7ನೇ ವೇತನ ಜಾರಿಗಾಗಿ ಸಚಿವ ಮಧುಗೆ ಮನವಿ

KannadaprabhaNewsNetwork |  
Published : Jul 01, 2024, 01:48 AM IST
೩೦ಬಿಎಸ್ವಿ೦೪- ಸೊರಬ ತಾಲೂಕಿನ ಶಿರಾಳಕೊಪ್ಪದಲ್ಲಿ ಗ್ರಾಮೀಣ ಶಿಕ್ಷಕರಿಗೆ ಗ್ರಾಮೀಣ ಭತ್ಯೆ ಹಾಗೂ ಏಳನೇ ವೇತನ ಶೀಘ್ರ ಜಾರಿಗೆ ತರುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಭಾನುವಾರ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ವಿಜಯಪುರ ಜಿಲ್ಲಾ ಘಟಕದಿಂದ ಭಾನುವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಗ್ರಾಮೀಣ ಭಾಗದ ಶಿಕ್ಷಕರಿಗೆ ಗ್ರಾಮೀಣ ಭತ್ಯೆ ಹಾಗೂ ಏಳನೇ ವೇತನ ಶೀಘ್ರ ಜಾರಿಗೆ ತರುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಶಿರಾಳಕೊಪ್ಪದಲ್ಲಿ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕ, ವಿಜಯಪುರ ಜಿಲ್ಲಾ ಘಟಕದಿಂದ ಭಾನುವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಗ್ರಾಮೀಣ ಭಾಗದ ಶಿಕ್ಷಕರಿಗೆ ಗ್ರಾಮೀಣ ಭತ್ಯೆ ಹಾಗೂ ಏಳನೇ ವೇತನ ಶೀಘ್ರ ಜಾರಿಗೆ ತರುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶರಣಪ್ಪಗೌಡ ಆರ್‌.ಕೆ., ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಲೇಶ ನವಲೆ, ಸಂಘದ ರಾಜ್ಯ ಕಾರ್ಯಾಧ್ಯಕ್ಷ ಸಿದ್ದಣ್ಣ ಉಕ್ಕಲಿ, ರಾಜ್ಯ ಸಂಚಾಲಕ ಲಕ್ಕಮ್ಮನವರ, ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ ದೊಡ್ಡಮನಿ, ಜಿಲ್ಲಾ ಸಂಚಾಲಕ ವಸಂತರಾವ ಪವಾರ, ಬ.ಬಾಗೇವಾಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸೊಸೈಟಿ ಅಧ್ಯಕ್ಷ ಹಾಗೂ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಆರ್‌.ಡಿ.ಪವಾರ ಇತರರು ಇದ್ದರು ಎಂದು ಸಂಘದ ರಾಜ್ಯ ಕಾರ್ಯಧ್ಯಕ್ಷ ಸಿದ್ದಣ್ಣ ಉಕ್ಕಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ