ಕನ್ನಡಪ್ರಭ ವಾರ್ತೆ ಹಾವೇರಿ
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ತಿಂಗಳಿಂದ ರಾಜ್ಯ ಮತ್ತು ರಾಷ್ಟ್ರ ನಾಯಕರ ಅನುಮತಿ ಮೇರೆಗೆ ಹಾವೇರಿ ಲೋಕಸಭಾ ಕ್ಷೇತ್ರದ ಆಕಾಂಕ್ಷಿಯಾಗಿ ಪ್ರಚಾರ ನಡೆಸುತ್ತಿದ್ದೇನೆ. ಜಿಲ್ಲೆಯ ಎಲ್ಲಾ ೮ ತಾಲೂಕುಗಳ ಕಾಂಗ್ರೆಸ್ ಶಾಸಕರು, ಹಾಲಿ- ಮಾಜಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ, ಅವರೂ ಸಹ ಬೆಂಬಲಿಸುವ ಆಶಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಗ್ರಾಮ ಪಂಚಾಯಿತಿ ಹಾಗೂ ತಾಲೂಕ ಪಂಚಾಯಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸದಸ್ಯರು ಸೇರಿದಂತೆ ೧೦ಸಾವಿರಕ್ಕೂ ಹೆಚ್ಚು ಸದಸ್ಯರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದೇನೆ ಮತ್ತು ಪತ್ರ ಬರೆದು ಬೆಂಬಲಿಸುವಂತೆ ಮನವಿ ಮಾಡಿದ್ದೇನೆ ಎಂದರು.
ಕ್ಷೇತ್ರದಲ್ಲಿ ನಾನು ಕಳೆದ ೪೦ ವರ್ಷಗಳಿಂದ ಸಕ್ರಿಯನಾಗಿದ್ದು, ಕಳೆದ ನಾಲ್ಕು ಚುನಾವಣೆಗಳಲ್ಲಿ ವಿಧಾನಪರಿಷತ್‌ಗೆ ಸ್ಪರ್ಧಿಸಿ ಪರಿಚಿತನಾಗಿದ್ದೇನೆ. ಅಲ್ಲದೇ ನನ್ನದೇ ಆದ ವೈಯಕ್ತಿಕ ನೆಟ್‌ವರ್ಕ್ ಇದೆ. ನನ್ನ ಕಾರ್ಯಕರ್ತರೂ ಸಹ ಟಿಕೆಟ್ ಸಿಕ್ಕಲ್ಲಿ ಶ್ರಮಿಸಲು ಪಣ ತೊಟ್ಟು ನಿಂತಿದ್ದಾರೆ. ಈ ಹಿನ್ನೆಲೆ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಹೈಕಮಾಂಡ್‌ಗೂ ಮನವಿ ಸಲ್ಲಿಸಿದ್ದೇನೆ. ಸ್ಥಳೀಯನಾಗಿರುವ ನನಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೇನೆ ಎಂದರು.ಜಿಲ್ಲೆಯಲ್ಲಿ ಅಭಿವೃದ್ಧಿಗೆ ಆದ್ಯತೆ ಸಿಗಬೇಕಿದೆ, ಕೈಗಾರಿಕೆ, ಉದ್ಯೋಗ ಸೃಷ್ಟಿ, ರಸ್ತೆ, ನೀರು ಸೌಲಭ್ಯಗಳನ್ನು ಉತ್ತಮಗೊಳಿಸಬೇಕಿದೆ. ಇವುಗಳ ಸಾಕಾರಕ್ಕೆ ನನಗೆ ಆದ್ಯತೆ ಕೊಡಿ ಎಂದು ಮನವಿ ಮಾಡಿದರು. ಈ ವೇಳೆ ಗೋಪಾಲರೆಡ್ಡಿ ಮತ್ತು ಎಸ್.ಎಚ್. ಹುಚಗೊಂಡ್ರ ಇದ್ದರು.