ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

KannadaprabhaNewsNetwork |  
Published : Jun 08, 2024, 12:31 AM IST
2 | Kannada Prabha

ಸಾರಾಂಶ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಜೂ.30 ಒಳಗೆ ಅರ್ಜಿ ಸಲ್ಲಿಸಬೇಕು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕ ರಾಜ್ಯ ಸರ್ಕಾರದ ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 -10 ನೇ ತರಗತಿ) ಗಳಿಗೆ ವಾರ್ಷಿಕ ರು.10 ಸಾವಿರ ದಂತೆ ಪ್ರೋತ್ಸಾಹಿಕ ಕ್ರೀಡಾ ವಿದ್ಯಾರ್ಥಿ ವೇತನ ನೀಡುವ ಯೋಜನೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಜಾರಿಯಲ್ಲಿದೆ. ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ಕ್ರೀಡಾಪಟುಗಳು ಇಲಾಖಾ ಅಧಿಕೃತ ಜಾಲತಾಣ http://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಜೂ.30 ಒಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿದಾರರು 2024-25 ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6-10 ನೇ ತರಗತಿ)ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2023 ರ ಏ.1 ರಿಂದ 2024 ರ ಮಾ.31 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ 2023 ರ ಏ.1 ರಿಂದ 2024 ರ ಮಾ.31 ರ ಅವಧಿಯಲ್ಲಿ ಸಾಧನೆ ಮಾತ್ರ ಪರಿಗಣಿಸಲಾಗುವುದು.

ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನ ಮೊತ್ತವನ್ನು ವಾರ್ಷಿಕ ರು.10 ಸಾವಿರ ಮಾತ್ರ ಮಂಜೂರು ಮಾಡಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.

PREV

Recommended Stories

ಮಲೆನಾಡು, ಕರಾವಳಿಯಲ್ಲಿ ಮಳೆ : ಜನಜೀವನ ಅಸ್ತವ್ಯಸ್ತ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ