ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲು ಮನವಿ

KannadaprabhaNewsNetwork |  
Published : Oct 17, 2025, 01:01 AM IST
ಭದ್ರಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗು ತಾಲೂಕುಪಂಚಾಯಿತಿ ಕಟ್ಟಡಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದ್ದಾರೆ | Kannada Prabha

ಸಾರಾಂಶ

ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ತಾಲೂಕು ಪಂಚಾಯಿತಿ ಕಟ್ಟಡಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದ್ದಾರೆ.

ಭದ್ರಾವತಿ: ತಾಲೂಕಿನ ಗ್ರಾಮೀಣ ಭಾಗದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ತಾಲೂಕು ಪಂಚಾಯಿತಿ ಕಟ್ಟಡಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕರು, ಪ್ರಸ್ತುತ ತಾಲೂಕು ಪಂಚಾಯಿತಿ ಕಟ್ಟಡ ತುಂಬಾ ಹಳೆಯದಾಗಿದ್ದು, ಈ ಕಟ್ಟಡ ನವೀಕರಣಗೊಳಿಸುವುದು ಸಹ ಕಷ್ಟಕರವಾಗಿದೆ. ಈ ಹಿನ್ನಲೆಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಅನುದಾನ ಮಂಜೂರಾತಿ ಮಾಡುವಂತೆ ಶಾಸಕರು ಕೋರಿದ್ದಾರೆ. ತಾಲೂಕಿನ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬಹಳಷ್ಟು ರಸ್ತೆಗಳು ಹಾಳಾಗಿದ್ದು, ಗ್ರಾಮಗಳಲ್ಲಿ ಗುಣಮಟ್ಟದ ರಸ್ತೆಗಳು ನಿರ್ಮಾಣಗೊಂಡಲ್ಲಿ ಭವಿಷ್ಯದಲ್ಲಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ರಸ್ತೆಗಳು ಸಹಕಾರಿಯಾಗಲಿವೆ. ಈ ಹಿನ್ನಲೆಯಲ್ಲಿ ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಸವಣ್ಣನವರ ವಚನ ಸಾಹಿತ್ಯ ಯುವ ಜನತೆ ತಿಳಿಯಬೇಕು
ಮಾನವನ ಘನತೆ ಎತ್ತಿಹಿಡಿಯುವ ಹಕ್ಕುಗಳು