ಕನ್ನಡಪ್ರಭ ವಾರ್ತೆ ಉಡುಪಿ
ಮಂಗಳವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ವೇಳೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕೊಂಕಣಿ, ಬ್ಯಾರಿ, ಯಕ್ಷಗಾನ, ತುಳು ಅಕಾಡೆಮಿಗಳಿಗೂ ಇಲ್ಲಿಗೂ ಸಂಬಂಧ ಹೆಚ್ಚಿದೆ. ಕಳೆದ ಚುನಾವಣೆಯಲ್ಲಿ ಪರಭಾವಗೊಂಡ ಪಕ್ಷದ ಅಭ್ಯರ್ಥಿಗಳು ಹಾಗೂ ಸ್ಥಳೀಯ ಮುಖಂಡರ ಸಲಹೆ ಪಡೆದು ಅಧ್ಯಕ್ಷರ ನೇಮಕ ಮಾಡಲಾಗುವುದು. ಕಾಂಗ್ರೆಸ್ ಕಟ್ಟಾಳು, ಪಕ್ಷದ ಬಾವುಟ ಹಿಡಿದು ದುಡಿದವರಿಗೆ ಅಕಾಡೆಮಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಈ ವಿಚಾರದಲ್ಲಿ ಯಾವುದೇ ರಾಜೀ ಇಲ್ಲ ಎಂದು ಸಚಿವರು ಕಾರ್ಯಕರ್ತರಿಗೆ ಭರವಸೆ ನೀಡಿದರು.ಕಾಂಗ್ರೆಸ್ ಪಕ್ಷದ ಕೊಡುಗೆಯಿಂದ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ನಾನು ಮಂತ್ರಿಯಾಗಿದ್ದೇನೆ. ಜಿಲ್ಲೆಗೂ ನನಗೂ ಅವಿನಾಭಾವ ಸಂಬಂಧ ಇದೆ. ಈ ಹಿಂದೆ ನಾನು ಸಣ್ಣ ನೀರಾವರಿ ಸಚಿವನಾಗಿದ್ದ ವೇಳೆ ಜಿಲ್ಲೆಗೆ ಭೇಟಿ ನೀಡಿದ್ದೆ ಎಂದು ಸಚಿವರು ನೆನಪು ಮಾಡಿಕೊಂಡರು.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ತುಳು ಭಾಷೆಗೆ ಎರಡನೇ ಭಾಷೆಯ ಮಹತ್ವ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್, ಪಕ್ಷದ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಎಂ.ಎ.ಗಫೂರ್, ರಮೇಶ್ ಕಾಂಚನ್, ಕಿಶನ್ ಹೆಗ್ಡೆ, ಗೀತಾ ವಾಗ್ಲೆ ಮತ್ತಿತರರು ಉಪಸ್ಥಿತರಿದ್ದರು.