ಕನ್ನಡಪ್ರಭ ವಾರ್ತೆ ಬೆಂಗಳೂರು
ಜನರ ಬಳಿಗೆ ಸರ್ಕಾರ ಕೊಂಡೊಯ್ಯಲು ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ ಎಂದು ಹೇಳಿದರು.ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ವಿಚಾರವಾಗಿ ಮಾತನಾಡಿ, ‘ನಾನು ಆಂಧ್ರಕ್ಕೆ ಹೋಗಿ ಅವರನ್ನು ಭೇಟಿ ಆಗಲಿಲ್ಲ. ಅವರು ಬೆಂಗಳೂರಿಗೆ ಬಂದು ಹೋಗುವಾಗ ವಿಮಾನ ನಿಲ್ದಾಣದಲ್ಲಿ ಸಿಕ್ಕಿದ್ದರು. ಅವರ ಆರೋಗ್ಯ ವಿಚಾರಿಸಿದೆ. ಇದೊಂದು ಸೌಜನ್ಯದ ಭೇಟಿಯಷ್ಟೇ’ ಎಂದು ಸ್ಪಷ್ಟಪಡಿಸಿದರು.ಜ.4 ರಂದು ಸಭೆ: ಲೋಕಸಭೆ ಚುನಾವಣೆ ಅಭ್ಯರ್ಥಿಗಳ ವಿಚಾರವಾಗಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆ ಸಮೀಕ್ಷೆ ನಡೆಸಬೇಕಿದೆ. ಈ ವಿಚಾರವಾಗಿ ಚರ್ಚಿಸಲು ಜ.4 ರಂದು ದೆಹಲಿಗೆ ಹೋಗುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.ಜತೆಗೆ ಲೋಕಸಭೆ ಚುನಾವಣೆ ಸಿದ್ಧತೆ ವಿಚಾರವಾಗಿ ಜ. 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆ ಸಭೆ ಮಾಡುತ್ತೇವೆ ಎಂದು ಹೇಳಿದರು.