ಸೋಮವಾರಪೇಟೆ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮಿಕಿ ಆಶ್ರಮ ಶಾಲೆಗಳಲ್ಲಿ ನುರಿತ ಬೋಧಕರಿಂದ ಬೋಧನಾ ಚಟುವಟಿಕೆ ಹಮ್ಮಿಕೊಳ್ಳಲಾಗಿದ್ದು ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
2024- 25ನೇ ಸಾಲಿನಲ್ಲಿ ಸೋಮವಾರಪೇಟೆ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತ್ರ, ಶೂ, ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಶುಚಿ ಸಂಭ್ರಮ ಕಿಟ್(ಸೋಪು, ಎಣ್ಣೆ, ಬ್ರಶಸ್, ಪೇಸ್ಟ್, ಪೌಡರ್), ಕಂಪ್ಯೂಟರ್ ಲ್ಯಾಬ್, ಆಟೋಪಕರಣಗಳು ಹಾಗೂ ಇತರೆ ಸೌಲಭ್ಯಗಳು ಮತ್ತು ನುರಿತ ಬೋಧಕರಿಂದ ಬೋಧನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಕುಶಾಲನಗರ ತಾಲೂಕು ನಂಜರಾಯಪಟ್ಟಣ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, (6362555320), ಕುಶಾಲನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ (9481143491), ಸೋಮವಾರಪೇಟೆ ತಾಲೂಕಿನ ಮಾಲಂಬಿ ವಾಲ್ಮೀಕಿ ಆಶ್ರಮ ಶಾಲೆ (6362555320), ಯಡವನಾಡು ವಾಲ್ಮೀಕಿ ಆಶ್ರಮ ಶಾಲೆ (8618546009), ಕುಶಾಲನಗರ ಬಸವನಹಳ್ಳಿ ವಾಲ್ಮೀಕಿ ಆಶ್ರಮ ಶಾಲೆ (8277277650) ಈ ಸಂಸ್ಥೆಗಳಲ್ಲಿ ದಾಖಲು ಮಾಡಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೋರಲಾಗಿದೆ ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.