ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ನೇಮಕ ವರಿಷ್ಠರ ತೀರ್ಮಾನ : ಮಾಜಿ ಸಂಸದ ಎಸ್.ಮುನಿಸ್ವಾಮಿ

KannadaprabhaNewsNetwork |  
Published : Feb 01, 2025, 12:03 AM ISTUpdated : Feb 01, 2025, 12:41 PM IST
೩೧ಕೆಎಲ್‌ಆರ್-೫ಕೋಲಾರದ ಜಿಲ್ಲಾ ಬಿಜೆಪಿ ಪಕ್ಷದ ಕಛೇರಿಯಲ್ಲಿ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಮಾಜಿ ಸಂಸದ ಎಸ್.ಮುನಿಸ್ವಾಮಿರನ್ನು ಅಭಿನಂದಿಸುತ್ತಿರುವುದು. | Kannada Prabha

ಸಾರಾಂಶ

ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ-ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ, ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು

  ಕೋಲಾರ  : ಬಿಜೆಪಿ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ-ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ, ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಪಕ್ಷದ ಕಚೇರಿಯಲ್ಲಿ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ನೀಡಿದ ಅಭಿನಂದನೆ ಸ್ವೀಕರಿಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿ, ಪಕ್ಷಕ್ಕಾಗಿ ದುಡಿದಿರುವ ಮುಖಂಡರು ಹಾಗೂ ಕಾರ್ಯಕರ್ತರ ಮಾರ್ಗದರ್ಶನದಲ್ಲಿ ಅವರ ಸಲಹೆ ಸೂಚನೆಗಳನ್ನು ಪಡೆದು ಪಕ್ಷವನ್ನು ಬಲಪಡಿಸಬೇಕು ಎಂದರು.

ವರಿಷ್ಠರು ಮಾಡಿದ ಆಯ್ಕೆ ಕೋಲಾರ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮೂವರು ಹೆಸರನ್ನು ವರಿಷ್ಠರಿಗೆ ಕಳುಹಿಸಲಾಗಿತ್ತು. ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ. ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿ ಪಕ್ಷದಲ್ಲಿ ಕೆಲಸ ಮಾಡಬೇಕು, ಸಣ್ಣಪುಟ್ಟ ವ್ಯತ್ಯಾಸಗಳು ಇದ್ದರೆ ಸರಿಪಡಿಸಿಕೊಂಡು ಹೋಗತ್ತೇವೆ. ಅಸಮಾಧಾನ ವ್ಯಕ್ತಪಡಿಸಿದವರಿಗೂ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಹೇಳಿದರು.ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ಬಗ್ಗೆ ಮಾತನಾಡಿ, ಅವರು ದೊಡ್ಡವರು ಸಚಿವರಾಗಿದ್ದರು, ಈಗ ಸಂಸದರಾಗಿದ್ದಾರೆ. ಯಾರು ಫೋನ್ ರಿಸೀವ್ ಮಾಡಲ್ಲ ಅಂತ ಜನತೆಗೆ ಗೊತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ತೀರ್ಮಾನದಂತೆ ಜಿಲ್ಲಾ ಅಧ್ಯಕ್ಷರ ಆಯ್ಕೆ ನಡೆದಿಲ್ಲ. ವರಿಷ್ಠರು ಆಯ್ಕೆ ಮಾಡಿದ್ದಾರೆ. ರಾಜ್ಯಾಧ್ಯಕ್ಷರ ಹುದ್ದೆಗೆ ಗೌರವ ಕೊಡುವುದನ್ನು ಕಲಿಯಲಿ ಎಂದರು.ಖರ್ಗೆ ಹೇಳಿಕೆಗೆ ಟೀಕೆ

ಕುಂಭಮೇಳದ ಕಾಲ್ತುಳಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನವರು ಹಿಂದುತ್ವ ಮರೆತಿದ್ದಾರೆ. ಅವರು ಬರಿ ಮಸೀದಿಗಳ ಪೂಜೆಗೆ ಮಾತ್ರ ಸೀಮಿತವಾಗಿದ್ದಾರೆ. ಮೊಸರಲ್ಲಿ ಕಲ್ಲು ಹುಡುಕುವುದು ಕಾಂಗ್ರೆಸ್ ಕೆಲಸವಾಗಿದೆ ಎಂದರು.ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ನೂತನ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಾ.ಮಾ.ಬಾಬು, ಬಾಲಾಜಿ, ಅಪ್ಪಿ ನಾರಾಯಣಸ್ವಾಮಿ, ಮಹೇಶ್ ಇದ್ದರು.

PREV

Recommended Stories

ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಠಲಗೌಡ ತಲೆಬುರುಡೆ ತಂದ ಬಂಗ್ಲೆಗುಡ್ಡೆಯಲ್ಲಿ ಇಂದು ಮಹಜರು?