ಯಕ್ಷಗಾನ ರಾಜ್ಯಕಲೆ ಎಂದು ಘೋಷಿಸಲು ಸರ್ಕಾರಕ್ಕೆ ಮನವಿ

KannadaprabhaNewsNetwork |  
Published : Oct 19, 2026, 02:45 AM IST
ಡಾ.ತಲ್ಲೂರು ಅವರು ಕನ್ನಡ - ಸಂಸ್ಕೃತಿ ಸಚಿವರಿಗೆ ಮನವಿ ಸಲ್ಲಿಸಿದರು  | Kannada Prabha

ಸಾರಾಂಶ

ಯಕ್ಷಗಾನ ಕಲೆಯನ್ನು ರಾಜ್ಯ ಕಲೆಯಾಗಿ ಘೋಷಿಸುವಂತೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದ ಅಕಾಡೆಮಿಯ ನಿಯೋಗ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.

ಉಡುಪಿ : ಯಕ್ಷಗಾನ ಕಲೆಯನ್ನು ರಾಜ್ಯ ಕಲೆಯಾಗಿ ಘೋಷಿಸುವಂತೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದ ಅಕಾಡೆಮಿಯ ನಿಯೋಗ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.ಮನವಿ ಸ್ವೀಕರಿಸಿದ ಸಚಿವರು, ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.ಯಕ್ಷಗಾನ ಇಂದು ಕರ್ನಾಟಕದ ಗಡಿಗಳನ್ನು ಮೀರಿ ಭಾರತೀಯ ಸಾಂಪ್ರದಾಯಿಕ ರಂಗಭೂಮಿಯ ಪ್ರಮುಖ ರೂಪವಾಗಿ ಗುರುತಿಸಿಕೊಂಡಿದೆ. ಭಾರತ ಸರ್ಕಾರದ ಸಂಗೀತ ನಾಟಕ ಅಕಾಡೆಮಿ ತನ್ನ ಅಮೂರ್ತ ಸಾಂಸ್ಕೃತಿಕ ಪರಂಪರೆ ಪಟ್ಟಿಯಲ್ಲಿ ಯಕ್ಷಗಾನವನ್ನು ಕರ್ನಾಟಕದ ಸಾಂಪ್ರದಾಯಿಕ ರಂಗ ರೂಪವೆಂದು ದಾಖಲಿಸಿದೆ. ಅಲ್ಲಿ ಯಕ್ಷಗಾನವನ್ನು ನೃತ್ಯ, ಸಂಗೀತ, ಸಂಭಾಷಣೆ, ವೇಷಭೂಷಣ, ಮೇಕಪ್ ಮತ್ತು ರಂಗತಂತ್ರಗಳನ್ನು ಒಟ್ಟುಗೂಡಿಸುವ ವಿಶಿಷ್ಟ ಕಲಾರೂಪವೆಂದು ವಿವರಿಸಲಾಗಿದೆ. ಇದು ಯಕ್ಷಗಾನದ ರಾಷ್ಟ್ರೀಯ ಮಹತ್ವಕ್ಕೆ ಬಹಳ ದೊಡ್ಡ ಮಾನ್ಯತೆಯಾಗಿದೆ. ಈ ಎಲ್ಲಾ ಆಯಾಮಗಳನ್ನು ಪರಾಮರ್ಶಿಸಿದಾಗ ಯಕ್ಷಗಾನ ಕಲೆಯನ್ನು ರಾಜ್ಯ ಕಲೆಯಾಗಿ ಘೋಷಿಸಲು ಎಲ್ಲಾ ರೀತಿಯ ಅರ್ಹತೆಯನ್ನು ಪಡೆದಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.ಕೇರಳ ರಾಜ್ಯದಲ್ಲಿ ಕಥಕ್ಕಳಿ ಮತ್ತು ಮೋಹಿನಿಯಾಟ್ಟಂ, ಮಹಾರಾಷ್ಟ್ರದಲ್ಲಿ ಲಾವಣಿ, ಆಂಧ್ರಪ್ರದೇಶದಲ್ಲಿ ಕೂಚಿಪುಡಿ ರಾಜ್ಯ ಕಲೆಯಾಗಿ ಮನ್ನಣೆ ಪಡೆದಿರುವಂತೆಯೇ ಯಕ್ಷಗಾನವನ್ನು ರಾಜ್ಯ ಕಲೆಯಾಗಿ ಘೋಷಿಸಿ ತಮ್ಮ ಅಧಿಕಾರಾವಧಿಯಲ್ಲಿಯೇ ಈ ಕಲೆಯ ಸಮಗ್ರ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಕ್ಷಗಾನದಿಂದ ಪ್ರೌಢ ವ್ಯಕ್ತಿತ್ವ ರೂಪು: ರಮೇಶ್ ಭಟ್ ಎಸ್.ಜಿ
ನಾಪೋಕ್ಲು ಸುತ್ತಮುತ್ತ ಬಿರುಸಿನ ಮಳೆ: ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ಅಡಚಣೆ