ಯಾದಗಿರಿ: ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳ್ಳಲಿರುವ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ನಿಗದಿಪಡಿಸಿದ ಅರ್ಜಿ ನಮೂನೆಯನ್ನು ತಾಲೂಕು ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಪಶು ಆಸ್ಪತ್ರೆ ಆವರಣ, ರೈಲ್ವೆ ಸ್ಟೇಶನ್ ರಸ್ತೆ, ಯಾದಗಿರಿ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಸೆ. 23ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಪಶು ಆಸ್ಪತ್ರೆ ಆವರಣ, ಸ್ಟೇಶನ್ ರಸ್ತೆ, ಯಾದಗಿರಿ ಅಥವಾ ದೂ: 08473200149, ತಾಲೂಕು ಸಹಾಯಕ ನಿರ್ದೇಶಕರು, ಪಶು ಆಸ್ಪತ್ರೆಯ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.