ಪಿಸಿಎಂಬಿ ಪ್ರವೇಶಕ್ಕೆ ಅರ್ಜಿ ಆಹ್ವಾನ

KannadaprabhaNewsNetwork |  
Published : May 27, 2025, 11:47 PM ISTUpdated : May 27, 2025, 11:48 PM IST
(ಸಾಂದರ್ಭಿಕ ಚಿತ್ರ) | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ವಿಷಯಗಳಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ: ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಪದವಿ ಪೂರ್ವ ಕಾಲೇಜು ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜು ಹಾಗೂ ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪಿ.ಸಿ.ಎಂ.ಬಿ (ವಿಜ್ಞಾನ ವಿಭಾಗ) ವಿಷಯಗಳಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಈ ವಸತಿ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುವುದು. ಈ ಕಾಲೇಜುಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಪ್ರವೇಶ ಲಭ್ಯವಿದೆ.

ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ದಾಖಲಾತಿಗಾಗಿ ಪೋಷಕರ ಆದಾಯ ಮಿತಿ ₹2.50 ಲಕ್ಷಗಳಿಗೆ ಮೀರಬಾರದು. ಅಭ್ಯರ್ಥಿಗಳು ಮೇ 31 ರೊಳಗೆ ಸೇವಾ ಸಿಂಧು ಪೋರ್ಟಲ್: **https://sevasindhu services.karnataka.gov.in **ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ (ದೂ: 08192- 250022), ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಪದವಿಪೂರ್ವ ಕಾಲೇಜು, ಕೊಂಡಜ್ಜಿ, ಹರಿಹರ ತಾ. (9008815296), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ, ಹೊಸ ಕುಂದುವಾಡ ಗ್ರಾಮ, ಎನ್.ಎಚ್- 13 ರಸ್ತೆ, ದಾವಣಗೆರೆ (9916828601), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಕೆರೆಬಿಳಚಿ, ಚನ್ನಗಿರಿ ತಾ. (9483075634), ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಪದವಿಪೂರ್ವ ಕಾಲೇಜು, ಬೀಡಿ ಲೇಔಟ್, ದಾವಣಗೆರೆ (7022234663) ಸಂಪರ್ಕಿಸಲು ಇಲಾಖೆಯ ಅಧಿಕಾರಿ ಭಕ್ತ ಮಾರ್ಕಂಡೇಯ ತಿಳಿಸಿದ್ದಾರೆ.

- - - (ಸಾಂದರ್ಭಿಕ ಚಿತ್ರ)

PREV

Recommended Stories

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಖರ್ಗೆ ಕುಟುಂಬದ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು