ಬಜೆಟ್ಟಲ್ಲಿ ಉಡುಪಿ ಕ್ಷೇತ್ರಕ್ಕೆ ವಿಶೇಷ ಅನುದಾನಕ್ಕೆ ಯಶ್ಪಾಲ್ ಸುವರ್ಣ ಸಿಎಂಗೆ ಮನವಿ

KannadaprabhaNewsNetwork |  
Published : Feb 21, 2025, 12:48 AM IST
20ಯಶ್‌ಪಾಲ್‌ | Kannada Prabha

ಸಾರಾಂಶ

ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ಹಾಗೂ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಮುಂಬರುವ ರಾಜ್ಯ ಬಜೆಟ್‌ನಲ್ಲಿ ಉಡುಪಿ ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ವಿಶೇಷ ಅನುದಾನ ಹಾಗೂ ತುಳುನಾಡಿನ ಧಾರ್ಮಿಕ ಆಚರಣೆಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದರು.ಮುಂಬರುವ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಉತ್ತಮ ಸಾಧನೆ ಮಾಡುತ್ತಿರುವ ಉಡುಪಿ ಜಿಲ್ಲೆಯ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ, ನೂತನ ಜಿಲ್ಲಾಸ್ಪತ್ರೆಯ ಕಟ್ಟಡ ಕಾರ್ಯಾಚರಣೆಗೆ ಅಗತ್ಯವಿರುವ 48.36 ಕೋಟಿ ರು. ಹೆಚ್ಚುವರಿ ಅನುದಾನ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಗೆ ಅನುದಾನ, ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಡೀಸೆಲ್ ಸಬ್ಸಿಡಿ, ನಾಡದೋಣಿಗಳಿಗೆ ಸೀಮೆ ಎಣ್ಣೆ ಪೂರೈಕೆ, ಬಂದರು ಅಭಿವೃದ್ಧಿ ಮತ್ತು ಡ್ರೆಜ್ಜಿಂಗ್, ಸೀ ಆಂಬ್ಯುಲೆನ್ಸ್, ರೈತಾಪಿ ವರ್ಗಗಳಿಗೆ ನೀಡುವ ಸಾಲ ಸೌಲಭ್ಯ ಮೀನುಗಾರರರಿಗೂ ವಿಸ್ತರಣೆ, ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ, ನಾರಾಯಣ ಗುರು ಅಭಿವದ್ಧಿ ನಿಗಮಕ್ಕೆ 500 ಕೋಟಿ ಅನುದಾನ ಮೀಸಲು, ಬ್ರಹ್ಮಾವರ ಕೃಷಿ ಕೇಂದ್ರದಲ್ಲಿ ಕೃಷಿ ಕಾಲೇಜು ಸ್ಥಾಪನೆ, ಸರ್ಕಾರಿ ಬಸ್ ಸೇವೆ ಹೆಚ್ಚಳ, ಕ್ರೀಡಾ ಚಟುವಟಿಕೆಗಳಿಗೆ ಕ್ರೀಡಾಂಗಣ ನಿರ್ಮಾಣ, ಬ್ರಹ್ಮಾವರದಲ್ಲಿ ಪ್ರವಾಸಿ ಬಂಗಲೆ, ಸರ್ಕಾರಿ ವೈದ್ಯಕೀಯ ಕಾಲೇಜು, ಪರ್ಯಾಯ ಮಹೋತ್ಸವಕ್ಕೆ ವಿಶೇಷ 25 ಕೋಟಿ ಅನುದಾನ, ಮಣ್ಣಪಳ್ಳ ಕೆರೆ ಅಭಿವೃದ್ಧಿ, ಕಂಬಳ ಕ್ರೀಡೆಗೆ ಅನುದಾನ, ಉಡುಪಿ ನಗರದಲ್ಲಿ ಹೆಚ್ಚುವರಿಯಾಗಿ ಉಪ ವಿಭಾಗಾಧಿಕಾರಿಗಳ ಕಚೇರಿ ಮಂಜೂರು, ಕರಾವಳಿ ಜಿಲ್ಲೆಯ ಮರಳು ಸಮಸ್ಯೆ ಪರಿಹಾರ ರೂಪಿಸಲು ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ಧಾರ್ಮಿಕ ಆಚರಣೆಗೆ ಅವಕಾಶ ಸಿಎಂ ಭರವಸೆ:ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆ ಕಂಬಳ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಹಾಗೂ ದೈವಾರಾಧನೆಯ ಚೌಕಟ್ಟಿನಲ್ಲಿ ರಕ್ತಾಹಾರದ ಕಲ್ಪನೆಯಲ್ಲಿ ನಡೆಯುವ ಕೋಳಿ ಅಂಕಗಳಿಗೆ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿ ಆಚರಣೆಗೆ ಅನನೂಕೂಲತೆ ಉಂಟಾಗಿರುವ ಬಗ್ಗೆ ಶಾಸಕ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಈ ಆಚರಣೆಗೆ ಅಡ್ಡಿ ಮಾಡದೇ ಅವಕಾಶ ನೀಡುವ ಭರವಸೆ ನೀಡಿದರು ಎಂದು ತಿಳಿಸಿದ್ದಾರೆ.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...