ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗಿನ ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ಸೂಕ್ತ ವ್ಯವಸ್ಥೆಯೊಂದಿಗೆ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆ, ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾದಕ ವಸ್ತುಗಳ ( ಡ್ರಗ್ಸ್ ) ಮಾರಾಟ ಮತ್ತು ಉಪಯೋಗ ನಿಯಂತ್ರಣ ಹಾಗೂ ಪ್ರವಾಸಿ ತಾಣಗಳಲ್ಲಿ ಪೊಲೀಸ್ ಔಟ್‌ಪೋಸ್ಟ್‌ಗಳ ಸ್ಥಾಪನೆ, ಪೊಲೀಸ್ ಇಲಾಕೆ ದಿಡೀರ್ ಪರಿಶೀಲನೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಬಿಂದುಮಣಿ ಅವರು, ಈ ಎಲ್ಲಾ ವಿಚಾರಗಳ ಕುರಿತು ಪ್ರಾಮಾಣಿಕವಾಗಿ ಸಹಕರಿಸುವುದಾಗಿ ಭರವಸೆ ನೀಡಿದರು. ಜೊತೆಗೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಕೈಜೋಡಿಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟರು.ಪ್ರಮುಖವಾಗಿ 2003ರಿಂದ ಕೋವಿ ತರಬೇತಿ ಪ್ರಮಾಣಪತ್ರ ನೀಡದಿರುವ ಸಮಸ್ಯೆ ಕುರಿತು ವಿವರಿಸಿದೆ ವಿಷಯವನ್ನು ಪರಿಗಣಿಸಿ ಬಿಂದುಮಣಿ ಅವರು, ಮುಂದಿನ ತಿಂಗಳು ಫೆಬ್ರವರಿಯಲ್ಲಿ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.