ಕೂಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ

KannadaprabhaNewsNetwork |  
Published : Mar 27, 2026, 02:15 AM IST
26ಕೆಕೆಆರ್3:ಕುಕನೂರು ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ   ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ವ್ಯವಸಾಯ ವೃತ್ತಿಪರ ಯೂನಿಯನ್  ವತಿಯಿಂದ ತಹಶೀಲ್ದಾರ್ ಮೂಲಕ ಸಿಎಂ ಅವರಿಗೆ ಮಹಿಳಾ ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಮನವಿ ಸಲ್ಲಿಸಲಾಗಿದೆ. | Kannada Prabha

ಸಾರಾಂಶ

ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮತ್ತು ಪುರುಷರಿಗೆ ಸಮಾನ ಕೂಲಿ ಮತ್ತು ಕನಿಷ್ಠ ಕೂಲಿ 850 ದೃಢೀಕರಿಸಬೇಕು.

ಕುಕನೂರು: ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ಮಹಿಳಾ ದಿನಾಚರಣೆ ಅಂಗವಾಗಿ ಕರ್ನಾಟಕ ವ್ಯವಸಾಯ ವೃತ್ತಿಪರ ಯೂನಿಯನ್ ವತಿಯಿಂದ ತಹಸೀಲ್ದಾರ್ ಮೂಲಕ ಸಿಎಂಗೆ ಮಹಿಳಾ ಕೂಲಿ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿ ಸಲ್ಲಿಸಲಾಯಿತು.

ಪ್ರಮುಖ ಬೇಡಿಕೆಗಳಾದ ಕೃಷಿ ಮತ್ತು ಸಂಬಂಧಿತ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮತ್ತು ಪುರುಷರಿಗೆ ಸಮಾನ ಕೂಲಿ ಮತ್ತು ಕನಿಷ್ಠ ಕೂಲಿ 850 ದೃಢೀಕರಿಸಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ವ್ಯಾಪಕವಾಗಿ ಪ್ರಚಾರ ಮಾಡಬೇಕು. ಅತ್ಯಾಚಾರ ಮತ್ತು ಕೌಟುಂಬಿಕ ದೌರ್ಜನ್ಯಗಳಿಗೆ ಕಾರಣವಾಗಿರುವ ಮಧ್ಯದ ಅಂಗಡಿ ನಿಷೇಧಿಸಬೇಕು ದಲಿತ ಮಹಿಳೆಯರಿಗೆ 5 ಎಕರೆ ಭೂಮಿ ಸರ್ಕಾರ ನೀಡಬೇಕು, 55 ವರ್ಷ ಪೂರೈಸಿದ ಪ್ರತಿ ಮಹಿಳೆಯರಿಗೆ ಪಿಂಚಣಿ ಐದು ಸಾವಿರ ನೀಡಬೇಕು. ಮಹಿಳೆಯರಿಗಾಗಿ ಅಸ್ತಿ ಹಕ್ಕು ಕಾನೂನು ಪ್ರಚಾರ ಮಾಡಬೇಕು. ಪ್ರಮುಖ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು. ಯೂನಿಯನ್ ಜಿಲ್ಲಾ ಕಾರ್ಯದರ್ಶಿ ಯಲ್ಲಪ್ಪ ಮ್ಯಾಗಳಕೇರಿ, ತಾಲೂಕು ಸಂಯೋಜಕ ಲಲಿತಾ ಭಜಂತ್ರಿ, ಸುಂಕಪ್ಪ ಮಿಸಿ, ಶೈಲಜಾ ಬೆಲ್ಲದ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಳಿ ಸಂರಕ್ಷಣೆ, ಕೃಷಿ ಉತ್ತೇಜನಕ್ಕೆ ಬೀಜ ಬ್ಯಾಂಕ್ ಸ್ಥಾಪನೆ: ಕಾಜಾ ಶ್ವಾರ್ಮ
ಒಳಮೀಸಲಾತಿ ಜಾರಿ ಬಳಿಕವೇ ನೇಮಕಾತಿಗೆ ಆಗ್ರಹಿಸಿ ರಕ್ತದಲ್ಲಿ ಮನವಿ