ಯಾದಗಿರಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ 2024ರ ಸಂಬಂಧ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿಗೆ ಪ್ರಾಸ್ತಾವನೆಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಅರ್ಹ ಅರ್ಜಿದಾರರು, ಸಂಸ್ಥೆಗಳು 2024ರ ಆಗಸ್ಟ್ 31ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯಾದಗಿರಿ ಕಚೇರಿಗೆ ಅರ್ಜಿಸಲ್ಲಿಸಬೇಕು. ನಿಗದಿಪಡಿಸಿದ ದಿನಾಂಕದ ನಂತರ ಸಲ್ಲಿಸುವ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.
-------ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ
ವಿವಿಧ ಯೋಜನೆಗಳು ಶೈಕ್ಷಣಿಕ ಸಾಲ ಯೋಜನೆಗಳು ಬಸವ ಬೆಳಗು ಯೋಜನೆ, ವಿದೇಶ ವಿದ್ಯಾವಿಕಾಸ ಯೋಜನೆ, ಜೀವ ಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಆಗಸ್ಟ್ 31ರ ಒಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ಕಚೇರಿ, ಮಿನಿ ವಿಧಾನಸೌಧ ೨ನೇ ಮಹಡಿ ಸಿ ಬಾಕ್ಲ್ ರೂ.ನಂ.14 ಚಿತ್ತಾಪೂರ ರೋಡ್ ಯಾದಗಿರಿ ಸಂಪರ್ಕಿಸಬಹುದು.---000---