- ಸಿಎಂ ಸಿದ್ದರಾಮಯ್ಯ ದಿಟ್ಟ ಕ್ರಮ ಕೈಗೊಂಡು, ಮಾದಿಗ ಸೋದರ ಸಮಾಜಕ್ಕೆ ನ್ಯಾಯ ಒದಗಿಸಲಿ: ಎಚ್.ಆಂಜನೇಯ
ಅನಾದಿ ಕಾಲದಿಂದಲೂ ಶೋಷಣೆಗೆ ಒಳಗಾಗಿ, ಜ್ವಲಂತ ಸಮಸ್ಯೆಗಳ ಸುಳಿಗೆ ಸಿಲುಕಿದ್ದ ಮಾದಿಗ ಮತ್ತು ಸೋದರ ಜಾತಿಗಳಿಗೆ ಒಳಮೀಸಲಾತಿ ವರವಾಗಿ ಪರಿಣಮಿಸಿದೆ. ದತ್ತಾಂಶ ಸಂಗ್ರಹಕ್ಕೆ ಆಯೋಗ ರಚಿಸಿ, ಅದಕ್ಕೆ ನ್ಯಾ.ನಾಗಮೋಹನ ದಾಸ್ ಅವರನ್ನು ನೇಮಿಸಿರುವುದು ಸ್ವಾಗತಾರ್ಹ ಹಾಗೂ ಅತ್ಯುತ್ತಮ ನಿರ್ಧಾರ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ನೀಡುವ ಕಾರ್ಯಕ್ಕೆ ಇದೀಗ ಚಾಲನೆ ಸಿಕ್ಕಿದೆ. ನಮ್ಮ ಸಮುದಾಯದ 3 ದಶಕದ ಹೋರಾಟದ ಫಲವಿದು. ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಜಾರಿ ಅಧಿಕಾರ ಆಯಾ ರಾಜ್ಯ ಸರ್ಕಾರದ್ದೆಂಬ ತೀರ್ಪು ನೀಡಿದ್ದು, ಮಾದಿಗ ಸಮುದಾಯದ ಸಮಗ್ರ ಪ್ರಗತಿಗೆ ರಹದಾರಿಯಾಗಿದೆ ಎಂದರು.ಸಿಎಂ ಸಿದ್ದರಾಮಯ್ಯ ಯಾರ ಒತ್ತಡಕ್ಕೂ ಮಣಿಯದೇ, ಒಳಮೀಸಲಾತಿ ಜಾರಿಗೊಳಿಸುವ ನಿರ್ಣಯ ಕೈಗೊಂಡಿದ್ದು, ಮೊದಲ ಹೆಜ್ಜೆಯಾಗಿ ದತ್ತಾಂಶ ಸಂಗ್ರಹಕ್ಕೆ ಆಯೋಗ ರಚಿಸಿ, ಅದಕ್ಕೆ ನ್ಯಾ.ನಾಗಮೋಹನ ದಾಸರನ್ನು ನೇಮಿಸಿದ್ದು, ಪರಿಶಿಷ್ಟ ಸಮುದಾಯದಲ್ಲಿ ಆಶಾಕಿರಣ ಮೂಡಿಸಿದೆ ಎಂದು ತಿಳಿಸಿದರು.
ಮಾದಿಗ ಸಮುದಾಯ ರಾಜ್ಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿದೆ. ಕೆಲ ಜಿಲ್ಲೆಗಳಲ್ಲಿ ಮಾದಿಗ, ಛಲವಾದಿಗಳು ಆದಿ ಕರ್ನಾಟಕ ಎಂದು ಗುರುತಿಸಲ್ಪಟ್ಟಿದ್ದು, ಗೊಂದಲ ಉಂಟುಮಾಡಿದೆ. ನಾಗಮೋಹನ ದಾಸ್ ಅವರು ಈ ವಿಷಯದಲ್ಲಿ ಆಳ ಅಧ್ಯಯನ ಮಾಡಿ, ಮಾದಿಗ ಮತ್ತು ಅದರ ಉಪ ಜಾತಿಗಳನ್ನು ಗುರುತಿಸುವ ಕೆಲಸ ಮಾಡಿ, ನೊಂದ ಸಮುದಾಯಕ್ಕೆ ನ್ಯಾಯ ಒದಗಿಸುತ್ತಾರೆಂಬ ವಿಶ್ವಾಸವಿದೆ ಎಂದರು.
ಯಾವುದೇ ಟೀಕೆ, ಆರೋಪ, ಬೆದರಿಕೆ, ವಿರೋಧ ವ್ಯಕ್ತವಾದರೂ ಸಿದ್ದರಾಮಯ್ಯ ಜಗ್ಗಬಾರದು. ವರದಿಯನ್ನು ಸಂಪುಟದಲ್ಲಿ ಮಂಡಿಸಿ, ಚರ್ಚಿಸಿ, ವರದಿ ಬಹಿರಂಗಪಡಿಸಲಿ. ಸಣ್ಣಪುಟ್ಟ ಲೋಪಗಳಿದ್ದರೆ ಸರಿಪಡಿಸಬಹುದು. ಈ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
- - -
- ಎಚ್.ಆಂಜನೇಯ, ಕಾಂಗ್ರೆಸ್ ನಾಯಕ
ಟಾಪ್ ಕೋಟ್ ವರದಿ ಬಹಿರಂಗಕ್ಕೆ ಮುನ್ನವೇ ಅನಗತ್ಯ ವಿರೋಧಿಸಿದರೆ ಸಹಿಸುವುದಿಲ್ಲ. ನೂರಾರು ವರ್ಷದಿಂದಲೂ ಸಾಮಾಜಿಕ ನ್ಯಾಯ ಕಲ್ಪಸುವಾಗ ಆಡಳಿತದ ವಿರುದ್ಧ ಕೆಲವರು ತಿರುಗಿ ಬಿದ್ದಿದ್ದಾರೆ. ಸಾಹು ಮಹಾರಾಜ, ನಾಲ್ವಡಿ ಕೃಷ್ಣರಾಜ ಒಡೆಯರ್, ಪಿ.ಪಿ.ಸಿಂಗ್, ದೇವರಾಜ ಅರಸು ಇತರರು ಯಾವುದೇ ಒತ್ತಡ, ಪ್ರತಿಭಟನೆಗೂ ಬೆದರದೇ ಹಕ್ಕು ಕಲ್ಪಿಸಿಕೊಟ್ಟಿದ್ದಾರೆ
- - - -15ಕೆಡಿವಿಜಿ9, 10: ಎಚ್.ಆಂಜನೇಯ