ಕೈಮಗ್ಗ, ಜವಳಿ ಡಿಪ್ಲೋಮಾ ಕೋರ್ಸ್‌ ಅರ್ಜಿ ಆಹ್ವಾನ

KannadaprabhaNewsNetwork |  
Published : May 13, 2024, 12:06 AM IST
ಆಹ್ವಾನ | Kannada Prabha

ಸಾರಾಂಶ

2ನೇ ವರ್ಷದ ಡಿಪ್ಲೋಮಾ ಕೋರ್ಸ್‌ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಂಗ್ಲಿಷ್‌ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಡಿಕೇರಿ: ಪ್ರಸಕ್ತ (2024-25) ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷಕ್ಕೆ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹಾಗೂ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 2,500 ರು. ವರೆಗೆ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024 ರ ಜು.01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ವರ್ಷಗಳ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು 15 ರಿಂದ 25 ವರ್ಷಗಳ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.

ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸ್ಗಾಗಿ ಲಭ್ಯವಿರುವ ಸಂಸ್ಥೆಗಳ ವಿವರ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ(ಕರ್ನಾಟಕ) 22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ(ತಮಿಳುನಾಡು) 17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನಲ್ಲೂರು ಜಿಲ್ಲೆ, ಆಂಧ್ರಪ್ರದೇಶ)03 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು, (ಕೇರಳ) 02 ಅಭ್ಯರ್ಥಿಗಳು ಒಟ್ಟು 44 ಅಭ್ಯರ್ಥಿಗಳು.

ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ ಕೋರ್ಸ್ಗಾಗಿ ಗಣಿತ, ಭೌತಶಾಸ್ತ್ರ ಮತ್ತು ರಾಸಾಯನ ಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 10+2 ಪಾಸ್+ (2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ (ಡಿ.ಹೆಚ್.ಟಿ.ಟಿ) ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ. 2024 ರ ಜು. 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.

ಲ್ಯಾಟರಲ್ ಎಂಟ್ರಿ ಮುಖಾಂತರ 2 ನೇ ವರ್ಷದ ವರ್ಷದ ಡಿಪ್ಲೋಮಾ ಕೋರ್ಸ್ಗಾಗಿ ಲಭ್ಯವಿರುವ ಸಂಸ್ಥೆಗಳ ವಿವರ : ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ(ಕರ್ನಾಟಕ) 13 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ(ತಮಿಳುನಾಡು) 14 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನಲ್ಲೂರು ಜಿಲ್ಲೆ, ಆಂಧ್ರಪ್ರದೇಶ) 03 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು,(ಕೇರಳ) 02 ಅಭ್ಯರ್ಥಿಗಳು ಒಟ್ಟು 32 ಅಭ್ಯರ್ಥಿಗಳು.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾಯ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‌ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ (ದೂರವಾಣಿ 08372 297221) ಅಥವಾ ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೊಡಗು ಜಿ. ಪಂ., ಮಡಿಕೇರಿ (ದೂರವಾಣಿ ಸಂಖ್ಯೆ:08272-220356) ಅವರನ್ನು ಸಂಪರ್ಕಿಸಬಹುದು.

ಆಸಕ್ತ ಅಭ್ಯರ್ಥಿಗಳು ಜಾಲತಾಣ https://khtigadag.ac.in/adminsion Form.pdf ಮೂಲಕ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 31 ರ ಒಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಸಿಲಿನ ಹೊಡೆತಕ್ಕೆ ಸಾವಿರಾರು ಮೀನುಗಳ ಮಾರಣಹೋಮ
ನಿರಾಶ್ರಿತರ ಕಣ್ಣೀರು ಒರೆಸುವ ಕೆಲಸ