ಮಿಡ್ಲ್‌ ಪಕ್ಕ..931 ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

KannadaprabhaNewsNetwork |  
Published : Aug 15, 2026, 02:15 AM IST
ನರಸಿಂಹರಾಜಪುರ ತಾಲೂಕು ಪಂಚಾಯಿತಿ ಇ.ಓ. ನವೀನ್ ಕುಮಾರ್ ಅವರಿಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಮನವಿ ಪತ್ರ ಅರ್ಪಿಸಿದರು. | Kannada Prabha

ಸಾರಾಂಶ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. 2026-27 ನೇ ಸಾಲಿನ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 931 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

- ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಕೃತ ಅಧಿಸೂಚನೆಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಸಹ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. 2026-27 ನೇ ಸಾಲಿನ ಈ ನೇಮಕಾತಿ ಪ್ರಕ್ರಿಯೆಯಲ್ಲಿ ಜಿಲ್ಲೆಯಾದ್ಯಂತ ಒಟ್ಟು 931 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳು (ಜಿಪಿಟಿ/ಪಿಎಸ್‌ಟಿ/ಇತರೆ): ಒಟ್ಟು 593 ಹುದ್ದೆಗಳು, (ಬ್ಯಾಕ್‌ಲಾಗ್ ಹುದ್ದೆಗಳು: 160, ಹೊಸ ಹುದ್ದೆಗಳು: 433): ಗಣಿತ-ವಿಜ್ಞಾನ (ಕನ್ನಡ) ಜಿಪಿಟಿ: 159, ಕನ್ನಡ ಭಾಷೆ (ಜಿಪಿಟಿ): 155, ಸಾಮಾನ್ಯ ಪಿಎಸ್‌ಟಿ: 79, ಜೀವ-ವಿಜ್ಞಾನ (ಕನ್ನಡ) ಜಿಪಿಟಿ: 71, ಸಮಾಜ-ವಿಜ್ಞಾನ (ಕನ್ನಡ) ಜಿಪಿಟಿ: 46, ಆಂಗ್ಲ (ಜಿಪಿಟಿ): 34, ಗಣಕ ವಿಜ್ಞಾನ ಶಿಕ್ಷಕರು: 34, ದೈಹಿಕ ಶಿಕ್ಷಕರು (ಗ್ರೇಡ್-2): 15. ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗಳು: ಒಟ್ಟು 338 ಹುದ್ದೆಗಳು: ಆಂಗ್ಲ ಭಾಷೆ: 77, ಕನ್ನಡ ಭಾಷೆ: 65, ಸಿಬಿಝಡ್ ಆಂಗ್ಲ: 51, ಸಿಬಿಝಡ್ ಕನ್ನಡ: 42, ಆಂಗ್ಲ ಕಲಾ: 41, ದೈಹಿಕ ಶಿಕ್ಷಕರು (ಗ್ರೇಡ್-1): 36, ಕನ್ನಡ ಕಲಾ: 26 ಹುದ್ದೆಗಳು ಇರುತ್ತವೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಕರ್ನಾಟಕ ಮಟ್ಟದಲ್ಲಿ ಆನ್‌ಲೈನ್ ವೆಬ್‌ಸೈಟ್ schooleducation.kar.nic.in ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿ ಸಲ್ಲಿಕೆ ಪ್ರಾರಂಭವಾಗುವ ದಿನಾಂಕ: 18-08-2026 ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-09-2026 ಆಗಿರುತ್ತವೆ. ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಕೆಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ ಎಂದು ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಸಿ.ಎಸ್‌. ಮುಧೋಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಹಾರ ವಿತರಣೆಯಲ್ಲಿ ಲೋಪ ಕಂಡರೆ ಶಿಸ್ತು ಕ್ರಮ
ಪಿಯುಸಿ ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟ: ಬಸವರಮಾನಂದ ಸ್ವಾಮೀಜಿ