ಕಸ್ತೂರಿರಂಗನ್ ವರದಿ ಪುನರ್ ಪರಿಶೀಲಿಸಲು ಮನವಿ

KannadaprabhaNewsNetwork |  
Published : Sep 11, 2026, 02:30 AM IST
ಯಲ್ಲಾಪುರದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಉಪತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ ಸುಮಾರು ೪೦ ಲಕ್ಷ ಜನರಲ್ಲಿ ಕಸ್ತೂರಿರಂಗನ್ ವರದಿ ಜಾರಿ ಕುರಿತು ಆತಂಕ ಮೂಡಿದ್ದು, ಅವರ ಜೀವನೋಪಾಯ ಹಾಗೂ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು.

ಯಲ್ಲಾಪುರ: ಕಸ್ತೂರಿರಂಗನ್ ವರದಿ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲು ಮತ್ತು ಕೇಂದ್ರ ಸರ್ಕಾರಕ್ಕೆ ವೈಜ್ಞಾನಿಕ ವಿಶ್ಲೇಷಣೆಯೊಂದಿಗೆ ಆಕ್ಷೇಪಣೆ ಸಲ್ಲಿಸಲು ಆಗ್ರಹಿಸಿ, ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಆದಿವಾಸಿ ಸಮನ್ವಯ ಸಮಿತಿಯಿಂದ ಉಪತಹಸೀಲ್ದಾರ್ ಕೆ.ಎಸ್. ಫರ್ನಾಂಡೀಸ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಸೇರಿಸುವ ಕಸ್ತೂರಿರಂಗನ್ ವರದಿ ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಸಮರ್ಪಕ ಆಕ್ಷೇಪಣೆ ಸಲ್ಲಿಸುವುದು ಮುಖ್ಯವಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನದಲ್ಲಿ ಕೂಲಂಕಷವಾಗಿ ಚರ್ಚಿಸಿ, ವೈಜ್ಞಾನಿಕ ನೆಲೆಗಟ್ಟಿನಲ್ಲಿ ಆಕ್ಷೇಪಣೆ ಸಲ್ಲಿಸಲು ತೀರ್ಮಾನ ತೆಗೆದುಕೊಳ್ಳಬೇಕು.

ರಾಜ್ಯದ ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುವ ಸುಮಾರು ೪೦ ಲಕ್ಷ ಜನರಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಆತಂಕ ಮೂಡಿದ್ದು, ಅವರ ಜೀವನೋಪಾಯ ಹಾಗೂ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ ಹೊರಡಿಸಿರುವ ೭ನೇ ಕರಡು ಅಧಿಸೂಚನೆಗೂ ರಾಜ್ಯ ಸರ್ಕಾರ ತನ್ನ ಆಕ್ಷೇಪಣೆ ಸಲ್ಲಿಸಬೇಕು ಮತ್ತು ವೈಜ್ಞಾನಿಕ ತಳಹದಿಯಲ್ಲಿ ಪರಿಶೀಲನೆ ನಡೆಯಬೇಕು.

ಜಿಲ್ಲೆಯ ೫೬೭ ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಗೆ ಬರುತ್ತವ ಕೃಷಿ, ನೆಡುತೋಪು ಸೇರಿದಂತೆ ಜನರ ದೈನಂದಿನ ಜೀವನಾಧಾರ ಚಟುವಟಿಕೆಗಳ ಮೇಲೆ ನಿರ್ದಿಷ್ಟ ಪರಿಣಾಮ ಬೀರಲಿದೆ. ಈ ಹಿನ್ನೆಲೆ ಸರ್ಕಾರ ವಿಶೇಷ ವಿಧಾನಸಭಾ ಅಧಿವೇಶನದಲ್ಲಿ ಸೂಕ್ತ ರೀತಿಯಲ್ಲಿ ಚರ್ಚೆ ಮಾಡಿ ವೈಜ್ಞಾನಿಕವಾಗಿ ಪುನರ್ ಪರಿಶೀಲನೆಗೆ ಆಗ್ರಹಿಸಿದ್ದಾರೆ.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತಾರಾಮ ನಾಯಕ, ತಾಲೂಕು ಸಂಚಾಲಕ ನಾಗಪ್ಪ ಸಿದ್ದಿ, ಆದಿವಾಸಿ ಸಮನ್ವಯ ಸಮಿತಿಯ ಜಿಲ್ಲಾಧ್ಯಕ್ಷ ಪ್ರೇಮಾನಂದ ವೆಳಿಪ್, ತಾಲೂಕು ಸಂಚಾಲಕಿ ಲಕ್ಷ್ಮಿ ಸಿದ್ದಿ, ಪ್ರಮುಖರಾದ ರಾಜೇಶ್ ಗಾವಡಾ, ಗಣಪತಿ ಸಿದ್ದಿ, ಪ್ರಮುಖರಾದ ಜೋನ್ ಬಿಳ್ಕಕರ್, ಬಜ್ಜು ಪಿಂಗಳೆ, ನಾರಾಯಣ ಕುಣಬಿ, ಗೌರಿ ಮರಾಠೆ, ಸುಜಾತಾ ಸಿದ್ದಿ, ರಾಜೇಶ್ ಗೌಡ, ಭೀಮಣ್ಣ ಬೋವಿ, ಡಿ. ಶ್ಯಾಮಸನ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

80 ಡೆಸಿಬಲ್‌ ಮೀರಿದರೆ ಡಿಜೆ ಬಾಕ್ಸ್‌ ವಶ, ಪ್ರಕರಣ ದಾಖಲು
ಜನಾರ್ದನ ಪೂಜಾರಿ ಆಪ್ತ ಪದ್ಮರಾಜ್‌ ಪೂಜಾರಿ ದ.ಕ. ಕಾಂಗ್ರೆಸ್‌ ಅಧ್ಯಕ್ಷ