ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

KannadaprabhaNewsNetwork |  
Published : Aug 15, 2024, 02:01 AM IST

ಸಾರಾಂಶ

Application Invitation for Anganwadi Posts

ಯಾದಗಿರಿ: ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಯ ವಿವಿಧ ಗ್ರಾಮ ಪಂಚಾಯತಿ, ಪುರಸಭೆ, ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ 14 ಹುದ್ದೆ ಇದ್ದು, ಅಂಗನವಾಡಿ ಸಹಾಯಕಿ 57, ಗೌರವಸೇವೆ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ. ಖಾಲಿ ಇರುವ ಹುದ್ದೆಗಳಿಗೆ ಸೆಪ್ಟೆಂಬರ್ 13ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ, ಗುಮಡಾಲ ಕಾಂಪ್ಲೆಕ್ಸ್‌, ಮೂತೂಟ್ ಫೈನಾನ್ಸ್ ಹಿಂದುಗಡೆ, ಗುರುಮಠಕಲ್ ದೂ.ಸಂ.08473 225035, 9902878603ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

---ಬೀದಿ ಬದಿ ವ್ಯಾಪಾರಿಗಳಿಗೆ ಅರ್ಜಿ ಆಹ್ವಾನ

ಯಾದಗಿರಿ: 2024-25ನೇ ಸಾಲಿನ ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಧಾನ ಮಂತ್ರಿ ಆತ್ಮ ನಿರ್ಭರನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸುಭದ್ರತೆಗೆ ಸಾಲಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಲಕ್ಷ್ಮೀಕಾಂತ ತಿಳಿಸಿದ್ದಾರೆ.

ಬೀದಿ ಬದಿ ವ್ಯಾಪಾರಿಗಳಿಗೆ ವ್ಯಾಪಾರ ವಿಸ್ತರಿಸಿಕೊಳ್ಳಲು ಬ್ಯಾಂಕ್‌ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಕಿರು ಸಾಲ ಸೌಲಭ್ಯ ಕಲ್ಪಿಸಲಾಗಿದ್ದು, ನಗರದ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಹಾಲು ಮಾರಾಟಗಾರರು ದಿನಪತ್ರಿಕೆ ವಿತರಕರು ಸಹ ಸಾಲ ಸೌಲಭ್ಯ ಪಡೆಯಲು ನಿಗಧಿತ ಅರ್ಜಿ ನಮೂನೆ, ರೇಷನ್ ಕಾರ್ಡ್, ಆಧಾರ ಕಾರ್ಡ್, ಮತದಾರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವ್ಯಾಪಾರದ ಭಾವಚಿತ್ರಗಳು (ಎಟಿಎಮ್ ಕಾರ್ಡ್ ಅಳತೆ), ಬ್ಯಾಂಕ್ ಪಾಸ್‌ಬುಕ್ ಝರಾಕ್ಸ್ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸುಭದ್ರತೆಗೆ 3 ಹಂತಗಳಲ್ಲಿ ಸಾಲ ಸೌಲಭ್ಯ ಕಲ್ಪಿಸಲಾಗುವುದು. ಮೊದಲ ಹಂತದಲ್ಲಿ 10000 ರು. ಗಳ ನೀಡಿ 12 ಕಂತುಗಳ ಅವಧಿಯಲ್ಲಿ ಸಾಲ ಮರು ಪಾವತಿ ಮಾಡಿದ್ದ 20000 ರು.ಗಳ ನೀಡಲಾಗುವುದು. ಈ ಮೊತ್ತವನ್ನು 18 ಕಂತುಗಳಲ್ಲಿ ಮರುಪಾವತಿ ಮಾಡಿದ್ದಲ್ಲಿ 3ನೇ ಹಂತದಲ್ಲಿ 50000 ರು.ಗಳ ಸಾಲ ಸೌಲಭ್ಯ ನೀಡಲಾಗುವುದು. ಈ ಯೋಜನೆ ಅಡಿಯಲ್ಲಿ ಸಾಲಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ವ್ಯಾಪಾರಸ್ಥರು ಬ್ಯಾಂಕ್‌ಗಳಿಗೆ ಭೇಟಿ ನೀಡಿ ಅಗತ್ಯ ದಾಖಲಾತಿ ಸಲ್ಲಿಸಿ ಸಾಲ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಡೇ ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ