ಮಲ್ಲಿಕಾರ್ಜುನ ಪಾಟೀಲ್‌ಗೆ ನಿಗಮದ ಅಧ್ಯಕ್ಷ ಸ್ಥಾನ ನೀಡಿ: ಕಾರ್ಯಕರ್ತರ ಆಗ್ರಹ

KannadaprabhaNewsNetwork |  
Published : Nov 16, 2026, 01:15 AM IST
15ಕೆಪಿಎಂಎಸ್‌ಕೆ 01:  | Kannada Prabha

ಸಾರಾಂಶ

ಉಪ ಚುನಾವಣೆ ಗೆಲುವಿನ ರುವಾರಿ, ಪಕ್ಷ ಸಂಘಟನೆಯಲ್ಲಿ ಯಶಸ್ಸು ಕಂಡಿರುವ ಮಲ್ಲಿಕಾರ್ಜುನ ಪಾಟೀಲ್ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಅಥವಾ ಸೂಕ್ತ ಜವಾಬ್ದಾರಿಯುತ ಹುದ್ದೆ ನೀಡಬೇಕು. ಈ ನಿಟ್ಟಿನಲ್ಲಿ ಶಾಸಕರು ರಾಜ್ಯ ನಾಯಕರೊಂದಿಗೆ ಚರ್ಚಿಸಿ ಮುತುವರ್ಜಿ ವಹಿಸಬೇಕು, ಪಕ್ಷ ಸಂಘಟನೆಗೆ ದುಡಿದವರಿಗೆ ಅಧಿಕಾರದ ಮನ್ನಣೆ ಯಾವಾಗ? ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಸ್ಕಿ

ಉಪ ಚುನಾವಣೆ ಗೆಲುವಿನ ರುವಾರಿ, ಪಕ್ಷ ಸಂಘಟನೆಯಲ್ಲಿ ಯಶಸ್ಸು ಕಂಡಿರುವ ಮಲ್ಲಿಕಾರ್ಜುನ ಪಾಟೀಲ್ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಅಥವಾ ಸೂಕ್ತ ಜವಾಬ್ದಾರಿಯುತ ಹುದ್ದೆ ನೀಡಬೇಕು. ಈ ನಿಟ್ಟಿನಲ್ಲಿ ಶಾಸಕರು ರಾಜ್ಯ ನಾಯಕರೊಂದಿಗೆ ಚರ್ಚಿಸಿ ಮುತುವರ್ಜಿ ವಹಿಸಬೇಕು, ಪಕ್ಷ ಸಂಘಟನೆಗೆ ದುಡಿದವರಿಗೆ ಅಧಿಕಾರದ ಮನ್ನಣೆ ಯಾವಾಗ? ಎಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಸಕರ ಸಮ್ಮುಖದಲ್ಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಗ್ರೀನ್ ಸಿಟಿಯಲ್ಲಿರುವ ಶಾಸಕರ ನಿವಾಸದಲ್ಲಿ ಭಾನುವಾರ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷಕ್ಕಾಗಿ ನಿರಂತರವಾಗಿ ದುಡಿದ ಅವರಿಗೇ ಈವರೆಗೆ ಸೂಕ್ತ ರಾಜಕೀಯ ಸ್ಥಾನಮಾನ ದೊರೆಯದಿರುವುದು ಬೆಂಬಲಿಗರಲ್ಲಿ ಅಸಮಾಧಾನ ಮೂಡಿಸಿದೆ. ಸಂಘಟನೆಯ ಜವಾಬ್ದಾರಿ ಹೊತ್ತ ನಾಯಕರಿಗೆ ಅಧಿಕಾರದ ಹಂಚಿಕೆಯಲ್ಲಿ ಮನ್ನಣೆ ಸಿಗದಿದ್ದರೆ ತಳಮಟ್ಟದಲ್ಲಿ ದುಡಿಯುವ ಕಾರ್ಯಕರ್ತರ ಉತ್ಸಾಹದ ಮೇಲೆ ಪರಿಣಾಮ ಬೀರಬಹುದು ಎಂದು ಕಾರ್ಯಕರ್ತರು ಆತಂಕ ವ್ಯಕ್ತಪಡಿಸಿದ್ದಾರೆ.

ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಅವರಿಗೆ ನಿಗಮದ ಅಧ್ಯಕ್ಷ ಸ್ಥಾನ ಕೊಡಿಸಲು ಶಾಸಕರೇ ವೈಯಕ್ತಿಕವಾಗಿ ಮುತುವರ್ಜಿ ವಹಿಸುತ್ತಾರೆ ಎಂಬ ನಿರೀಕ್ಷೆ ಬೆಂಬಲಿಗರು ಮತ್ತು ಕಾರ್ಯಕರ್ತರಲ್ಲಿತ್ತು. ಆದರೆ ಈವರೆಗೆ ನಿರೀಕ್ಷಿತ ಪ್ರಯತ್ನ ನಡೆದಿಲ್ಲ ಎಂದು ಕಾರ್ಯಕರ್ತರು ಶಾಸಕರ ಮುಂದೆ ಅಸಮಾಧಾನ ತೋಡಿಕೊಂಡರು.

ಸಭೆಯಲ್ಲಿ ಮಲ್ಲಿಕಾರ್ಜುನ್ ಪಾಟೀಲ್ ಅವರಿಗೆ ಸ್ಥಾನಮಾನ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ್ ಪಾಟೀಲ್ ಅವರು ರಾಜ್ಯ ನಾಯಕರಿಗೆ ಅತ್ಯಂತ ಸಮೀಪದಿಂದ ಪರಿಚಿತರಾಗಿದ್ದಾರೆ. ಅವರ ಪರಿಶ್ರಮಕ್ಕೆ ಈ ಮೊದಲೇ ಅವರಿಗೆ ಸೂಕ್ತ ಸ್ಥಾನಮಾನ ಸಿಗಬೇಕಾಗಿತ್ತು, ಆದರೆ ಸ್ವಲ್ಪ ತಡವಾಗಿದೆ. ಆದಷ್ಟು ಬೇಗ ಸಿಎಂ ಅವರ ಬಳಿ ಸಮಯವನ್ನು ಕೇಳಿಕೊಂಡು ಎಲ್ಲರನ್ನೂ ಕರೆದುಕೊಂಡು ಹೋಗಿ ಮಲ್ಲಿಕಾರ್ಜುನ ಪಾಟೀಲ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಲಾಗುವುದು ಎಂದು ಕಾರ್ಯಕರ್ತರಿಗೆ ಆರ್.ಬಸನಗೌಡ ತುರ್ವಿಹಾಳ ಅವರು ಸಭೆಗೆ ಭರವಸೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ ಪಟ್ಟು ಶವ ಇಟ್ಟು ಪ್ರತಿಭಟನೆ
ಭಕ್ತರ ಸಮ್ಮುಖದಲ್ಲಿ ಕೆಂಚಾಂಬಾ ಚಿಕ್ಕಜಾತ್ರೆ ಸಂಪನ್ನ