ಜಿಲ್ಲಾಧಿಕಾರಿ ಎಂ.ಎನ್.ನಾಗರಾಜ್ ಗೆ ಮನವಿ ಪತ್ರ
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ದತ್ತಪೀಠ ಸೇರಿದಂತೆ ಜಿಲ್ಲೆಯ ಪವಿತ್ರ ತೀರ್ಥಕ್ಷೇತ್ರಗಳಲ್ಲಿ ಪ್ರವಾಸದ ಹೆಸರಿನಲ್ಲಿ ಮೋಜು ಮಸ್ತಿ ಮೂಲಕ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುತ್ತಿರುವ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡರು ಮಂಗಳವಾರ ಜಿಲ್ಲಾಧಿಕಾರಿ ಎಂ.ಎನ್.ನಾಗರಾಜ್ ಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಜಿಲ್ಲೆಯ ಪವಿತ್ರ ಧಾರ್ಮಿ ಕ ತೀರ್ಥ ಕ್ಷೇತ್ರಗಳಿಗೆ ಪ್ರವಾಸಿಗರು ಆಗಮಿಸಿ ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆ ಹಾಳು ಮಾಡುತ್ತಿರುವುದು ಹಿಂದೂಗಳ ಭಾವನೆಗೆ ಘಾಸಿ ಉಂಟಾಗಿದೆ.ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ದತ್ತಪೀಠ, ಗಾಳಿಕೆರೆ, ಕಲ್ಲತ್ತಿಗಿರಿಗಳಂಥ ಧಾರ್ಮಿಕ ಕ್ಷೇತ್ರಗಳಿಗೆ ಬರುವವರು ಮದ್ಯಪಾನ, ಧೂಮಪಾನ ಮಾಡಿ ಅಸಭ್ಯ ರೀತಿಯಲ್ಲಿ ಮೋಜು-ಮಸ್ತಿಯಿಂದ ವರ್ತಿಸುವ ಜತೆಗೆ ಪ್ಲಾಸ್ಟಿಕ್ ಬಳಕೆ ಮಾಡಿ ಪರಿಸರ ಹಾನಿ ಮಾಡುತ್ತಿದ್ದಾರೆ ಎಂದು ದೂರಿದರು.
ಕಳೆದ ಸೋಮವಾರ ಮುಳ್ಳಯ್ಯನಗಿರಿ ದೇವಸ್ಥಾನ ಆವರಣದಲ್ಲಿ ಪ್ರವಾಸಿಗರು ಚಪ್ಪಲಿ ಧರಿಸಿ ಓಡಾಡುತ್ತಿರುವುದು ಅಲ್ಲದೇ ಪಾವಿತ್ರ್ಯತೆಗೆ ಧಕ್ಕೆ ತಂದಿದ್ದಾರೆ. ಇದು ಸಮಸ್ತ ಹಿಂದೂಗಳ ಭಾವನೆ ಕೆರಳಿಸುವಂತಾಗಿದೆ. ಆದ್ದರಿಂದ ಜಿಲ್ಲಾಡಳಿತ ಧಾರ್ಮಿಕ ಕ್ಷೇತ್ರಗಳಿಗೆ ಬರುವ ಪ್ರವಾಸಿಗರಿಗೆ ಅಲ್ಲಿನ ಸಂಪ್ರದಾಯ, ಪರಂಪರೆ ಕಾಪಾಡುವಂತೆ ಸೂಕ್ತ ಕ್ರಮ ವಹಿಸಬೇಕು ಎಂದರು.ಈ ಸಂದರ್ಭದಲ್ಲಿ ವಿಹಎಚ್‌ಪಿ ಮುಖಂಡರಾದ ಶ್ಯಾಮ್ ವಿ.ಗೌಡ, ಶಿವಣ್ಣ, ಪ್ರದೀಪ್ ಮೊದಲಾದವರಿದ್ದರು.- ಫೋಟೋ----
ಚಿಕ್ಕಮಗಳೂರು ಜಿಲ್ಲೆಯ ಧಾರ್ಮಿಕ ಕ್ಷೇತ್ರದಲ್ಲಿ ಪಾವಿತ್ರ್ಯತೆ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ವಿಶ್ವ ಹಿಂದೂ ಪರಿಷತ್‌ನಿಂದ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಈ ವೇಳೆ ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ರಂಗನಾಥ್, ಮುಖಂಡರಾದ ಶ್ಯಾಮ್ ವಿ.ಗೌಡ, ಶಿವಣ್ಣ, ಪ್ರದೀಪ್ ಇದ್ದರು.