ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

KannadaprabhaNewsNetwork |  
Published : Oct 08, 2024, 01:00 AM IST
ಆಹ್ವಾನ | Kannada Prabha

ಸಾರಾಂಶ

ಬ್ಯೂಟಿ ಪಾರ್ಲರ್‌ ಕುರಿತ 30 ದಿನಗಳ ಉಚಿತ ತರಬೇತಿ ನ. 5ರಿಂದ ಪ್ರಾರಂಭವಾಗಲಿದೆ. ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದು.

ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು ನ. 5 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅ. 18 ಕೊನೆಯ ದಿನವಾಗಿದೆ.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌