ಹಿರಿಯ ನಾಗರಿಕರನ್ನು ರಾಷ್ಟ್ರದ ಸಂಪತ್ತು ಎಂದು ಘೋಷಿಸಲು ಮನವಿ

KannadaprabhaNewsNetwork |  
Published : Jun 16, 2025, 11:57 PM IST
ಫೋಟೊ ಶೀರ್ಷಿಕೆ: 16ಹೆಚ್‌ವಿಆರ್5ಹಾವೇರಿ: ಜಿಲ್ಲಾಡಳಿತ ಭವನದ ಎದುರು ಕರ್ನಾಟಕ ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕೇಂದ್ರ ಹಾಗೂ ಎಲ್ಲ ರಾಜ್ಯ ಸರ್ಕಾರಗಳು ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಚಿವಾಲಯ, ಸಚಿವರನ್ನು ನೇಮಿಸಬೇಕು.

ಹಾವೇರಿ: ಎಲ್ಲ ಹಿರಿಯ ನಾಗರಿಕರು ರಾಷ್ಟ್ರದ ಸಂಪತ್ತು ಎಂದು ಘೋಷಿಸಬೇಕು. ಆರ್ಥಿಕವಾಗಿ ದುರ್ಬಲರಾದ ಹಿರಿಯ ನಾಗರಿಕರಿಗೆ ಮಾಸಿಕ ವೃದ್ಧಾಪ್ಯ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಡಳಿತದ ಎದುರು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಕಸಾಪ ಜಿಲ್ಲಾಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿ, ಕೇಂದ್ರ ಹಾಗೂ ಎಲ್ಲ ರಾಜ್ಯ ಸರ್ಕಾರಗಳು ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಚಿವಾಲಯ, ಸಚಿವರನ್ನು ನೇಮಿಸಬೇಕು. ತಡೆಹಿಡಿದ ಹಿರಿಯ ನಾಗರಿಕರ ರೈಲ್ವೆ ಪ್ರಯಾಣ ರಿಯಾಯಿತಿಯನ್ನು ತಕ್ಷಣ ಆರಂಭಿಸಬೇಕು. ಎಲ್ಲ ಪೊಲೀಸ್ ಠಾಣೆಗಳಲ್ಲಿ ಹಿರಿಯ ನಾಗರಿಕರ ಸಮಿತಿ ರಚಿಸಬೇಕು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಸಾಲು, ಚಿಕಿತ್ಸಾ ವಿಭಾಗ ಆರಂಭಿಸಿ ಎಂದು ಒತ್ತಾಯಿಸಿದರು.ಸಂಘಟನೆಯ ಜಿಲ್ಲಾಧ್ಯಕ್ಷ ಈರಣ್ಣ ಬೆಳವಡಿ ಮಾತನಾಡಿ, ರಾಜ್ಯದಲ್ಲಿ ಹಿರಿಯ ನಾಗರಿಕರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಕಾರ್ಡ್ ನಿಷ್ಟ್ರಿಯವಾಗಿವೆ. ಅವುಗಳನ್ನು ಮರು ಆರಂಭಿಸಬೇಕು. ಹಿರಿಯ ನಾಗರಿಕರ ಮಾಸಿಕ ವೃದ್ಧಾಪ್ಯ ವೇತನದ ಆದಾಯ ಮಿತಿಯನ್ನು ಹೆಚ್ಚಿಸಬೇಕು. ನಿವೃತ್ತ ಸರ್ಕಾರಿ ನೌಕರರ 7ನೇ ವೇತನ ಆಯೋಗದ ವರದಿಯ 2ನೇ ಭಾಗವನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದರು.ಸಂಘಟನೆಯ ಕಾರ್ಯದರ್ಶಿ ನಾಗರಾಜ ಇಚ್ಚಂಗಿ, ಉಪಾಧ್ಯಕ್ಷ ಶಿವಬಸಪ್ಪ ಗೋವಿ ಮಾತನಾಡಿದರು. ಸಂಘಟನೆಯ ಗೌರವಾಧ್ಯಕ್ಷ ಎಸ್.ಎಲ್. ಕಾಡದೇವರಮಠ, ಚಂದ್ರಶೇಖರ ಮಾಳಗಿ, ಎನ್.ಬಿ. ಕಾಳೆ, ಜಿ.ಕೆ. ಹಿತ್ತಲಮನಿ, ಸಿದ್ದರಾಜ ಕಲಕೋಟಿ, ಬಿ.ಸಿ. ಹಿರೇಮಠ, ಸುರೇಶ ಕಾಳೆ, ಹನುಮಂತಗೌಡ ಗೊಲ್ಲರ, ಅಮೃತಮ್ಮ ಶೀಲವಂತರ, ದಾಕ್ಷಾಯಣಿ ಗಾಣಗೇರ, ಅಕ್ಕಮಹಾದೇವಿ ಹಾನಗಲ್ಲ, ರಾಜೇಂದ್ರ ಹೆಗಡೆ, ಮರ್ದಾನಸಾಬ ಕೋಟಣ್ಣನವರ, ಎಸ್.ಎನ್. ಕಾಳಿ, ವಿ.ಎನ್. ಪಾಟೀಲ ಮತ್ತಿತರರು ಇದ್ದರು.ನರೇಗಾ ಯೋಜನೆಯಡಿ ನಿರ್ಮಿಸಿದ ಅಡುಗೆ ಕೋಣೆ ಉದ್ಘಾಟನೆ

ಹಾನಗಲ್ಲ: ತಾಲೂಕಿನ ಬಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಹನುಮಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಅಡುಗೆ ಕೊಠಡಿಯನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.ಶಿಗ್ಗಾಂವಿ-ಸವಣೂರು ಶಾಸಕ ಯಾಸೀರ್‌ಖಾನ ಪಠಾಣ, ತಹಸೀಲ್ದಾರ್ ರೇಣುಕಾ ಎಸ್., ಕೆಡಿಪಿ ಸದಸ್ಯ ಮಹ್ಮದ್‌ಹನೀಫ್ ಬಂಕಾಪುರ, ಗ್ರಾಪಂ ಸದಸ್ಯರಾದ ಅರುಣ ಮಲ್ಲಮ್ಮನವರ, ಪತಂಗಸಾಬ ಮಕಾನದಾರ, ರಾಮಣ್ಣ ವಡ್ಡರ, ಲಕ್ಷ್ಮೀ ಕಲಾಲ, ಗದಿಗೆವ್ವ ಚಿಕ್ಕಣಗಿ, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಪದ್ಮಾ ಬೇಂದ್ರೆ, ಮುಖಂಡರಾದ ಚನ್ನಬಸಣ್ಣ ಬಿದರಗಡ್ಡಿ, ನಾಗರಾಜ ಮಲ್ಲಮ್ಮನವರ, ಮಲ್ಲನಗೌಡ ಪಾಟೀಲ, ಚಮನಸಾಬ ಪಾಟೀಲ, ಮಲ್ಲೇಶಪ್ಪ ಕ್ಷೌರದ, ರಾಮಣ್ಣ ರಾಮಜಿ, ಮಾರುತಿ ಮುದುಕಣ್ಣನವರ, ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಚಂದ್ರಪ್ಪ ಜಾಲಗಾರ, ಈರಣ್ಣ ಬೈಲವಾಳ, ಭರಮಣ್ಣ ಶಿವೂರ, ಆದರ್ಶ ಶೆಟ್ಟಿ, ತಾಪಂ ಇಒ ಪರಶುರಾಮ ಪೂಜಾರ, ಪಿಡಿಒ ಪ್ರವೀಣ ಸಾಳಗುಂದಿ, ಹಜರೇಸಾಬ ವಾಗಿನಕೊಪ್ಪ, ಚನ್ನವೀರಗೌಡ ಪಾಟೀಲ, ಉಸ್ಮಾನ ಮಕಾನದಾರ, ಗುಡದಪ್ಪ ಚಿಕ್ಕಣಗಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆ.ಎಸ್.ಪುಟ್ಟಣ್ಣಯ್ಯ ಆದರ್ಶ ಎಲ್ಲಾ ಕಾಲಕ್ಕೂ ಮಾದರಿ, ಅನುಸರಣೀಯ: ನಾಗತಿಹಳ್ಳಿ ಚಂದ್ರಶೇಖರ್
ಮೇಲುಕೋಟೆ: ಶ್ರೀದೇವಿ ಭೂದೇವಿಯರಿಗೆ ನೂರ್ ತಡಾ ಉತ್ಸವ