ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ

KannadaprabhaNewsNetwork |  
Published : Nov 07, 2026, 03:15 AM IST
ಸಸಸ | Kannada Prabha

ಸಾರಾಂಶ

ವಿವಿಧ 65 ಇಲಾಖೆಗಳ ಲೋಕಾಯುಕ್ತ ತಂಡ ಸತತವಾಗಿ 2 ದಿನಗಳ ಕಾಲ ಪರಿಶೀಲನೆ ನಡೆಸಿತು

ಹೊಸಪೇಟೆ: ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸುವುದು ಪ್ರತಿಯೊಬ್ಬ ಅಧಿಕಾರಿ, ನೌಕರರ ಕರ್ತವ್ಯವಾಗಿದೆ. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ,ಕಡತ ವಿಲೇವಾರಿಯಲ್ಲಿ ವಿಳಂಬ ಹಾಗೂ ಸಾರ್ವಜನಿಕರ ಕೆಲಸಗಳಿಗೆ ಅಡ್ಡಿಪಡಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಏಕಕಾಲಕ್ಕೆ ನಗರಸಭೆ, ಪ್ರಾದೇಶಿಕ ಸಾರಿಗೆ ಇಲಾಖೆ, ಭೂದಾಖಲೆಗಳ ಇಲಾಖೆ, ತಾಲೂಕು ಕಚೇರಿ, ಹಾಸ್ಟೆಲ್ ಹಾಗೂ ಅಬಕಾರಿ ಇಲಾಖೆ ಕಚೇರಿಗಳಿಗೆ ವಿವಿಧ 65 ಇಲಾಖೆಗಳ ಲೋಕಾಯುಕ್ತ ತಂಡ ಸತತವಾಗಿ 2 ದಿನಗಳ ಕಾಲ ಪರಿಶೀಲನೆ ನಡೆಸಿತು. ಈ ಸಂದರ್ಭದಲ್ಲಿ ಹಲವು ಲೋಪದೋಷ ಕಂಡುಬಂದಿದ್ದು, ಕೆಲವು ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸುಮೋಟೋ ಪ್ರಕರಣ ಕೂಡ ದಾಖಲಿಸಲಾಗುತ್ತದೆ ಎಂದರು.

ಹೊಸಪೇಟೆಯ ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ₹1,590.60 ಲಕ್ಷ ಮುಂಗಡ ಹಣದ ಲೆಕ್ಕ ಹೊಂದಾಣಿಕೆಯಾಗದಿರುವುದು ಪತ್ತೆಯಾಗಿದೆ. ಅಲ್ಲದೇ ಅಲ್ಲದೆ, 777 ವಾಣಿಜ್ಯ ಮಳಿಗೆಗಳಿಂದ ತೆರಿಗೆ ವಸೂಲಿ ಮಾಡದಿರುವುದು ಹಾಗೂ ಕಸ ವಿಲೇವಾರಿಯಲ್ಲಿ ಲೋಪದೋಷಗಳು ಕಂಡುಬಂದಿವೆ. ಈ ಎಲ್ಲ ವಿಚಾರಗಳ ಕುರಿತು ಕೈಗೊಂಡ ಕ್ರಮಗಳ ಸಮಗ್ರ ವರದಿ ಸಲ್ಲಿಸಬೇಕು ಎಂದು ನಗರಸಭೆ ಆಯುಕ್ತರಿಗೆ ಸೂಚಿಸಿದರು.

ಹೊಸಪೇಟೆ ಎಡಿಎಲ್‌ಆರ್ ಕಚೇರಿಯ ಡಿ ಗ್ರೂಪ್ ನೌಕರನ ಮೊಬೈಲ್‌ನಲ್ಲಿ ಲಕ್ಷಾಂತರ ವರ್ಗಾವಣೆಯಾಗಿರುವ ವಿಚಾರ ಪ್ರಸ್ತಾಪಿಸಿದ ಅವರು, ಈ ಹಣದ ವಹಿವಾಟಿನ ಮೂಲ ಮತ್ತು ಉದ್ದೇಶದ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಎಡಿಎಲ್‌ಆರ್‌ಗೆ ಸೂಚಿಸಿದರು.

ಹೊಸಪೇಟೆಯ ನೊಂದಣಾಧಿಕಾರಿಗಳ ಕಚೇರಿಯಲ್ಲಿ ಕಳೆದ ಕೆಲವೇ ತಿಂಗಳಲ್ಲಿ ಪ್ರಥಮ ದರ್ಜೆ ಸಹಾಯಕ ಹಂತ ಹಂತವಾಗಿ ಫೋನ್ ಪೇ ಮೂಲಕ ₹3.29 ಲಕ್ಷ ಹಣ ಪಡೆದಿರುವ ಬಗ್ಗೆ ಗಮನಕ್ಕೆ ಬಂದಿದೆ. ಅವರು, ಯಾವ ಕಾರಣಕ್ಕಾಗಿ ಹಣ ಪಾವತಿಯಾಗಿದೆ ಎಂಬುದನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ವರದಿ ನೀಡಬೇಕು ಎಂದು.

ವಸತಿ ನಿಲಯದಲ್ಲಿ ಸ್ವಚ್ಛತೆ ಇಲ್ಲದೆ ದುರ್ವಾಸನೆ ಹರಡುತ್ತಿದೆ. ವಿದ್ಯಾರ್ಥಿಗಳನ್ನು ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವುದು ಗಂಭೀರ ವಿಚಾರವಾಗಿದೆ. ವಿದ್ಯಾರ್ಥಿಗಳನ್ನು ಪ್ರಾಣಿಗಳಿಗಿಂತ ಕಡೆಯಾಗಿ ನಿರ್ವಹಿಸಲಾಗುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖಾ ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಮಕ್ಕಳ ವಿಚಾರದಲ್ಲಿ ಬದ್ಧತೆ ಮುಖ್ಯ. ಭವಿಷ್ದ ಪೀಳಿಗೆ ನಿಮ್ಮ ಕೈಯಲ್ಲಿದೆ ಸಮರ್ಪಕವಾಗಿ ನಿಭಾಯಿಸಿ ಎಂದು ಸೂಚಿಸಿದರು.

ಲೋಕಾಯುಕ್ತ ಅಪರ ನಿಬಂಧಕ ರಾಜಶೇಖರ್, ಅನ್ಬುಗೌಡ ಪಾಟೀಲ್, ಕಾರ್ಯದರ್ಶಿ ಶ್ರೀನಾಥ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಬಳ್ಳಾರಿ ಡಿಸಿ ನಾಗೇಂದ್ರ ಪ್ರಸಾದ್, ಜಿಪಂ ಸಿಇಓ ಗರಿಮಾ ಪನ್ವಾರ್, ಬಳ್ಳಾರಿ ಸಿಇಒ ಮೊಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಸ್‌. ಜಾಹ್ನವಿ, ಬಳ್ಳಾರಿ ಎಸ್ಪಿ ಸುಮನ್ ಡಿ. ಪನ್ನೇಕರ್ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕಳಪೆ ಜೋಳದ ಬೀಜ ವಿತರಿಸಿದ ಕಂಪನಿ ವಿರುದ್ಧ ಕ್ರಮಕ್ಕೆ ಆಗ್ರಹ