ಕನ್ನಡಪ್ರಭ ವಾರ್ತೆ ಮಂಗಳೂರು
ಅಭ್ಯರ್ಥಿಯು 10ನೇ ತರಗತಿ ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45ರಷ್ಟು ಅಂಕ ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದರೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) 2024ರ ಜುಲೈ 10ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 10 ಜುಲೈ 2004ರಿಂದ 10 ಜುಲೈ 2007ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುವುದು.
ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ- 575004 ಇಲ್ಲಿಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್‌ಸೈಟ್ https://bcwd.karnataka.gov.in ನಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ೦೮೨೪-೨೨೨೫೦೭೮ ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.