ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

KannadaprabhaNewsNetwork |  
Published : Jun 09, 2024, 01:32 AM IST
ಡಾ ಶೇಖರ  ಅಜೆಕಾರು | Kannada Prabha

ಸಾರಾಂಶ

ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕಾರ್ಕಳ: ಸಾಹಿತ್ಯ , ಪತ್ರಿಕಾ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ಅವರ ಹೆಸರಿನಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಡಾ. ಶೇಖರ ಅಜೆಕಾರು ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮಹಮ್ಮದ್ ಷರೀಫ್ ತಿಳಿಸಿದರು.

ಅವರು ಕಾರ್ಕಳ ಪ್ರವಾಸಿ‌ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ‌ ವಿವರವನ್ನು ನೀಡಿದರು. ಸಾಹಿತ್ಯ ಹಾಗೂ ಪತ್ರಿಕಾ ಕ್ಷೇತ್ರದಲ್ಲಿ ಕನಿಷ್ಠ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಪತ್ರಕರ್ತರು, ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಶಸ್ತಿಯು ಹತ್ತು ಸಾವಿರ ಪ್ರಶಸ್ತಿ ನಗದು ಹಾಗೂ ರಜತ ಫಲಕ ಒಳಗೊಂಡಿರುತ್ತದೆ‌. ಸ್ವವಿವರ ಹಾಗೂ ಇತ್ತೀಚಿನ ಭಾವಚಿತ್ರವನ್ನೊಳಗೊಂಡ ಅರ್ಜಿಯನ್ನು ಮೊಹಮ್ಮದ್ ಶರೀಫ್, ಅಧ್ಯಕ್ಷರು, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಬಂಗ್ಲೆಗುಡ್ಡೆ ಪೋಸ್ಟ್ ಕುಕ್ಕುಂದೂರು ,ಕಾರ್ಕಳ ತಾಲೂಕು 576117 ಇಲ್ಲಿಗೆ ಜೂನ್‌ 21ರೊಳಗೆ ಕಳುಹಿಸಿಕೊಡಬಹುದಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ‌9845846213, 9945857561 ಸಂಪರ್ಕಿಸಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಹರೀಶ್ ಆಚಾರ್ಯ, ಕೋಶಾಧಿಕಾರಿ ಮಹಮ್ಮದ್ ಖಲೀಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ