂಕ್ತ ಮಾರ್ಗದರ್ಶನ ಹಾಗೂ ನಿರ್ದೇಶನ ನೀಡಬೇಕ ಎಂದು ಒತ್ತಾಯಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಬಿ.ದಿಳ್ಯಪ್ಪ, ಅಂಗಡಿ ರೇವಣಸಿದ್ದಪ್ಪ, ಜಿಗಳಿ ಪ್ರಕಾಶ್, ತಾಲೂಕು ಗೌರವ ಕಾರ್ಯದರ್ಶಿ ಬಿ.ಬಿ.ರೇವಣನಾಯ್ಕ್, ನಾಗರಾಜ ಕೋಡಿಹಳ್ಳಿ, ಚಿದಾನಂದ ಕಂಚಿಕೇರಿ, ಕಾರ್ಮಿಕ ಮುಖಂಡ ಎಚ್.ಕೆ.ಕೊಟ್ರಪ್ಪ, ಹಿರಿಯ ಕ್ರೀಡಾಪಟು ಎಚ್.ನಿಜಗುಣ, ಪತ್ರಕರ್ತ ಶೇಖರ್ ಗೌಡ ಪಾಟೀಲ್, ಬಿ.ಮಗ್ದುಂ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎ.ರಿಯಾಜ್ ಅಹ್ಮದ್, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ರಮೇಶ್ ಮಾನೆ, ನಗರ ಘಟಕದ ಅಧ್ಯಕ್ಷ ಪ್ರೀತಂ ಬಾಬು, ಮಕ್ಕಳ ಸಾಹಿತ್ಯ ಪರಿಷತ್ತ್ ಅಧ್ಯಕ್ಷೆ ಕೆ.ಟಿ. ಗೀತಾ ಕೊಂಡಜ್ಜಿ, ಸಾಹಿತ್ಯ ಸಂಗಮದ ಅಧ್ಯಕ್ಷ ವಿ.ಬಿ. ಕೊಟ್ರೇಶಪ್ಪ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ
‘ಜಿ ರಾಮ್‌ ಜಿ’ ವಿರುದ್ಧ ಸಮರಕ್ಕೆ ನಾಳೆ ಕೈ ವಿಶೇಷ ಸಂಪುಟ ಸಭೆ