ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

KannadaprabhaNewsNetwork | Published : Jul 12, 2024 1:32 AM

ಸಾರಾಂಶ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ, ಬಡವರಿಗೆ ಬದುಕಲು ಅವಕಾಶ ಕಲ್ಪಿಸುವ ನೀತಿಗಳನ್ನು ಜಾರಿಗೆ ತರಬೇಕು

ಗದಗ: ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ಸರ್ಕಲ್‌ದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ ಕಚೇರಿ ಅಧಿಕಾರಿಗಳ ಮೂಲಕ ಕೇಂದ್ರ ಹಣಕಾಸು ಸಚಿವರು, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಕಾರ್ಮಿಕ ಮುಖಂಡ ಮಹೇಶ ಹಿರೇಮಠ ಮಾತನಾಡಿ, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು, ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು, ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ, ಬಡವರಿಗೆ ಬದುಕಲು ಅವಕಾಶ ಕಲ್ಪಿಸುವ ನೀತಿಗಳನ್ನು ಜಾರಿಗೆ ತರಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸು ಪಡೆಯಬೇಕು. ಬೆಂಬಲ ಬೆಲೆ, ಎಪಿಎಂಸಿ ವ್ಯವಸ್ತೆ ಬಲಗೊಳಿಸಬೇಕು. ಕೃಷಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿ ಕೈಬಿಡಬೇಕು. ದೇಶದ ಐಕ್ಯತೆಯನ್ನು ಕಾಪಾಡಬೇಕು, ರೈಲ್ವೆ, ವಿದ್ಯುತ್, ಸಾರ್ವಜನಿಕ ರಂಗದ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸಬೇಕು. ಅವೈಜ್ಞಾನಿಕ ಶಿಕ್ಷಣ ನೀತಿಯನ್ನು ಜಾರಿಗೊಳಿಸಬಾರದು ಅಕುಶಲ ಕಾರ್ಮಿಕರಿಗೆ 31 ಸಾವಿರ ರುಪಾಯಿ ನಿಗದಿಮಾಡಬೇಕು. ಸರ್ವೋಚ್ಛ ನ್ಯಾಯಾಲಯದ ತೀರ್ಪಿನ್ವಯ ವೈಜ್ಞಾನಿಕ ಕನಿಷ್ಠ ವೇತನ ಜಾರಿಗೆ ಗೊಳಿಸಬೇಕು. ಎಲ್ಲಾ ಗುತ್ತಿಗೆ ಕಾರ್ಮಿಕ ವ್ಯವಸ್ಥೆ ರದ್ದುಗೊಳಿಸ ಖಾಯಂಗೊಳಿಸಬೇಕು. ಎನ್.ಪಿಎಸ್ ರದ್ದುಗೊಳಿಸಿ ಓಪಿಎಸ್ ಮರುಸ್ಥಾಪನೆ ಇಪಿಎಸ್ ಪಿಂಚಣಿದಾರರಿಗೆ ಕನಿಷ್ಠ ರು 9000 ಪಿಂಚಣಿ ಖಚಿತಗೊಳಿಸಬೇಕು. ಕೇಂದ್ರ ಸರ್ಕಾರದ ವಾರ್ಷಿಕ ನಿವ್ವಳ ಆದಾಯದ ಶೇ.3 ರಷ್ಟು ಅನುದಾನ ನೀಡಬೇಕು. ವಿದ್ಯಾರ್ಥಿ ವೇತನ ಇತರೆ ಕಲ್ಯಾಣ ಯೋಜನೆಗಳ ಸಮರ್ಪಕ ಜಾರಿಗೊಳಿಸಬೇಕು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ವಾರ್ಷಿಕ 200 ದಿನಗಳು ದಿನಕ್ಕೆ ರು.700 ನಿಗದಿ ಮಾಡಬೇಕು. ನಗರ ಪ್ರದೇಶಕ್ಕೂ ಉದ್ಯೋಗ ಖಾತರಿ ವಿಸ್ತರಿಸಬೇಕು. ಅಂಗನವಾಡಿ ನೌಕರರು, ಬಿಸಿಯೂಟ ನೌಕರರು ಆಶಾ ಇತರೆ ಸಿಬ್ಬಂದಿಗಳಿಗೆ 31 ಸಾವಿರ ಕನಿಷ್ಠ ವೇತನ ಮತ್ತು ನಿವೃತ್ತ ಪಿಂಚಣಿ 10 ಸಾವಿರ ಪಿಂಚಣಿ ಕೊಡಬೇಕು. ಸಾರಿಗೆ ಕ್ಷೇತ್ರದಲ್ಲಿ ದುಡಿಯುತ್ತಿರುವ ಲಕ್ಷಾಂತರ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಆರಂಭಿಸಬೇಕು, ಕಾರ್ಮಿಕ ಕಾಯಿದೆ ಐಟಿ ಮತ್ತು ಐಟಿಇಎಸ್ ಗೆ ವಿನಾಯ ನೀಡುವ ಅಧಿಸೂಚನೆ ರದ್ದುಗೊಳಿಸಬೇಕೆಂದು ಎಂದು ಮನವಿಯಲ್ಲಿ ಒತ್ತಾಯಿಸಿದರು.

ಈ ಸಂದರ್ಭದಲಿ ಸಿಐಟಿಯು ಪದಾಧಿಕಾರಿಗಳು, ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತರು, ಇತರೆ ಅಸಂಘಟಿತ ಕಾರ್ಮಿಕರು ಇದ್ದರು.

Share this article