ಭೂಪರಿಹಾರ ನೀಡಲು ಕೇಂದ್ರಕ್ಕೆ ಮನವರಿಕೆ ಮಾಡಿ: ಕೇಂದ್ರ ಸಚಿವ ಎಚ್ಡಿಕೆಗೆ ಮನವಿ

KannadaprabhaNewsNetwork |  
Published : Oct 26, 2025, 02:00 AM IST
ಪೋಟೊ 7 : ಸೋಂಪುರ ಹೋಬಳಿಯಲ್ಲಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ಶೀಘ್ರವಾಗಿ ಪರಿಹಾರ ನೀಡುವಂತೆ ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪರಮಪೂಜ್ಯರು, ರೈತರು ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ದಾಬಸ್‍ಪೇಟೆ: ಸ್ಯಾಟಲೈಟ್ ನಗರ ರಿಂಗ್ ರಸ್ತೆ ನಿಮಾರ್ಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೋಂಪುರಹೋಬಳಿ ಹಾಗೂ ಮಾಗಡಿ ತಾಲೂಕಿನ ರೈತರ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಂಡು ಸುಮಾರು 6 ವರ್ಷಗಳಿಂದ ಪರಿಹಾರ ನೀಡುತ್ತಿಲ್ಲ, ಈಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕೆಂದು ಒತ್ತಾಯಿಸಿ ವಿವಿಧ ಮಠಗಳ ಶ್ರೀಗಳು, ಮಾಜಿ ಶಾಸಕ ಎಂ.ವಿ.ನಾಗರಾಜು ಸೇರಿದಂತೆ ನೂರಾರು ರೈತರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಮನವಿ ಪತ್ರ ಸಲ್ಲಿಸಿದರು.

ದಾಬಸ್‍ಪೇಟೆ: ಸ್ಯಾಟಲೈಟ್ ನಗರ ರಿಂಗ್ ರಸ್ತೆ ನಿಮಾರ್ಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೋಂಪುರಹೋಬಳಿ ಹಾಗೂ ಮಾಗಡಿ ತಾಲೂಕಿನ ರೈತರ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಂಡು ಸುಮಾರು 6 ವರ್ಷಗಳಿಂದ ಪರಿಹಾರ ನೀಡುತ್ತಿಲ್ಲ, ಈಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕೆಂದು ಒತ್ತಾಯಿಸಿ ವಿವಿಧ ಮಠಗಳ ಶ್ರೀಗಳು, ಮಾಜಿ ಶಾಸಕ ಎಂ.ವಿ.ನಾಗರಾಜು ಸೇರಿದಂತೆ ನೂರಾರು ರೈತರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಹೊನ್ನಮ್ಮಗವಿ ಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಭಾರತ ಮಾಲಾ ಯೋಜನೆಯಡಿ 2019ರಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಭೂಮಿ ಕಳೆದುಕೊಂಡ ರೈತರಿಗೆ ಇದುವರೆಗೆ ಪರಿಹಾರ ನೀಡಿಲ್ಲ. ಭೂಸ್ವಾಧೀನದ ಹಣ ಬರಲಿದೆ ಎಂದು ರೈತರು ಸಾಲ ಮಾಡಿ ಮನೆ ನಿರ್ಮಿಸಿ, ಮದುವೆ ಮಾಡಿದ್ದಾರೆ. ಇದೀಗ ಸಾಲಕ್ಕೆ ಬಡ್ಡಿ ಕಟ್ಟಲು ಪರದಾಡುತ್ತಿದ್ದಾರೆ. ದ್ದಾರೆ. ಶೀಘ್ರವಾಗಿ ಹಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಭೂಸ್ವಾಧೀನಕ್ಕೆ ಬಿಡುವಂತೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಕಂಬಾಳು ಮಠದ ಶ್ರೀ ಚನ್ನವೀರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಈ ಯೋಜನೆಗೆ ನಮ್ಮ ಮಠಗಳ ಜಮೀನು ಸ್ವಾಧೀನವಾಗಿದ್ದು, ಯಾವುದೇ ಅಭಿವೃದ್ದಿಪಡಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಈ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಕೇಂದ್ರ ಸಚಿವರುಗಳಾದ ಹೆಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಸಂಸದರಾದ ಮಂಜುನಾಥ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಾರಿಗೆ ಸಚಿವರಾದ ನಿತೀನ್ ಗಡ್ಕರಿರವರ ಜೊತೆ ಚರ್ಚೆ ನಡೆಸಿದ್ದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಪ್ರಧಾನ ಮಂತ್ರಿಗಳು ರೈತರ ಸಂಕಷ್ಟಗಳನ್ನು ಅರಿತುಕೊಂಡು ಶೀಘ್ರವಾಗಿ ಪರಿಹಾರ ನೀಡಿದರೆ ರೈತರ ಸಮಸ್ಯೆಗಳು ಬಗೆಹರಿಯಲಿವೆ ಎಂದರು.

ಮಾಜಿ ಶಾಸಕ ಎಂ.ವಿ.ನಾಗರಾಜು ಮಾತನಾಡಿ ಸೋಂಪುರ ಹೋಬಳಿ ಹಾಗೂ ಮಾಗಡಿ ತಾಲೂಕಿನ ಜನ ಬಹಳ ವರ್ಷಗಳಿಂದ ಜಮೀನು ಸ್ವಾಧೀನಪಡಿಸಿಕೊಂಡಿದ್ದು ಅಭಿವೃದ್ದಿಯಾಗದೇ ಹಾಗೆಯೇ ಉಳಿದಿದ್ದು, ಈ ಭೂಸ್ವಾಧೀನದ ಜಾಗವೂ ನನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಿನ್ನೆಲೆಯಲ್ಲಿ ಹೆಚ್.ಡಿ.ಕೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ. ಶೀಘ್ರದಲ್ಲೇ ನಮ್ಮ ಪಕ್ಷದ ಮಾಜಿ ಸಿಎಂ ಬಿಎಸ್ ವೈ, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಸೇರಿದಂತೆ ರಾಜ್ಯ ನಾಯಕರ ಗಮನಕ್ಕೆ ತಂದು ರಾಜ್ಯದಿಂದ ನಿಯೋಗವೊಂದು ಪ್ರಧಾನಿಯವರನ್ನು ಭೇಟಿ ಮಾಡಲು ಸಮಯ ನಿಗದಿಪಡಿಸುತ್ತೇನೆ ಎಂದರು.

ರೈತಮುಖಂಡ ಕಂಬಾಳು ಉಮೇಶ್ ಮಾತನಾಡಿ, ತಾತ್ಕಾಲಿಕವಾಗಿ ಯೋಜನೆ ನಿಲ್ಲಿಸಿದ್ದು, ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಸ್ವಾಮೀಜಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ರೈತರಿಗೆ ಭೂಮಿಯೂ ಇಲ್ಲ, ಪರಿಹಾರವೂ ಸಿಗದಂತಾಗಿದೆ. ಸೂಕ್ತ ಪರಿಹಾರ ವಿತರಿಸಬೇಕು, ಇಲ್ಲವೇ ಭೂಮಿ ವಾಪಸ್ ನೀಡಲಿ, ಈ ಬಗ್ಗೆ ಸರ್ಕಾರ ಸ್ಪಷ್ಟಿಕರಣ ನೀಡಬೇಕು ಎಂದು ಹೇಳಿದರು.

ಕೋಟ್

ಭೂಪರಿಹಾರಕ್ಕೆ ಸಂಬಂಧಿಸಿದಂತೆ ಮಾಗಡಿ, ರಾಮನಗರ, ಆನೇಕಲ್ ಹಾಗೂ ನೆಲಮಂಗಲ ರೈತರು ಬಹಳ ದಿನಗಳಿಂದಲೂ ಭೇಟಿ ಮಾಡಿ ಮನವಿ ಮಾಡುತ್ತಿದ್ದಾರೆ. ಈ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹೆದ್ದಾರಿ, ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜತೆ ಮಾತನಾಡಿದ್ದೇನೆ. ಸಾರಿಗೆ ಇಲಾಖೆಯಿಂದ ಪ್ರಧಾನಿ ಕಚೇರಿಗೆ ಕಡತ ಹೋಗಿದ್ದು, ಕ್ಯಾಬಿನೇಟ್ ನಲ್ಲಿ ಮಂಜೂರಾಗಬೇಕಿದೆ. ಶೀಘ್ರದಲ್ಲೇ ಕ್ಯಾಬಿನೆಟ್ ನಲ್ಲಿ ಅನುಮತಿ ಸಿಗುವ ವಿಶ್ವಾಸವಿದೆ. ಹೆಚ್.ಡಿ.ಕುಮಾರಸ್ವಾಮಿ

ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವರು

ಪೋಟೊ 7 : ಸೋಂಪುರ ಹೋಬಳಿಯಲ್ಲಿ ಭೂಸ್ವಾಧೀನಪಡಿಸಿಕೊಂಡಿರುವ ಜಮೀನುಗಳಿಗೆ ಶೀಘ್ರವಾಗಿ ಪರಿಹಾರ ನೀಡುವಂತೆ ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪರಮಪೂಜ್ಯರು, ರೈತರು ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ