ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಅರ್ಜಿ ಆಹ್ವಾನ

KannadaprabhaNewsNetwork |  
Published : Dec 15, 2023, 01:30 AM IST
ಷಷಷ | Kannada Prabha

ಸಾರಾಂಶ

ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಕನ್ನಡಪ್ರಭ ವಾರ್ತೆ ಮುಧೋಳ

ಕೇಂದ್ರ ಸರ್ಕಾರದ ಎಸ್.ಬಿ.ಎಂ (ಸ್ವಚ್ಛ ಭಾರತ ಮೀಷನ್) 2.0 ಯೋಜನೆಯಡಿಯಲ್ಲಿ 166 ವೈಯಕ್ತಿಕ ಶೌಚಾಲಯಗಳ ನಿರ್ಮಿಸುವ ಗುರಿ ನೀಡಲಾಗಿದೆ. ಆದ್ದರಿಂದ ಮುಧೋಳ ನಗರಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ಹೊಂದಿರದ ಮನೆಗಳಲ್ಲಿ ವೈಯಕ್ತಿಕ ಶೌಚಾಲಯಗಳ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ.

ಹೊಸ ಸ್ವತಂತ್ರ ಕುಟುಂಬಗಳು, ಪಟ್ಟಣ ಪ್ರದೇಶಕ್ಕೆ ವಲಸೆ ಬಂದಿರುವ ಕುಟುಂಬಗಳು, ಹಿಂದೆ ಸಮುದಾಯ ಶೌಚಾಲಯಗಳ ಲಭ್ಯತೆ ಹೊಂದಿದ್ದ ಹಾಗೂ ತಮ್ಮದೇ ಆದ ವೈಯಕ್ತಿಕ ಶೌಚಾಲಯ ಹೊಂದಲು ಬಯಸುವ ಕುಟುಂಬಗಳು, ನೈರ್ಮಲ್ಯ ರಹಿತ ಶೌಚಾಲಯಗಳನ್ನು ಹೊಂದಿರುವ ಕುಟುಂಬಗಳು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಹೀಗೆ ಇವರೆಲ್ಲರೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಡಿ.14 ರಿಂದ 31ರ ವರೆಗೆ ಸೂಕ್ತ ದಾಖಲಾತಿಗಳೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್‌ ಕಾರ್ಡ್‌, ಪಡಿತರ ಚೀಟಿ, ಬ್ಯಾಂಕ್ ಪಾಸ್‌ಬುಕ್, ಅರ್ಜಿದಾರರ ಪಾಸ್ ಪೋರ್ಟ್‌ ಸೈಜ್ ಫೋಟೋ, ಶೌಚಾಲಯ ನಿರ್ಮಾಣ ಮಾಡುವ ಜಾಗದ ಡಿಜಿಟಲ್ ಪೋಟೋ ಮತ್ತು ನಗರಸಭೆ ಉತಾರೆ, ಫಲಾನುಭವಿಗಳ ದೂರವಾಣಿ ಸಂಖ್ಯೆಯೊಂದಿಗೆ ದಾಖಲಾತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಸಮಯದಲ್ಲಿ ಆರೋಗ್ಯ ವಿಭಾಗದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತರು ಹಾಗೂ ಆಡಳಿತಾಧಿಕಾರಿಗಳು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನಂತಕುಮಾರ ಹೆಗಡೆ ಮತ್ತೆ ಸಕ್ರಿಯ ರಾಜಕಾರಣ ಪ್ರವೇಶ?
ಯಾವ ಶಾಸಕರೂ ನನ್ನ ಪರ ದೆಹಲಿಗೆ ಹೋಗಬೇಡಿ: ಡಿಕೆ ಶಿವಕುಮಾರ್‌