ಯಾದಗಿರಿ: ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿವೆ. ಈ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಿದ್ದು, ಸದ್ಯ ಸ್ಥಾಪನೆಗಾಗಿ ಬಾಕಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಕಲಬುರಗಿ ವಿಭಾಗದ ಪಾಲುದಾರಿಕೆ ಸಂಸ್ಥೆವತಿಯಿಂದ ಮಾರ್ಚ್ 15ರ ವರೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ತಿಳಿಸಿದ್ದಾರೆ.
ವಾರದ ಏಳು ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಕಾರ್ಯನಿರ್ವಹಿಸಲಿವೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ವೆಬ್‌ಸೈಟ್ kal-mys.gramaone.karnataka.gov.in ನಲ್ಲಿ ಮುಖಾಂತರ ಮಾರ್ಚ್ 15ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ care@blsinternational.net, ಮೊ.ನಂ.9148712473, 0802222 1934ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.