ರಾಜ್ಯ ಸರ್ಕಾರದಿಂದ ಮುಸ್ಲಿಮರ ತುಷ್ಟೀಕರಣ: ವಿಜಯೇಂದ್ರ

KannadaprabhaNewsNetwork |  
Published : May 27, 2024, 01:03 AM ISTUpdated : May 27, 2024, 08:47 AM IST
ಚಿಕ್ಕಮಗಳೂರಿನಲ್ಲಿಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಜಿಸಚಿವ ಸಿ.ಟಿ. ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್‌ ಶೆಟ್ಟಿ ಇದ್ದರು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿರುವುದರಿಂದ ರಾಜ್ಯದ ಜನ ತೊಂದರೆ ಅನುಭವಿಸು ವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

 ಚಿಕ್ಕಮಗಳೂರು ;  ರಾಜ್ಯ ಸರ್ಕಾರ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿರುವುದರಿಂದ ರಾಜ್ಯದ ಜನ ತೊಂದರೆ ಅನುಭವಿಸು ವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿಧಾನಸಭೆಯಲ್ಲಿ ಪಾಕ್ ಪರ ಘೋಷಣೆ, ಲವ್ ಜಿಹಾದ್‌ ಪ್ರಕರಣಗಳು, ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಕೊಲೆ, ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು ಹಿನ್ನೆಲೆಯಲ್ಲಿ ಠಾಣೆ ಮೇಲೆ ಕಲ್ಲು ತೂರಾಟದಂಥ ಘಟನೆಗಳು ಸರಿಯೇ ಎಂದು ಜನ ಗೃಹ ಸಚಿವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಮೃದು ಧೋರಣೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿಯಲು ಕಾರಣ ಎಂದು ಹೇಳಿದರು.

ವಿಧಾನಪರಿಷತ್ ಚುನಾವಣೆಯಲ್ಲಿ 4 ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸಿದ್ದರೆ, ಜೆಡಿಎಸ್ 2 ಕ್ಷೇತ್ರದಲ್ಲಿ ಕಣದಲ್ಲಿದೆ. ಈ ಎಲ್ಲಾ ಅಭ್ಯರ್ಥಿಗಳು ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ಈಗಾಗಲೇ ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರಿನಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇನೆ. ಕೆಲ ಸಮಸ್ಯೆಗಳನ್ನು ಬದಿಗೊತ್ತಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾರೆಂದು ತಿಳಿಸಿದರು.

ಲೋಕಸಭಾ ಚುನಾವಣೆಗೆ ಸಂಬಂಧಿಸಿ ಯಾವುದೇ ಆಂತರಿಕ ಸಮೀಕ್ಷೆ ನಡೆಸಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಮೋದಿ ಹೆಸರಿನ ಮೇಲೆ ವಿಶ್ವಾಸ ಇದೆ. ರಾಜ್ಯದಲ್ಲಿ 28 ಕ್ಕೆ 28 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆಂಬ ವಿಶ್ವಾಸ ವ್ಯಕ್ತಪಡಿಸಿದರು.

28ರಂದು ಹೋರಾಟ: ರಾಜ್ಯ ಸರ್ಕಾರದ ದುರಾಡಳಿತ ವಿರೋಧಿಸಿ ಬೆಂಗಳೂರಿನಲ್ಲಿ ಮೇ 28 ರಂದು ಬೃಹತ್ ಹೋರಾಟ ಹಮ್ಮಿಕೊಂಡಿದ್ದೇವೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪಶುಸಂಗೋಪನಾ ಇಲಾಖೆಗೆ ಒತ್ತುಕೊಟ್ಟಿದ್ದರು. ಕಾಂಗ್ರೆಸ್ ಸರ್ಕಾರ ರೈತರಿಗೆ ನೀಡಬೇಕಿರುವ 28 ಕೋಟಿ ರು. ಬಾಕಿ ಇದೆ ಎಂದು ಹೇಳಿದರು.

ಹೆಣ್ಮಕ್ಕಳು ಮನೆಗೆ ಮರಳುವ ಗ್ಯಾರಂಟಿಯೇ ಇಲ್ಲ: ಅಶೋಕ್‌

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎನ್ನುವುದು ಎಷ್ಟು ಹದಗೆಟ್ಟು ಹೋಗಿದೆ ಎಂದರೆ ಗೃಹ ಸಚಿವರು ಯಾರು ಎನ್ನುವುದೇ ಗೊತ್ತಾಗುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ತೀಕ್ಷ್ಣವಾಗಿ ಹೇಳಿದ್ದಾರೆ. ಹೆಣ್ಣು ಮಕ್ಕಳು ಶಾಲೆಗೆ ಹೋದರೆ, ಮಹಿಳೆಯರು ಕೆಲಸಕ್ಕೆ ಹೋದರೆ ಮನೆಗೆ ವಾಪಸ್ ಬರುವ ಗ್ಯಾರಂಟಿಯೇ ಇಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಸರಕಾರ ಎಲ್ಲ ಕಡೆ ಲೂಟಿ ಮಾಡುತ್ತಿದೆ. ಈಗ ಬಿಡಿಎ ಕಾಂಪ್ಲೆಕ್ಸ್‌ಗಳನ್ನು ಮಾರಾಟಕ್ಕೆ ಇಟ್ಟಿದೆ. ಹಿಂದೆ ಲಕ್ಷ್ಮಣರಾವ್ ಅವರಂಥ ಮಹಾನುಭಾವರು ಇವನ್ನೆಲ್ಲ ಕಾಪಾಡಿಕೊಂಡು ಬಂದಿದ್ದರು. ಸರ್ಕಾರದಲ್ಲಿ ಹಣ ಇಲ್ಲ. ಅವರ ವರಿಷ್ಠರಿಗೆ ಕಪ್ಪ ಕೊಡಲು ಇಲ್ಲಿ ಲೂಟಿ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.ಕಾನೂನು ಸುವ್ಯವಸ್ಥೆ ವಿಫಲ: ಅಶ್ವತ್ಥ

ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ವಿಫಲವಾಗಿದೆ. ಬರ ನಿರ್ವಹಣೆ, ಆರೋಗ್ಯ, ಮೂಲ ಸೌಕರ್ಯದಲ್ಲಿಯೂ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಸರ್ಕಾರ ಕೇವಲ ಒಂದು ಸಮುದಾಯವನ್ನು ತುಷ್ಟೀಕರಣ ಮಾಡುತ್ತಿದೆ. ಕೊಲೆ ಸುಲಿಗೆ, ಅತ್ಯಾಚಾರದಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದ್ದರೂ ಅದರ ಬಗ್ಗೆ ಮಾತನಾಡುತ್ತಿಲ್ಲ. ಕಾಂಗ್ರೆಸ್‌ನವರು ಭಂಡತನದವರು, ಅವರಿಗೆ ಸೂಕ್ಷ್ಮತೆಯೇ ಇಲ್ಲ. ಅವರ ಐವತ್ತು ವರ್ಷದ ಅನುಭವ ಬರೀ ಭಾಷಣದ ಹಾವಭಾವಕ್ಕೆ ಸೀಮಿತವಾಗಿ, ಸಮಾಜ ಒಡೆಯುವುದಕ್ಕೆ ಮಾತ್ರ ಮೀಸಲಾಗಿದೆ ಎಂದು ದೂರಿದರು.

PREV

Recommended Stories

ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ