ಬಿಎಲ್‌ಒಗಳನ್ನಾಗಿ ನೇಮಕ ಕೈಬಿಡಲು ಮನವಿ

KannadaprabhaNewsNetwork |  
Published : Jul 23, 2025, 12:31 AM IST
ಮನವಿ | Kannada Prabha

ಸಾರಾಂಶ

ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡುತ್ತಿರುವುದನ್ನು ಕೈಬಿಡಬೇಕು ಎಂದು ಕೋರಿ ಮನವಿ ಸಲ್ಲಿಸಲಾಯಿತು.

ಮಡಿಕೇರಿ: ಪ್ರೌಢಶಾಲಾ ಶಿಕ್ಷಕರನ್ನು ಬಿಎಲ್‌ಒಗಳನ್ನಾಗಿ ನೇಮಕ ಮಾಡುತ್ತಿರುವುದನ್ನು ಕೈಬಿಡಬೇಕು ಎಂದು ಕೋರಿ ಪ್ರೌಢಶಾಲಾ ಸಹಶಿಕ್ಷಕರ ಸಂಘ ಕೊಡಗು ಘಟಕ ವತಿಯಿಂದ ಜಿಲ್ಲಾಧಿಕಾರಿ ವೆಂಕಟರಾಜಾ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭ ಮಾತನಾಡಿದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಜೆ.ಕುಮಾರ್, ಪ್ರೌಢಶಾಲಾ ಸಹಶಿಕ್ಷಕರಿಗೆ ಈಗಾಗಲೇ ಪಾಠಪ್ರವಚನಗಳ ಹೆಚ್ಚು ಕಾರ್ಯಭಾರವಿದೆ. ಇಲಾಖೆಯ ಹತ್ತು ಹಲವು ಕಾರ್ಯಕ್ರಮಗಳ ಅನುಷ್ಠಾನ ಸೇರಿದಂತೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಫಲಿತಾಂಶ ತರಬೇಕಾದ ಒತ್ತಡವಿರುವುದರಿಂದ ಬಿಎಲ್‌ಒ ಕರ್ತವ್ಯ ನಿಭಾಯಿಸುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಶಿಕ್ಷಣ ಇಲಾಖೆಯ ಕರ್ತವ್ಯವನ್ನು ಹೊರತುಪಡಿಸಿ ಇನ್ನಿತರ ಯಾವುದೇ ಕೆಲಸಗಳನ್ನು ಪ್ರೌಢಶಾಲಾ ಶಿಕ್ಷಕರಿಗೆ ಒತ್ತಾಯಪೂರ್ವಕವಾಗಿ ನೀಡದಂತೆ ಕಂದಾಯ ಇಲಾಖೆ ಮತ್ತು ತಹಸೀಲ್ದಾರ್ ಅವರಿಗೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿಗಳನ್ನು ಕೋರಿದರು.ಈ ಸಂದರ್ಭ ಸಂಘದ ಜಿಲ್ಲಾ ಕಾರ್ಯದರ್ಶಿ ಎಂ.ಎಸ್.ಮಹೇಂದ್ರ, ಮಡಿಕೇರಿ ತಾಲೂಕು ಸಂಘದ ಅಧ್ಯಕ್ಷ ಪಿ.ಎಸ್.ರವಿಕೃಷ್ಣ, ಕಾರ್ಯದರ್ಶಿ ಐರಿನ್ ಉಷಾ, ಶಿಕ್ಷಕಿಯರಾದ ಎಂ.ವನಜ ಮತ್ತು ಕೆ.ಕೆ.ಪುಷ್ಪ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!